18.5 C
Bangalore
Monday, December 16, 2019

ಕಸ್ತೂರಿರಂಗನ್ ವರದಿ ಅಧಿಸೂಚನೆಗೆ ಕೇಂದ್ರ ಸಿದ್ಧತೆ

Latest News

‘ದಿಶಾ ರೈಡ್ ಆಂಡ್ ವಾಕ್’ ಜಾಗೃತಿ ಜಾಥಾ

ಹುಬ್ಬಳ್ಳಿ: ಹುಬ್ಬಳ್ಳಿ ಬೈಸಿಕಲ್ ಕ್ಲಬ್ ಆಶ್ರಯದಲ್ಲಿ ಇಲ್ಲಿನ ತೋಳನಕೆರೆಯಿಂದ ಬಿವಿಬಿ ಇಂಜಿನಿಯರಿಂಗ್ ಕಾಲೇಜ್​ವರೆಗೆ ಭಾನುವಾರ ಬೆಳಗ್ಗೆ ‘ದಿಶಾ ರೈಡ್ ಆಂಡ್ ವಾಕ್’ ಘೋಷಣೆಯೊಂದಿಗೆ...

‘ಆಟೋ ರಿಕ್ಷಾ ರನ್’

ಹುಬ್ಬಳ್ಳಿ: ಕನ್ಯಾಕುಮಾರಿಯಿಂದ ಅಹಮದಾಬಾದ್​ವರೆಗೆ ‘ಆಟೋ ರಿಕ್ಷಾ ರನ್’ ಹಮ್ಮಿಕೊಂಡಿರುವ ಇಂಗ್ಲೆಂಡಿನ ‘ಸೇವಾ ಯುಕೆ’ ಸಂಸ್ಥೆಯ ಅನಿವಾಸಿ ಭಾರತೀಯರು ಭಾನುವಾರ ಬೆಳಗ್ಗೆ ಹುಬ್ಬಳ್ಳಿಯಿಂದ ಗೋವಾದ...

ಗೀತೆ ಅಧ್ಯಯನದಿಂದ ಜೀವನ ಸುಖಮಯ

ಧಾರವಾಡ: ಗೀತೆ ದೀಪ ಸ್ವರೂಪ. ಅಜ್ಞಾನದ ಅಂಧಕಾರವನ್ನು ಕಳೆದು ಸುಜ್ಞಾನವನ್ನು ನೀಡುವುದು. ಸತ್ಸಂಗ ಮತ್ತು ಜ್ಯೋತಿ ಎರಡೂ ನಮ್ಮ ಜೀವನದಲ್ಲಿ ಪ್ರಧಾನ ಪಾತ್ರ...

ಸ್ವಾಮಿಯೇ ಶರಣಂ ಅಯ್ಯಪ್ಪ

ಹುಬ್ಬಳ್ಳಿ: ನಗರದ ಶಿರೂರು ಪಾರ್ಕ್ ಅಯ್ಯಪ್ಪ ಸ್ವಾಮಿ ದೇಗುಲದ ಮಾಲಾಧಾರಿಗಳು ಹಾಗೂ ಅಯ್ಯಪ್ಪ ಭಕ್ತ ವೃಂದ ಟ್ರಸ್ಟ್ ವತಿಯಿಂದ ನಗರದಲ್ಲಿ ಭಾನುವಾರ ಅಯ್ಯಪ್ಪ...

ದೇಶದಲ್ಲಿ ಹೆಚ್ಚುತ್ತಿದೆ ನಿರುದ್ಯೋಗ ಸಮಸ್ಯೆ

ಮೈಸೂರು: ಬಂಡವಾಳಶಾಯಿಗಳ ಪರ ಆಡಳಿತ ನಡೆಸುತ್ತಿರುವ ಸರ್ಕಾರಗಳು, ದುಡಿಯುವ ವರ್ಗವನ್ನು ಕಡೆಗಣಿಸಿವೆ. ಇದರಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು, ಸಾಕಷ್ಟು ಕಾರ್ಖಾನೆಗಳು ಬಾಗಿಲು...

– ವಿಜಯವಾಣಿ ಸುದ್ದಿಜಾಲ ಮಂಗಳೂರು
ಕಸ್ತೂರಿರಂಗನ್ ಸಮಿತಿ ಶಿಫಾರಸು ಮಾಡಿರುವ ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ಪ್ರದೇಶ (ಇಎಸ್‌ಎ) ಕುರಿತು ಕೇಂದ್ರ ಸರ್ಕಾರ ಮತ್ತೆ ಹೊಸದಾಗಿ ಕರಡು ಅಧಿಸೂಚನೆ ಹೊರಡಿಸಲು ಸಿದ್ಧತೆ ನಡೆಸಿರುವಂತೆಯೇ ಕರ್ನಾಟಕ ಸರ್ಕಾರ ವಿರೋಧಿ ನಿಲುವು ತಾಳಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ರಾಜ್ಯ ಈಗಾಗಲೇ 22 ಸಾವಿರ ಚದರ ಕಿ.ಮೀ. ಅರಣ್ಯವನ್ನು ಪಶ್ಚಿಮಘಟ್ಟದಲ್ಲಿ ಬೇರೆಬೇರೆ ಕಾಯ್ದೆ-ಹೆಸರುಗಳಲ್ಲಿ ಸಂರಕ್ಷಿಸುತ್ತಿದೆ. ರಾಜ್ಯದ ಜನರ ಹಿತ ಮತ್ತು ಆರ್ಥಿಕತೆಯನ್ನು ಗಮನಿಸಿ, ಮತ್ತೆ ಸೂಕ್ಷ್ಮ ಪ್ರದೇಶವೆಂದು ಗುರುತಿಸಿ ರಕ್ಷಿಸುವ ಅಗತ್ಯವಿಲ್ಲ. ರಾಜ್ಯಕ್ಕೆ ಇಎಸ್‌ಎ ಬೇಡವೇ ಬೇಡ, ನಾವು ಒಪ್ಪಲು ಸಿದ್ಧರಿಲ್ಲ ಎಂದೇ ರಾಜ್ಯ ಸರ್ಕಾರ ವಾದಿಸುತ್ತಿದೆ.

2014ರಲ್ಲಿ ಕೇಂದ್ರ ಸರ್ಕಾರ ಹೊರಡಿಸಿದ್ದ ಕರಡು ಅಧಿಸೂಚನೆ ಅವಧಿ ಆಗಸ್ಟ್ ತಿಂಗಳಲ್ಲೇ ಮಾನ್ಯತೆ ಕಳೆದುಕೊಂಡಿದೆ. ಹೀಗಾಗಿ ಕೆಲವು ಬದಲಾವಣೆಗಳೊಂದಿಗೆ ಕೇಂದ್ರ ಸರ್ಕಾರ ಹೊಸದಾಗಿ ಕರಡು ಅಧಿಸೂಚನೆ ಹೊರಡಿಸಲು ತಯಾರಿ ನಡೆಸಿದೆ. ಕರ್ನಾಟಕ ಹೊರತುಪಡಿಸಿ ಇತರ ಐದು ರಾಜ್ಯಗಳಾದ ಕೇರಳ, ಗುಜರಾತ್, ತಮಿಳುನಾಡು, ಗೋವಾ, ಮಹಾರಾಷ್ಟ್ರ ಸಣ್ಣಪುಟ್ಟ ಬದಲಾವಣೆಗಳೊಂದಿಗೆ ಈ ಬಾರಿ ಒಪ್ಪಿಗೆ ಸೂಚಿಸಿರುವುದರಿಂದ ಕೇಂದ್ರ ಸರ್ಕಾರದ ಹಾದಿ ಬಹುತೇಕ ಸುಗಮವಾಗಿದೆ.

ಮುಂದೇನು?: ಈ ಹಿಂದಿನ ಕರಡು ಅಧಿಸೂಚನೆಯಲ್ಲಿ ಬದಲಾವಣೆ ಮಾಡದಂತೆ ಈಗಾಗಲೇ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್‌ಜಿಟಿ) ಕೇಂದ್ರ ಪರಿಸರ ಸಚಿವಾಲಯಕ್ಕೆ ನಿರ್ದೇಶಿಸಿರುವುದನ್ನು ಕೂಡ ಇಲ್ಲಿ ಗಮನಿಸಬೇಕಿದೆ.
‘ಇತರ ಐದು ರಾಜ್ಯಗಳು ಸಣ್ಣಪುಟ್ಟ ತಿದ್ದುಪಡಿಯೊಂದಿಗೆ ಒಪ್ಪಿಗೆ ಸೂಚಿಸಿವೆ. ಆದರೆ ಕರ್ನಾಟಕ ಇಎಸ್‌ಎ ಪರಿಕಲ್ಪನೆಯನ್ನೇ ಒಪ್ಪಲು ತಯಾರಿಲ್ಲ. ಇಎಸ್‌ಎ ಕುರಿತ ಅಧಿಸೂಚನೆಯನ್ನು ಕರ್ನಾಟಕ ಸರ್ಕಾರ ಒಪ್ಪದಿದ್ದರೆ ನಾವು ಎನ್‌ಜಿಟಿ ಮೊರೆ ಹೋಗಬೇಕಾಗಬಹುದು’ ಎನ್ನುತ್ತಾರೆ ಕೇಂದ್ರ ಪರಿಸರ ಇಲಾಖೆಯ ಅಧಿಕಾರಿಯೊಬ್ಬರು.
ಇಎಸ್‌ಎ ಅಧಿಸೂಚನೆ ಜಾರಿಯಾದರೆ ರೆಡ್ ಕ್ಯಾಟಗರಿಯ ಎಲ್ಲ ಕೈಗಾರಿಕೆಗಳಿಗೆ ನಿರ್ಬಂಧ ಹೇರಲಾಗುತ್ತದೆ. ಆದರೆ ಅದನ್ನು ಸಾವಿರಾರು ಮಂದಿ ನಂಬಿಕೊಂಡಿದ್ದಾರೆ. ಆ ಭಾಗದಲ್ಲಿ ರಸ್ತೆ ಸಹಿತ ನಿರ್ಮಾಣ ಕಾಮಗಾರಿಗಳಿಗೆ ಅವಕಾಶ ಇರುವುದಿಲ್ಲ. ಇದನ್ನು ಹೇಗೆ ಒಪ್ಪಿಕೊಳ್ಳಲಿ ಎನ್ನುವುದು ರಾಜ್ಯದ ಪ್ರಶ್ನೆ. ರಾಜ್ಯದ ಹಲವು ಸಚಿವರು ಗಣಿಗಾರಿಕೆ, ಕೈಗಾರಿಕೆಗಳನ್ನು ಹೊಂದಿದ್ದಾರೆ, ಇಎಸ್‌ಎ ಜಾರಿಯಾದರೆ ಅವರಿಗೆ ತೊಂದರೆಯಾಗುತ್ತದೆ, ಹಾಗಾಗಿ ವಿರೋಧಿಸುತ್ತಿದ್ದಾರೆ ಎನ್ನುತ್ತಾರೆ ಹೆಸರು ಹೇಳಲಿಚ್ಛಿಸದ ಅಧಿಕಾರಿಯೊಬ್ಬರು.

ಎಷ್ಟಿವೆ ಗ್ರಾಮಗಳು?:  ಪಶ್ಚಿಮಘಟ್ಟದ ಶೇ.75 ಭಾಗವನ್ನು ಇಎಸ್‌ಎ ಎಂದು ಘೋಷಿಸಬೇಕೆಂದು ಮಾಧವ ಗಾಡ್ಗೀಲ್ ಸಮಿತಿ ಹೇಳಿತ್ತು. ಇದನ್ನು ಕೇಂದ್ರ ತಿರಸ್ಕರಿಸಿದ ಬಳಿಕ ಬಾಹ್ಯಾಕಾಶ ವಿಜ್ಞಾನಿ ಕೆ.ಕಸ್ತೂರಿರಂಗನ್ ನೇತೃತ್ವದ ಸಮಿತಿಯು ಶೇ.37 ಭಾಗವನ್ನು ಇಎಸ್‌ಎ ಎಂದು ನಿಗದಿಪಡಿಸಲು ವರದಿ ಸಲ್ಲಿಸಿತ್ತು. ರಾಜ್ಯದ 10 ಜಿಲ್ಲೆಗಳ 1,576 ಗ್ರಾಮಗಳೂ ಸೇರಿದಂತೆ 20,668 ಚದರ ಕಿ.ಮೀ. ಪರಿಸರ ಸೂಕ್ಷ್ಮ ವಲಯ ಪ್ರದೇಶದ ವ್ಯಾಪ್ತಿ ಹೊಂದಿದೆ. ಬೆಳ್ತಂಗಡಿ ತಾಲೂಕಿನ 17, ಪುತ್ತೂರು 10, ಸುಳ್ಯ 16 ಸಹಿತ ದ.ಕ. ಜಿಲ್ಲೆಯ 43 ಗ್ರಾಮಗಳು, ಕಾರ್ಕಳ ತಾಲೂಕಿನ 13, ಕುಂದಾಪುರದ 22 ಸಹಿತ ಉಡುಪಿ ಜಿಲ್ಲೆಯಲ್ಲಿ 35 ಗ್ರಾಮಗಳು ಇದರಲ್ಲಿ ಸೇರಿವೆ.

ದುರಂತಗಳ ಬಳಿಕವೂ..?! ಕೇರಳ, ಕೊಡಗು ಸಹಿತ ಶಿರಾಡಿ-ಚಾರ್ಮಾಡಿ-ಸಂಪಾಜೆ ಘಾಟಿ ಪ್ರದೇಶ, ಪಶ್ಚಿಮಘಟ್ಟದ ತಪ್ಪಲು ಪ್ರದೇಶಗಳಲ್ಲಿ ಈ ಬಾರಿ ಸಂಭವಿಸಿದ ಪ್ರಾಕೃತಿಕ ವಿಕೋಪಗಳ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟ ರಕ್ಷಣೆ ಕುರಿತ ಕಸ್ತೂರಿರಂಗನ್ ವರದಿ ಜಾರಿಗೆ ಪರಿಸರ ಪ್ರೇಮಿಗಳ ಸಹಿತ ಹಲವು ಕ್ಷೇತ್ರಗಳಿಂದ ಬೆಂಬಲ ವ್ಯಕ್ತವಾಗಿತ್ತು. ಸ್ವತಃ ಸರ್ಕಾರವೂ ಪರಿಸರ ರಕ್ಷಣೆಗೆ ಆದ್ಯತೆ ನೀಡುವ ಮಾತುಗಳನ್ನಾಡಿತ್ತು. ಆದರೆ ಪಶ್ಚಿಮಘಟ್ಟ ಇಎಸ್‌ಎ ಕುರಿತು ಹಿಂದಿನ ನಿಲುವಿಗೆ ಪಟ್ಟು ಹಿಡಿದಿರುವುದು ಪರಿಸರ ವಾದಿಗಳನ್ನು ಕೆರಳಿಸಿದೆ.

ಅಂತಿಮ ಅಧಿಸೂಚನೆ ಸದ್ಯಕ್ಕಿಲ್ಲ: ಕೇಂದ್ರ ಸರ್ಕಾರ ಮೊದಲ ಕರಡು ಅಧಿಸೂಚನೆ ಹೊರಡಿಸಿದ್ದು 2014ರ ಮಾ.10ರಂದು. ನಂತರ ಎರಡನೇ ಕರಡು ಅಧಿಸೂಚನೆಯನ್ನು 2015ರ ಸೆ.4ರಂದು ಹೊರಡಿಸಿತ್ತು. ಮೂರನೇ ಕರಡು ಅಧಿಸೂಚನೆಯನ್ನು 2017ರ ಫೆ.27ರಂದು ಹೊರಡಿಸಿದೆ. ಇವೆಲ್ಲವನ್ನೂ ಕರ್ನಾಟಕ ಸರ್ಕಾರ ತಿರಸ್ಕರಿಸಿದೆ. ಈಗ ಮತ್ತೊಮ್ಮೆ ಕರಡು ಅಧಿಸೂಚನೆ ಸಿದ್ಧತೆ ನಡೆದಿದೆ. ಇಷ್ಟಾದರೂ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸುತ್ತಿಲ್ಲ. ಜನವಿರೋಧ ಕಟ್ಟಿಕೊಳ್ಳುವ ಬದಲು ಹೆಚ್ಚುಕಡಿಮೆ 545 ದಿನಗಳ ಗಡುವು ಸಮೀಪಿಸುತ್ತಿದ್ದಂತೆ ಹೊಸ ಕರಡು ಅಧಿಸೂಚನೆ ಹೊರಡಿಸುತ್ತಿದೆ. ಲೋಕಸಭಾ ಚುನಾವಣೆ ಹತ್ತಿರದಲ್ಲೇ ಇರುವುದರಿಂದ ಕೇಂದ್ರ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿ ಜನರ ಕೋಪಕ್ಕೆ ತುತ್ತಾಗುವ ಅಪಾಯವನ್ನು ಮೈಮೇಲೆ ಎಳೆದುಕೊಳ್ಳುವ ಸಾಧ್ಯತೆಗಳಿಲ್ಲ.

ಮಾಧವ ಗಾಡ್ಗೀಳ್ ಅವರ ವರದಿ ನಿಜಕ್ಕೂ ಪಶ್ಚಿಮ ಘಟ್ಟಗಳನ್ನು ಉಳಿಸುವ ನಿಜವಾದ ಕಾಳಜಿ ಹೊಂದಿತ್ತು. ಕಸ್ತೂರಿ ರಂಗನ್ ಪರಿಸರ ತಜ್ಞರಲ್ಲ; ಬದಲಿಗೆ ಬಾಹ್ಯಾಕಾಶ ವಿಜ್ಞಾನಿ. ಅವರು ನಕ್ಷೆಯನ್ನಷ್ಟೇ ಅಧ್ಯಯನ ಮಾಡಿದ್ದು ಹೊರತು ಪರಿಸರ, ಅರಣ್ಯವನ್ನಲ್ಲ. ಕಸ್ತೂರಿ ರಂಗನ್ ವರದಿ ಜಾರಿಯಾದರೆ ಪಶ್ಚಿಮ ಘಟ್ಟ ಉಳಿಯುತ್ತದೆ ಎನ್ನುವುದೇ ಸಂಶಯ. ರಾಜ್ಯ, ಕೇಂದ್ರ ಎರಡೂ ಸರ್ಕಾರಗಳಿಗೂ ಪಶ್ಚಿಮ ಘಟ್ಟ ಬೇಡ. ನಿಜಕ್ಕೂ ಕಾಳಜಿ ಇದ್ದಿದ್ದರೆ ಸರ್ಕಾರ ಗಾಡ್ಗೀಳ್ ವರದಿ ಜಾರಿಗೊಳಿಸಲು ಮುಂದಾಗಬೇಕಿತ್ತು.
– ಶಶಿಧರ ಶೆಟ್ಟಿ, ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟ

Stay connected

278,753FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...