More

    ಕೇಂದ್ರದಿಂದ ಮಲತಾಯಿ ಧೋರಣೆ

    ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ನಿರ್ವಹಣೆಗೆ 17,900 ಕೋಟಿ ಹಣವನ್ನು ಪರಿಹಾರ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದರೂ ಇದುವರೆಗೂ ಕೇಂದ್ರದಿಂದ ಸ್ಪಂದನೆ ಸಿಗದಿರುವುದು ದುರ್ದೈವ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಟೀಕಿಸಿದರು.
    ರಾಜ್ಯದಿಂದ 25 ಬಿಜೆಪಿ ಸಂಸದರು ಆಯ್ಕೆಯಾಗಿದ್ದರೂ ಹಾಗೂ 5 ಜನ ಕೇಂದ್ರ ಸಚಿವರಿದ್ದು ಇಲ್ಲಿಯವರೆಗೂ ಹಣ ಬಿಡುಗಡೆ ಮಾಡಿಲ್ಲ. ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಅವರು ರಾಜ್ಯದವರೇ ಆಗಿದ್ದರೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದೆ ಎಂಬ ಕಾರಣಕ್ಕೆ ಮಲತಾಯಿ ಧೋರಣೆ ತೋರುತ್ತಿದೆ. ಈ ವಿಚಾರದಲ್ಲಿ ರಾಜಕಾರಣ ಮಾಡದೇ ಪರಿಹಾರ ಬಿಡುಗಡೆ ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡುತ್ತೇನೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts