More

    ಜನವರಿ 22 ರಂದು ಅರ್ಧ ದಿನ ರಜೆ ಘೋಷಿಸಿದ ಕೇಂದ್ರ ಸರ್ಕಾರ

    ಅಯೋಧ್ಯೆ: ಕೇಂದ್ರ ಸರ್ಕಾರದ ಸಿಬ್ಬಂದಿ ಸಚಿವಾಲಯ ಹೊರಡಿಸಿದ ಆದೇಶದ ಪ್ರಕಾರ, ನೌಕರರ ಭಾವನೆ ಮತ್ತು ಅವರ ಕೋರಿಕೆಗಳನ್ನು ಗಮನದಲ್ಲಿಟ್ಟುಕೊಂಡು ಜನವರಿ 22 ರಂದು ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭದ ಸಂದರ್ಭದಲ್ಲಿ ಭಾರತದಾದ್ಯಂತ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳು ಹಾಗೂ ಸಂಸ್ಥೆಗಳಿಗೆ ಮಧ್ಯಾಹ್ನ 2:30 ರವರೆಗೆ ಅರ್ಧ ದಿನ ಕ್ಲೋಸ್​​​ ಮಾಡಲು ಕೇಂದ್ರ ಸರ್ಕಾರ ಘೋಷಿಸಿದೆ.

    ರಾಮ ಮಂದಿರದ ಪ್ರಾಣ ಪ್ರತಿಷ್ಠೆ ಹಿನ್ನೆಲೆಯಲ್ಲಿ ಈಗಾಗಲೇ ಹಲವು ರಾಜ್ಯಗಳು ರಜೆ ಘೋಷಣೆ ಮಾಡಿವೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಅವರ ನಿರ್ದೇಶನದಂತೆ ಜನವರಿ 22 ರಂದು ಉತ್ತರ ಪ್ರದೇಶದ ಶಿಕ್ಷಣ ಸಂಸ್ಥೆಗಳು ರಾಮಮಂದಿರ ಪ್ರಾಣ ಪ್ರತಿಷ್ಠೆ ಸಮಾರಂಭದ ದೃಷ್ಟಿಯಿಂದ ಮುಚ್ಚಿರುತ್ತವೆ ಎಂದು ವರದಿಯಾಗಿದೆ. ಮಧ್ಯಪ್ರದೇಶದಲ್ಲಿ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಜನವರಿ 22 ರಂದು ಶಾಲಾ ರಜೆ ಎಂದು ಘೋಷಿಸಿದ್ದಾರೆ, ಜನರು ಈ ದಿನವನ್ನು ಹಬ್ಬದಂತೆ ಆಚರಿಸಲು ಕರೆ ನೀಡಿದ್ದಾರೆ.

    ಗೋವಾ ಸರ್ಕಾರವು ಜನವರಿ 22 ರಂದು ಸರ್ಕಾರಿ ನೌಕರರು ಮತ್ತು ಶಾಲೆಗಳಿಗೆ ರಜೆ ಘೋಷಿಸಿದೆ. ಶಾಲೆಗಳೊಂದಿಗೆ ಸರ್ಕಾರಿ ನೌಕರರಿಗೆ ಮಾತ್ರ ಸಾರ್ವಜನಿಕ ರಜೆ ಇರುತ್ತದೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

    ಛತ್ತೀಸ್‌ ಗಢ ಅಯೋಧ್ಯೆಯ ರಾಮಮಂದಿರದಲ್ಲಿ ನೂತನ ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ಆಚರಿಸಲು ಛತ್ತೀಸ್‌ ಗಢ ಸರ್ಕಾರವು ಎಲ್ಲಾ ರಾಜ್ಯ ಸರ್ಕಾರಿ ಶಾಲಾ-ಕಾಲೇಜುಗಳಿಗೆ ಜನವರಿ 22 ರಂದು ರಜೆ ಘೋಷಿಸಿದೆ. ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಅವರು ಎಕ್ಸ್​ ನಲ್ಲಿ ಬರೆದುಕೊಂಡಿದ್ದಾರೆ. ಹರ್ಯಾಣ ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಹರ್ಯಾಣ ಸರ್ಕಾರ ಜನವರಿ 22 ರಂದು ಶಾಲೆಗಳನ್ನು ಮುಚ್ಚುವುದಾಗಿ ಘೋಷಿಸಿದೆ. 

    ರಾಮಲಲ್ಲಾ ದರ್ಶನಕ್ಕೆ ಹೋಟೆಲ್ ಬುಕ್ ಮಾಡುವ ಅಗತ್ಯವಿಲ್ಲ, ಈ ವಿಶೇಷ ವ್ಯವಸ್ಥೆ ಲಭ್ಯ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts