More

    ಶ್ವೇತಪತ್ರ ಹೊರಡಿಸಿದರೆ ಕೇಂದ್ರ ಉತ್ತರ

    ಶಿವಮೊಗ್ಗ: ತೆರಿಗೆ ಹಂಚಿಕೆ ವಿಚಾರದಲ್ಲಿ ರಾಜ್ಯ ಸರ್ಕಾರ ಶ್ವೇತಪತ್ರ ಹೊರಡಿಸಿದರೆ ಅದಕ್ಕೆ ಕೇಂದ್ರ ಸರ್ಕಾರ ತಕ್ಕ ಉತ್ತರ ನೀಡುತ್ತದೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದರು.

    ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ತೆರಿಗೆ ಹಂಚಿಕೆ ವಿಚಾರದಲ್ಲಿ ನೂರು ಸುಳ್ಳನ್ನು ಹೇಳ್ಳುತ್ತ ಸತ್ಯ ಆಗುತ್ತದೆ ಎಂದು ನಂಬಿದ್ದಾರೆ. ಆದರೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಿಎಂ ಹೇಳುತ್ತಿರುವುದು ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ ಎಂದರು.
    ತೆರಿಗೆ ಕೇಳುವುದಕ್ಕೆ ನಮ್ಮ ಅಭ್ಯಂತರವಿಲ್ಲ. ಆದರೆ ತೆರಿಗೆ ನೆಪದಲ್ಲಿ ದೇಶ ವಿಭಜನೆ ಮಾಡುವುದಕ್ಕೆ ವಿರೋಧವಿದೆ. ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ಎಸಗಲಾಗುತ್ತಿದೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಯೇ ಸುಳ್ಳು ಎಂದು ಕೇಂದ್ರದ ಅರ್ಥ ಸಚಿವೆ ನಿರ್ಮಲಾ ಸೀತಾರಾಮನ್ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ತೆರಿಗೆ ಹಂಚಿಕೆ ವಿಚಾರದಲ್ಲಿ ಸಿಎಂ ಶ್ವೇತಪತ್ರ ಹೊರಡಿಸಿದ್ದೇ ಆದಲ್ಲಿ ಸಿದ್ದರಾಮಯ್ಯ ಅವರ ನಿಜ ಬಣ್ಣ ಬಹಿರಂಗಗೊಳ್ಳಲಿದೆ.ನಾನು ಸಾಕಷ್ಟು ಹೇಳಿಕೆಗಳನ್ನು ನೀಡಿದ್ದೇನೆ. ಹೋರಾಟಗಳಲ್ಲಿ ಭಾಗವಹಿಸಿದ್ದೇನೆ. ಆದರೆ ನಾನು ಒಂದೇ ಒಂದು ರೂ. ದಂಡ ಕಟ್ಟಿಲ್ಲ ಅಥವಾ ಜೈಲಿಗೆ ಹೋಗಿಬಂದಿಲ್ಲ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts