More

    ಬರ ಪರಿಹಾರ ಕೆಲಸಕ್ಕೆ ಕೇಂದ್ರ ಸ್ಪಂದಿಸುತ್ತಿಲ್ಲ

    ಕೋಲಾರ: ಜಿಲ್ಲೆಯ ಆರು ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಣೆ ಮಾಡಿದ್ದು, ಜನ, ಜಾನುವಾರುಗಳಿಗೆ ಯಾವುದೇ ರೀತಿ ತೊಂದರೆಯಾಗದಂತೆ ಸರ್ಕಾರದಿಂದ ಎಚ್ಚರವಹಿಸಲಾಗಿದೆ, ಆದರೆ ಬರ ಪರಿಹಾರ ಕೆಲಸಗಳಿಗೆ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.

    ನಗರದಲ್ಲಿ ಬುಧವಾರ ನಡೆದ ಕೆಡಿಪಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಬರ ನಿರ್ವಹಣೆಗೆ ಕೇಂದ್ರ ಸರ್ಕಾರದಿಂದ ಸಹಕಾರ ದೊರೆಯುತ್ತಿಲ್ಲ, ಅನುದಾನ ಕೇಳಿ ಪತ್ರ ಬರೆದು ಮೂರು ತಿಂಗಳು ಕಳೆದರು ಯಾವುದೇ ರೀತಿ ಪ್ರತಿಕ್ರಿಯೆ ನೀಡಿಲ್ಲ ಎಂದು ವಾಗ್ದಾಳಿ ನಡೆಸಿದರು.
    ಬರದ ಕಾಲದಲ್ಲಿ ನರೇಗಾ ಯೋಜನೆಯಡಿ ೧೦೦ ದಿನ ಇದ್ದ ಮಾನವ ದಿನಗಳನ್ನು ೧೫೦ ದಿನಕ್ಕೆ ಹೆಚ್ಚಿಸಲು ಕೇಂದ್ರ ತೀರ್ಮಾನ ಕೈಗೊಳ್ಳುತ್ತಿಲ್ಲ. ರಾಜ್ಯದಲ್ಲಿನ ಸಮಸ್ಯೆಗಳ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದರು ಸ್ಪಂದನೆ ಸಿಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಜಿಲ್ಲೆಯಲ್ಲಿ ೧೮ ವಾರಗಳಿಗೆ ಆಗುವಷ್ಟು ಮೇವು ಲಭ್ಯವಿದೆ. ಸದ್ಯದ ಪರಿಸ್ಥಿತಿಯಲ್ಲಿ ಕುಡಿಯುವ ನೀರಿಗೆ ಏನು ಸಮಸ್ಯೆಯಿಲ್ಲ. ಸಾಮಸ್ಯತ್ಮಕ ಗ್ರಾಮಗಳನ್ನು ಗುರುತಿಸಲಾಗಿದ್ದು, ತುರ್ತು ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಎಸ್ ಡಿ ಆರ್ ಮತ್ತು ಎನ್ ಡಿಆರ್ ಎಫ್ ನಿಯಮಗಳ ಪ್ರಕಾರ ಹೊಸ ಕೊಳವೆಬಾವಿ‌ ಕೊರೆಸಲು ಅವಕಾಶವಿಲ್ಲ, ಅದರೂ ಸಹ ಅಧಿಕಾರಿಗಳು ಸೂಕ್ತ ಕ್ರಮಕೈಗೊಂಡಿದ್ದಾರೆ, ಬರ ಪರಿಸ್ಥಿತಿಯನ್ನು ನಾವು ಸಮರ್ಥವಾಗಿ ನಿಭಾಯಿಸುತ್ತಿದ್ದೇವೆ ಎಂದು ತಿಳಿಸಿದರು.

    ಸಭೆಯಲ್ಲಿ ಇಲಾಖೆಗಳ ಪ್ರಗತಿ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಗಿದೆ. ಸಾಧನೆಯಲ್ಲಿ ಹಿಂದೆ ಉಳಿದಿರುವ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts