More

    ರೈತ ವಿರೋಧಿ ಕಾಯ್ದೆಗಳ ಹಿಂಪಡೆಯಿರಿ

    ಶಿವಮೊಗ್ಗ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ರೈತ ವಿರೋಧಿ ಮಸೂದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್​ನಿಂದ ಗುರುವಾರ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.

    ನಗರದ ಶಿವಪ್ಪ ನಾಯಕ ವೃತ್ತದಿಂದ ಆರಂಭಗೊಂಡ ಮೆರವಣಿಗೆ ಅಮೀರ್ ಅಹಮ್ಮದ್ ವೃತ್ತ, ನೆಹರು ರಸ್ತೆ, ಗೋಪಿವೃತ್ತದಲ್ಲಿ ಸಮಾವೇಶಗೊಂಡಿತು. ಆನಂತರ ಬಾಲರಾಜ್ ಅರಸ್ ರಸ್ತೆ ಮಾರ್ಗವಾಗಿ ಡಿಸಿ ಕಚೇರಿವರೆಗೆ ತೆರಳಿ ಡಿಸಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

    ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್ ನೇತೃತ್ವದಲ್ಲಿ ಮೆರವಣಿಗೆಯುದ್ದಕ್ಕೂ ಪ್ರತಿಭಟನಾಕಾರರು ರೈತ ವಿರೋಧಿ ಕಾಯ್ದೆಗಳ ವಿರುದ್ಧ ಮತ್ತು ಕೇಂದ್ರ-ರಾಜ್ಯ ಸರ್ಕಾರಗಳ ವಿರುದ್ಧ ಘೊಷಣೆ ಕೂಗಿದರು. ಬಗರ್​ಹುಕುಂ ಮತ್ತು ಕಸ್ತೂರಿ ರಂಗನ್ ವರದಿ ಬಗ್ಗೆ ಸರ್ಕಾರದ ವೈಫಲ್ಯವನ್ನು ಖಂಡಿಸಿದರು.

    ಕೇಂದ್ರ ಸರ್ಕಾರ ಚರ್ಚೆಗೆ ಅವಕಾಶ ನೀಡದೆ ಸುಗ್ರೀವಾಜ್ಞೆ ಮೂಲಕ ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದಿದೆ. ಈ ಕಾಯ್ದೆಗಳ ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ತಡೆಯುವ ಹುನ್ನಾರವನ್ನು ಕೇಂದ್ರ ಸರ್ಕಾರ ಮಾಡುತ್ತಿರುವುದು ಖಂಡನೀಯ. ಕೂಡಲೇ ಈ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.

    ಎಂಎಲ್​ಸಿ ಆರ್.ಪ್ರಸನ್ನಕುಮಾರ್, ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್, ಕೆಪಿಸಿಸಿ ಕಾರ್ಯದರ್ಶಿ ಡಾ. ರಾಜನಂದಿನಿ ಕಾಗೋಡು, ಜಿಪಂ ಉಪಾಧ್ಯಕ್ಷೆ ವೇದಾ ವಿಜಯ್ಕುಮಾರ್, ಸದಸ್ಯರಾದ ತಿ.ನಾ.ಶ್ರೀನಿವಾಸ್, ಕಲಗೋಡು ರತ್ನಾಕರ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಅನಿತಾಕುಮಾರಿ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಪಿ.ಗಿರೀಶ್, ಮುಖಂಡರಾದ ವೈ.ಎಚ್.ನಾಗರಾಜ್, ವಿಜಯಲಕ್ಷ್ಮೀ ಪಾಟೀಲ್, ಇಸ್ಮಾಯಿಲ್​ಖಾನ್, ಕೆ.ದೇವೆಂದ್ರಪ್ಪ, ಪಾಲಿಕೆ ಸದಸ್ಯರಾದ ಎಸ್.ಸಿ.ಯೋಗೇಶ್, ರೇಖಾ ರಂಗನಾಥ್, ಮಂಜುಳಾ ಶಿವಣ್ಣ, ಯಮುನಾ ರಂಗೇಗೌಡ, ಮುಂತಾದವರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts