More

  ಸ್ಮಶಾನಕ್ಕೆ ಜಾಗ ನೀಡಲು ಗ್ರಾಮಸ್ಥರ ಮೊರೆ !

  ಜಗಳೂರು: ಸ್ಮಶಾನಕ್ಕೆ ಜಾಗ ನೀಡುವಂತೆ ಒತ್ತಾಯಿಸಿ ತಾಲೂಕಿನ ಚಿಕ್ಕಉಜ್ಜಯಿನಿ ಗ್ರಾಮದ ದಲಿತರು ಪಟ್ಟಣದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

  ಗ್ರಾಮದಲ್ಲಿ ಸ್ಮಶಾನ ಜಾಗವಿಲ್ಲದೆ ದಲಿತರು ಜಮೀನುಗಳಲ್ಲಿ ಅಂತ್ಯಕ್ರಿಯೆ ನಡೆಸುತ್ತಿದ್ದೇವೆ. ಈ ವಿಚಾರವಾಗಿ ಅನೇಕ ಬಾರಿ ಗಲಾಟೆಗಳು, ಚರ್ಚೆಗಳು ನಡೆದಿವೆ. ನಮ್ಮ ದನಿ ಯಾರಿಗೂ ಕೇಳಿಸುತ್ತಿಲ್ಲ. ಪರಿಶಿಷ್ಟ ಜಾತಿಯಲ್ಲಿ ಹುಟ್ಟಿದ್ದೇ ತಪ್ಪು ಎನ್ನುವಂತಾಗಿದೆ ಎಂದು ಪ್ರತಿಭಟನಾಕಾರರು ಅಲವತ್ತುಕೊಂಡರು.

  ಮಾದಿಗ ಸಮುದಾಯದ ಅಧ್ಯಕ್ಷ ಜಿ.ಎಚ್. ಶಂಭುಲಿಂಗಪ್ಪ ಮಾತನಾಡಿ, ಸ್ಮಶಾನ ವಿಚಾರವಾಗಿ ಸುಮಾರು ವರ್ಷಗಳಿಂದ ಗ್ರಾಮದಲ್ಲಿ ಬೇಗುದಿ ಇದೆ. ಈ ಹಿಂದೆ ಶವ ಸಂಸ್ಕಾರಕ್ಕೆ ತೆರಳಿದ್ದಾಗ ಕೆಲವರು ತಕರಾರು ಎತ್ತಿದ್ದರು. ಹೀಗಾದರೆ ನಾವು ಎಲ್ಲಿಗೆ ಹೋಗಬೇಕು. ಅಧಿಕಾರಿಗಳು ಪರಿಶೀಲನೆ ನಡೆಸಿ ರುದ್ರಭೂಮಿಗೆ ಜಾಗ ನೀಡಬೇಕು ಎಂದು ಮನವಿ ಮಾಡಿದರು.

   

  ಸಿನಿಮಾ

  ಲೈಫ್‌ಸ್ಟೈಲ್

  ಸಿನಿಮಾ

  Latest Posts