More

    ಶಿಕ್ಷಣಕ್ಕೆ ಬೇಕಿದೆ ಹೆಚ್ಚಿನ ಒತ್ತು; ತಜ್ಞರ ಅಭಿಪ್ರಾಯ

    ಶಿಕ್ಷಣಕ್ಕೆ ಬೇಕಿದೆ ಹೆಚ್ಚಿನ ಒತ್ತು; ತಜ್ಞರ ಅಭಿಪ್ರಾಯಕೇಂದ್ರ ಸರ್ಕಾರದ ವಿತ್ತಮಂತ್ರಿ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಈ ಸಾಲಿನ ಬಜೆಟ್​ನಲ್ಲಿ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಅನೇಕ ಉದಾತ್ತ ತೀರ್ವನಗಳನ್ನು ಕೈಗೊಂಡಿದೆ. ಹೀಗಿದ್ದರೂ ಕೂಡ ಶಿಕ್ಷಣ ಕ್ಷೇತ್ರಕ್ಕೆ ನೀಡಿರುವ ಆದ್ಯತೆ ಸಾಲದು, ಇನ್ನಷ್ಟು ಅಗತ್ಯವಿತ್ತು ಎಂದು ಹೇಳಲೇಬೇಕಾಗಿದೆ. ರಾಷ್ಟ್ರೀಯ ನೂತನ ಶಿಕ್ಷಣ ನೀತಿ ಅನುಷ್ಠಾನ ಮತ್ತು ವಿದೇಶಿ ವಿಶ್ವವಿದ್ಯಾಲಯಗಳ ಆರಂಭ ಸೇರಿ ಹಲವು ವಿಷಯಗಳನ್ನು ಮುಂಗಡಪತ್ರದಲ್ಲಿ ಪ್ರಸ್ತಾಪವನ್ನೇ ಮಾಡಿಲ್ಲ. ಪ್ರಮುಖವಾಗಿ 157 ನರ್ಸಿಂಗ್ ಕಾಲೇಜುಗಳ ಆರಂಭ, ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಏಕಲವ್ಯ ವಸತಿ ಶಾಲೆಗಳಲ್ಲಿ 38 ಸಾವಿರ ಶಿಕ್ಷಕರ ನೇಮಕ, ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಲ್ಯಾಬ್ ಮತ್ತು ಕೃತಕ ಬುದ್ಧಿಮತ್ತೆಗೆ ಆದ್ಯತೆ ನೀಡಿರುವುದು ಸ್ವಾಗತಾರ್ಹವಾದ ಕ್ರಮವಾಗಿದೆ.

    ಅದೇ ರೀತಿ ಶಿಕ್ಷಕರಿಗೆ ತರಬೇತಿ ಮತ್ತು ಡಿಜಿಟಲ್ ಗ್ರಂಥಾಲಯ ಆರಂಭ ಮಾಡುತ್ತಿರುವುದು ಕೂಡ ಉತ್ತಮ ಯೋಜನೆಗಳಾಗಿವೆ. ಇದರ ಜತೆಗೆ ಕೇಂದ್ರ ಸರ್ಕಾರದ ಮಹತ್ವಕಾಂಕ್ಷೆಯ ನೂತನ ಶಿಕ್ಷಣ ನೀತಿ (ಎನ್​ಇಪಿ)ಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಯಾವ ರೀತಿಯಲ್ಲಿ ಆದ್ಯತೆ ನೀಡಲಾಗುತ್ತದೆ ಎಂಬ ಅಂಶವನ್ನೂ ಹೇಳಬೇಕಿತ್ತು. ಇನ್ನು ಉನ್ನತ ಶಿಕ್ಷಣ ವಲಯದಲ್ಲಿ ವಿದೇಶಿ ವಿಶ್ವವಿದ್ಯಾಲಯಗಳು ಬಂದು ನೆಲೆಸುತ್ತಿವೆ. ಇದನ್ನು ಗಮನಿಸಿದರೆ ಜಾಗತಿಕವಾಗಿ ದೇಶದಲ್ಲಿನ ಶೈಕ್ಷಣಿಕ ವ್ಯವಸ್ಥೆ ವೇಗವಾಗಿ ಮುನ್ನುಗ್ಗುತ್ತಿದೆ ಎಂದು ಹೇಳಬಹುದಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಮತ್ತಷ್ಟು ಒತ್ತು ನೀಡಿದ್ದರೆ ಚೆನ್ನಾಗಿರುತ್ತಿತ್ತು. ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಅದೇರೀತಿ ಮಧ್ಯಮ ಮತ್ತು ಹಿಂದುಳಿದ ವರ್ಗದ ಮಕ್ಕಳ ಶಿಕ್ಷಣಕ್ಕೆ ಒತ್ತು ಕೊಡಲಾಗಿದೆ. ಈ ಮೂಲಕ ಶಿಕ್ಷಣ ಕ್ಷೇತ್ರದ ಬಜೆಟ್​ನಲ್ಲಿ ಸಮತೋಲನ ಕಾಯ್ದುಕೊಳ್ಳಲಾಗಿದೆ. ಸಾರ್ವಜನಿಕ ಮತ್ತು ಖಾಸಗಿ ವೈದ್ಯಕೀಯ ಕಾಲೇಜು ಅಧ್ಯಾಪಕರು ಮತ್ತು ಖಾಸಗಿ ವಲಯದ ಈ ತಂಡಗಳು ಸಂಶೋಧನೆ ಮತ್ತು ನಾವೀನ್ಯತೆಯನ್ನು ಪೋ›ತ್ಸಾಹಿಸಲು ಸಂಶೋಧನೆಗೆ ಲಭ್ಯವಾಗುವಂತೆ ಮಾಡಿದೆ.

    ಔಷಧೀಯ ಕ್ಷೇತ್ರದಲ್ಲಿ ಸಂಶೋಧನೆ ಮತ್ತು ನಾವೀನ್ಯತೆಗಳನ್ನು ಉತ್ತೇಜಿಸಲು ಹೊಸ ಕಾರ್ಯಕ್ರಮವನ್ನು ಶ್ರೇಷ್ಠತೆಯ ಕೇಂದ್ರಗಳ ಮೂಲಕ ತೆರೆಯುತ್ತಿದೆ. ನಿರ್ದಿಷ್ಟ ಆದ್ಯತೆಯ ಕ್ಷೇತ್ರಗಳಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ಹೂಡಿಕೆ ಮಾಡಲು ಉದ್ಯಮವನ್ನು ಪೋ›ತ್ಸಾಹಿಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಭವಿಷ್ಯದ ವೈದ್ಯಕೀಯ ತಂತ್ರಜ್ಞಾನಗಳು, ಉನ್ನತ-ಮಟ್ಟದ ಉತ್ಪಾದನೆ ಮತ್ತು ಸಂಶೋಧನೆಗಾಗಿ ನುರಿತ ಮಾನವಶಕ್ತಿಯ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ವೈದ್ಯಕೀಯ ಸಾಧನಗಳಿಗಾಗಿ ಮೀಸಲಾದ ಬಹುಶಿಸ್ತೀಯ ಕೋರ್ಸ್​ಗಳನ್ನು ಅಸ್ತಿತ್ವದಲ್ಲಿರುವ ಸಂಸ್ಥೆಗಳಲ್ಲಿ ಬೆಂಬಲಿಸುತ್ತಿರುವುದು ಆಶಾದಾಯಕವಾಗಿದೆ.

    ಮಿತಭಾಷಿ ನಿರ್ಮಲಾ: ಬಜೆಟ್​ ಮಂಡನೆಯಲ್ಲಿ ಕ್ರಮೇಣ ಕಡಿಮೆಯಾದ ಮಾತು; ಯಾವಾಗ ಎಷ್ಟು ಮಾತು?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts