25.9 C
Bengaluru
Wednesday, January 22, 2020

16 ಗ್ರಾಮಗಳಲ್ಲಿ ಸ್ಮಶಾನ ಅಭಿವೃದ್ಧಿ ಅಭಿಯಾನ

Latest News

ಆರೋಪಿ ಆದಿತ್ಯರಾವ್​ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿಲ್ಲ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟಿದ್ದ ಆರೋಪಿ ಆದಿತ್ಯರಾವ್​ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿಕೆ ನೀಡಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ...

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ಮೈಸೂರು: ಮೈಸೂರು ತಾಲೂಕಿನಲ್ಲಿ ಒತ್ತುವರಿಯಾಗಿರುವ ಹಾಗೂ ಮೂಲ ಸೌಕರ್ಯವಿಲ್ಲದೆ ಪಾಳುಬಿದ್ದಿರುವ ಸ್ಮಶಾನಗಳನ್ನು ಅಭಿವೃದ್ಧಿಗೊಳಿಸಿ ಹದ್ದುಬಸ್ತಿನಲ್ಲಿಡುವ ಆಂದೋಲನಕ್ಕೆ ಜಯಪುರದಲ್ಲಿ ಬುಧವಾರ ಚಾಲನೆ ನೀಡಲಾಯಿತು.

ತಾಲೂಕಿನ 16 ಗ್ರಾಮಗಳಲ್ಲಿ ಸ್ಮಶಾನಗಳ ಗಡಿ ಅಳತೆ ಮಾಡಿ ಒತ್ತುವರಿಯನ್ನು ತೆರವುಗೊಳಿಸಲಾಗುತ್ತದೆ. ಬಳಿಕ ಅವುಗಳನ್ನು ಹದ್ದುಬಸ್ತು ಮಾಡಲಾಗುತ್ತದೆ. ತಾಪಂ ಇಒ, ಭೂ ದಾಖಲೆಗಳ ವಿಭಾಗದ ಸಹಾಯಕ ನಿರ್ದೇಶಕ, ಪಿಡಿಒ ಹಾಗೂ ಪೊಲೀಸ್ ನೇತೃತ್ವದಲ್ಲಿ ಈ ಅಭಿಯಾನ ನಡೆಯಲಿದೆ.

ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದ ಶಾಸಕ ಜಿ.ಟಿ.ದೇವೇಗೌಡ, ಚಾಮುಂಡೇಶ್ವರಿ ಕ್ಷೇತ ವ್ಯಾಪ್ತಿಯ ಗ್ರಾಮಗಳಲ್ಲಿ ಸ್ಮಶಾನಕ್ಕೆ ಮಂಜೂರಾಗಿರುವ ಜಮೀನುಗಳನ್ನು ಅಭಿವೃದ್ಧಿ ಪಡಿಸಲಾಗುವುದು. ಕಳಸ್ತವಾಡಿ, ಶ್ಯಾದನಹಳ್ಳಿ, ಲಿಂಗದೇವರಕೊಪ್ಪಲು, ಉದ್ಬೂರು, ಕಲ್ಲಹಳ್ಳಿ, ಕೆಲ್ಲಹಳ್ಳಿ, ಕಡಕೊಳ, ಜಯಪುರ, ಲಕ್ಷ್ಮೀಪುರಂ, ರಮ್ಮನಹಳ್ಳಿ, ಕೂರ್ಗಳ್ಳಿ, ಮೇಗಳಾಪುರ, ಮದ್ದೂರು, ಮಾರ್ಬಳ್ಳಿಹುಂಡಿ ಸೇರಿದಂತೆ 16 ಗ್ರಾಮಗಳಲ್ಲಿ ಸ್ಮಶಾನ ಅಭಿವೃದ್ಧಿ ಅಭಿಯಾನ ನಡೆಯಲಿದೆ ಎಂದು ತಿಳಿಸಿದರು.

ಖಾಸಗಿ ಶಾಲೆ ಮತ್ತು ಕಾನ್ವೆಂಟ್ ಮಾದರಿಯಲ್ಲಿ ಗ್ರಾಮಾಂತರ ಶಾಲೆಗಳು ಮತ್ತು ಅಂಗನವಾಡಿಗಳ ಅಭಿವೃದ್ಧಿಗೆ ಕ್ರಮ ವಹಿಸಲಾಗಿದೆ. ಈಗಾಗಲೇ ಮೈಸೂರು ತಾಲೂಕಿನ ಮೂರು ಗ್ರಾಮಗಳಲ್ಲಿನ ಅಂಗನವಾಡಿವಾಡಿಯನ್ನು ಮಾದರಿಯನ್ನಾಗಿ ಪರಿವರ್ತಿಸಲಾಗಿದೆ. ಗೋಡೆಗಳಿಗೆ ಬಣ್ಣದ ಚಿತ್ತಾರ, ಕಲಿಕಾ ಸಾಮಗ್ರಿ, ಆಟದ ಮೈದಾನ ಮತ್ತು ಸಣ್ಣದಾದ ಉದ್ಯಾನ ನಿರ್ಮಿಸಲಾಗುತ್ತಿದೆ. 28 ಅಂಗನವಾಡಿ ಸೇರಿದಂತೆ ತಾಲೂಕು ವ್ಯಾಪ್ತಿಯ 37 ಗ್ರಾಪಂಗಳಲ್ಲೂ ಮಾದರಿ ಅಂಗನವಾಡಿಯನ್ನು ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು.

ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ಕ್ಷೇತ್ರದ 11 ಗ್ರಾಪಂಗಳಲ್ಲಿ ಘನ ತ್ಯಾಜ್ಯ ನಿರ್ವಹಣೆ ಘಟಕ ಸ್ಥಾಪಿಸಲಾಗುವುದು. ಅದಕ್ಕಾಗಿ ಪ್ರತಿ ಗ್ರಾಪಂಗೆ 20 ಲಕ್ಷ ರೂ. ಬಿಡುಗಡೆಯಾಗಿದೆ. ಹಾರೋಹಳ್ಳಿ, ರಮ್ಮನಹಳ್ಳಿ, ಗುಂಗ್ರಾಲ್ ಛತ್ರ, ಹೊಸಹುಂಡಿ, ಧನಗಳ್ಳಿ, ಜಯಪುರ, ಕಡಕೊಳ, ಮಾರ್ಬಳ್ಳಿ, ಕೂರ್ಗಳ್ಳಿ ಇಲವಾಲ, ದೊಡ್ಡ ಮಾರಗೌಡನಹಳ್ಳಿ ಗ್ರಾಪಂಗಳಲ್ಲಿ ಮೊದಲ ಹಂತದ ಘಟಕ ಸ್ಥಾಪನೆಯಾಗಲಿದೆ ಎಂದು ತಿಳಿಸಿದರು.

ಟಿ.ಕಾಟೂರು, ಗುಂಗ್ರಾಲ್ ಛತ್ರ ಮತ್ತು ಇಲವಾಲ ಗ್ರಾಮದಲ್ಲಿ ಮಾದರಿ ವಿದ್ಯುತ್ ಗ್ರಾಮ ಯೋಜನೆ ಜಾರಿಯಾಗಲಿದೆ. ಸೆಸ್ಕ್‌ನಿಂದ 40 ಲಕ್ಷ ರೂ.ವೆಚ್ಚದಲ್ಲಿ ಹೊಸ ವಿದ್ಯುತ್ ಕಂಬ, ಹೊಸ ಮಾದರಿ ತಂತಿಯನ್ನು ಅಳವಡಿಕೆ ಮಾಡಲಾಗುವುದು ಎಂದರು.
ತಾಪಂ ಸದಸ್ಯ ರಜನಿ, ಜಯಪುರ ಗ್ರಾಪಂ ಅಧ್ಯಕ್ಷ ಬಸವಣ್ಣ, ತಾಪಂ ಇಒ ಎ.ಆರ್.ಕೃಷ್ಣಕುಮಾರ್, ಜಿಪಂ ಎಂಜಿನಿಯರ್ ಜಗದೀಶ್, ಡಿಡಿಎಲ್‌ಆರ್ ರಮ್ಯಾ ಇತರರು ಪಾಲ್ಗೊಂಡಿದ್ದರು.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...