More

    ಜೀವಕೋಶದ ಮೇಲೂ ದುಷ್ಪರಿಣಾಮ

    ಕೂಡ್ಲಿಗಿ: ದುಶ್ಚಟಗಳಿಗೆ ವಿದ್ಯಾರ್ಥಿಗಳು ಬಲಿಯಾಗದೆ ಸ್ವಾಸ್ಥ್ಯ,ಸದೃಢ ಸಮಾಜ ನಿರ್ಮಾಣ ಮಾಡಲು ಮುಂದಾಗಬೇಕು ಎಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಜಿಲ್ಲಾ ಸದಸ್ಯ ಜಿ.ಆರ್.ಸಿದ್ದೇಶ ಹೇಳಿದರು.

    ಇದನ್ನು ಓದಿ: ಗಾಂಧಿ ಚಿಂತನೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯ

    ಪಟ್ಟಣದ ಶ್ರೀ ರಾಘವೇಂದ್ರ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ಮಂಗಳವಾರ ಆಯೋಜಿಸಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯಿಂದ ಏರ್ಪಡಿಸಿದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

    ಯುವಕರು, ವಿದ್ಯಾರ್ಥಿಗಳು ಸೇರಿ ಅನೇಕರು ಕ್ಷಣಿಕ ಸುಖದ ಭ್ರಮೆಯಲ್ಲಿ ಮಾದಕ ವಸ್ತುಗಳ ದಾಸರಾಗಿ ತಮಗೆ ಅರಿವಿಲ್ಲದಂತೆ ತಮ್ಮ ಬದುಕು ನಾಶ ಮಾಡಿಕೊಳ್ಳುತ್ತಿರುವುದು ಸಾಮಾಜಿಕ ದುರಂತ. ಮಾದಕ ವಸ್ತುಗಳ ಸೇವನೆಯಿಂದ ದೇಹದ ಪ್ರತಿಯೊಂದೂ ಜೀವಕೋಶದ ಮೇಲೂ ದುಷ್ಪರಿಣಾಮ ಬೀರುತ್ತದೆ.

    ವಿಶ್ವದಾದ್ಯಂತ ಪ್ರತಿ ವರ್ಷ 5.4 ಮಿಲಿಯನ್ ಜನ ತಂಬಾಕು ಸೇವನೆಯಿಂದ ಮೃತರಾಗುತ್ತಿದ್ದಾರೆ. ಅದರಲ್ಲಿ ಭಾರತದ ಶೇ.30 ಜನ ಮಾದಕ ವಸ್ತುಗಳಿಂದ ವ್ಯಸನಿಗಳಾಗಿರುವುದು ಅತ್ಯಂತ ಕಳವಳದ ಸಂಗತಿಯಾಗಿದೆ ಎಂದರು. ಸ್ವಾಸ್ಥ್ಯ ಸಂಕಲ್ಪದ ಪ್ರತಿಜ್ಞಾ ವಿಧಿಯನ್ನು ಕೂಡ್ಲಿಗಿ ವಲಯ ಮೇಲ್ವಿಚಾರಕಿ ರೇಣುಕಾ ವಿದ್ಯಾರ್ಥಿಗಳಿಗೆ ಬೋಧಿಸಿದರು.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts