More

    ನಾಳೆ ಮುಷ್ಕರದಲ್ಲಿ ಪಾಲ್ಗೊಂಡರೆ ಕಠಿಣ ಕ್ರಮ: ಉದ್ಯೋಗಿಗಳಿಗೆ ಕೇಂದ್ರ ಸರ್ಕಾರದ ಎಚ್ಚರಿಕೆ

    ನವದೆಹಲಿ: ಕೇಂದ್ರ ಸರ್ಕಾರದ ವಿವಿಧ ಸಂಸ್ಥೆ ಹಾಗೂ ಇಲಾಖೆಗಳ ನೌಕರರು ಬುಧವಾರ ನಡೆಯುವ ಭಾರತ ಬಂದ್​ನಲ್ಲಿ ಪಾಲ್ಗೊಳ್ಳದಂತೆ ತಡೆಯಲು ನಗದು ಸಹಿತ ರಜೆ ನಿರಾಕರಿಸುವಂತೆ ಕೇಂದ್ರ ಸರ್ಕಾರ ಆದೇಶಿಸಿದೆ.

    ಸರ್ಕಾರಿ ಬ್ಯಾಂಕ್​ ಸೇರಿದಂತೆ ಸಾರ್ವಜನಿಕ ವಲಯದ ಸಂಸ್ಥೆಗಳಿಗೆ ಕೇಂದ್ರ ಸರ್ಕಾರ ಆದೇಶ ನೀಡಿದೆ.

    ಕೇಂದ್ರ ಸರ್ಕಾರದ ಆದೇಶ ಉಲ್ಲಂಘಿಸಿ ನೌಕರರು ಪ್ರತಿಭಟನೆ ನಡೆಸಿದರೆ ಅಂತವರ ವಿರುದ್ಧ ಸುಪ್ರೀಂಕೋರ್ಟ್​ ತೀರ್ಪಿನಂತೆ ಕ್ರಮ ಜರುಗಿಸಲಾಗುದುದು ಎಂದು ಎಚ್ಚರಿಕೆ ಕೂಡ ನೀಡಿದೆ.

    ಉದ್ಯೋಗಿಗಳು ರಜೆ ಹಾಕುವುದು. ಮುಷ್ಕರಕ್ಕೆ ಉದ್ಯೋಗಿಗಳು ನೇರ ಅಥವಾ ಪರೋಕ್ಷ ಬೆಂಬಲ ನೀಡುವುದು, ಪ್ರತಿಭಟನೆಯಲ್ಲಿ ಪಾಲ್ಗೊಂಡರೆ ಅವರ ವೇತನ ಕಡಿಗೊಳಿಸಿ ಸೂಕ್ತ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ , ಸಿಬ್ಬಂದಿ ಮತ್ತು ತರಬೇತಿ ಇಲಾಖೆ ನಿರ್ದೇಶನ ನೀಡಿದೆ.
    ಕೇಂದ್ರ ಸರ್ಕಾರದ ಜನ ವಿರೋಧಿ ನೀತಿ ಕಾರ್ಮಿಕ ಸಂಘಟನೆಗಳು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿವೆ. ಮುಷ್ಕರಲ್ಲಿ 25 ಕೋಟಿ ಮಂದಿ ಪಾಲ್ಗೊಳ್ಳಲಿದ್ದಾರೆ ಎಂದು ಕಾರ್ಮಿಕ ಸಂಘಟನೆ ಮುಖಂಡರು ತಿಳಿಸಿದ್ದಾರೆ. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts