More

  ಚಿಕ್ಕಮಾಗಡಿ ಶಾಲೆ ಶತಮಾನೋತ್ಸವ

  ಹಿರೇಕೆರೂರು: ಶಾಲಾ ಮಕ್ಕಳಿಗಾಗಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಏರ್ಪಡಿಸಿರುವ ಪರೀಕ್ಷಾ ಸಂವಾದ ಕಾರ್ಯಕ್ರಮಕ್ಕೆ ರಾಜ್ಯದ 42 ಮಕ್ಕಳು ಆಯ್ಕೆಯಾಗಿದ್ದು, ಅದರಲ್ಲಿ 27 ಮಕ್ಕಳು ಸರ್ಕಾರಿ ಶಾಲೆ ಮಕ್ಕಳು ಎನ್ನುವುದು ಸಂತಸದ ಸಂಗತಿ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶಕುಮಾರ ಹೇಳಿದರು.

  ತಾಲೂಕಿನ ಚಿಕ್ಕೇರೂರ ಸಮೀಪದ ಚಿಕ್ಕಮಾಗಡಿ ಗ್ರಾಮದಲ್ಲಿ ಶನಿವಾರ ಏರ್ಪಡಿಸಿದ್ದ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಯೋಜನೆಯಡಿ ನಿರ್ವಿುಸಲಾದ ನೂತನ ಶಾಲಾ ಕೊಠಡಿಗಳ ಉದ್ಘಾಟನೆ ಹಾಗೂ ಚಿಕ್ಕಮಾಗಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.

  ಸರ್ಕಾರಿ ಶಾಲೆಗಳು ಹಾಗೂ ಸರ್ಕಾರಿ ಶಿಕ್ಷಕರ ಕಾರ್ಯಕ್ಷಮತೆ ಯಾವುದೇ ಖಾಸಗಿ ಶಾಲೆಗಳಿಗೆ ಕಡಿಮೆ ಇಲ್ಲ ಎಂಬುದನ್ನು ತೋರಿಸಿಕೊಟ್ಟಿವೆ ಎಂದರು.

  ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಮಾತನಾಡಿ, ಅಜ್ಞಾನದಿಂದ ಜ್ಞಾನದೆಡೆಗೆ ನಮ್ಮ ಬದುಕು ಸಾಗಬೇಕು. ಮಾತೃಭಾಷೆ ಕನ್ನಡದಲ್ಲಿ ಕಲಿಯುವುದರಿಂದ ಮಕ್ಕಳು ವಿಷಯಗಳನ್ನು ಬೇಗ ಗ್ರಹಿಸುತ್ತಾರೆ. ಮಕ್ಕಳ ಆಸಕ್ತಿಗೆ ತಕ್ಕಂತೆ ಪ್ರೋತ್ಸಾಹ ನೀಡಿ ವಿದ್ಯಾವಂತರನ್ನಾಗಿ ಮಾಡುವುದು ಹೆತ್ತವರ ಕರ್ತವ್ಯ ಎಂದರು.

  ಕಣ್ವಕುಪ್ಪಿ ಗವಿಮಠದ ಶ್ರೀ ನಾಲ್ವಡಿ ಶಾಂತಲಿಂಗ ಶಿವಾಚಾರ್ಯರು ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.

  ಕಳೆದ ನೂರು ವರ್ಷಗಳಲ್ಲಿ ಶಾಲೆಯಲ್ಲಿ ಸೇವೆ ಸಲ್ಲಿಸಿದ 40ಕ್ಕೂ ಹೆಚ್ಚು ನಿವೃತ್ತ ಮುಖ್ಯಶಿಕ್ಷಕರು, ಶಿಕ್ಷಕರು, ಸಾಧಕರು, ಕ್ರೀಡಾಪಟುಗಳು ಹಾಗೂ ಹಳೆಯ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

  ತಾಪಂ ಅಧ್ಯಕ್ಷ ಆರ್.ಕೆ. ಶಂಭು, ತಾ.ಪಂ. ಉಪಾಧ್ಯಕ್ಷೆ ಪ್ರೇಮಾ ಲೋಕೇಶ, ತಾ.ಪಂ. ಸದಸ್ಯೆ ಶಿಲ್ಪಾ ಮೋನೇಶ, ಗ್ರಾಪಂ. ಅಧ್ಯಕ್ಷ ಶಾಂತಮ್ಮ, ಪುಟ್ಟಸ್ವಾಮಿ ಪಾಟೀಲ, ಗ್ರಾ.ಪಂ. ಸದಸ್ಯರಾದ ರತ್ನಮ್ಮ ಕರ್ಜಿಕಾಯಿ, ರೇಣುಕಮ್ಮ ಮಲ್ಲೇಹಳ್ಳಿ, ಎಸ್​ಡಿಎಂಸಿ ಅಧ್ಯಕ್ಷ ಕೆ.ಎಸ್. ದಿಲೀಪಕುಮಾರ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಿ.ಜಿ. ಗುರುಶಾಂತಪ್ಪ ಹಾಗೂ ಶಾಲಾಭಿವೃದ್ಧಿ ಮೇಲುಸ್ತುವಾರಿ ಸದಸ್ಯರು, ಶಾಲಾ ಮುಖ್ಯಶಿಕ್ಷಕರು, ಶಿಕ್ಷಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಸಿನಿಮಾ

  Latest Posts