ದೆಹಲಿ ಗಣರಾಜ್ಯೋತ್ಸವ, ಕೋಟ್ಯಾನ್​ಗೆ ಆಹ್ವಾನ...

GP-1
Published on

ಜಲ ಜೀವನ ಮಿಷನ್​ ಯೋಜನೆಯಲ್ಲಿ ಸಾಧನೆ

ಗಮನ ಸೆಳೆದ 80ಬಡಗಬೆಟ್ಟು ಗ್ರಾಪಂ ಅಧ್ಯಕ್ಷ

ವಿಜಯವಾಣಿ ಸುದ್ದಿಜಾಲ ಉಡುಪಿ

ಜಲ ಜೀವನ ಮಿಷನ್​ ಯೋಜನೆಯಡಿ ಉತ್ತಮವಾಗಿ ಕಾರ್ಯ ನಿರ್ವಹಿಸಿ, ಗಮನ ಸೆಳೆದ ಉಡುಪಿಯ 80 ಬಡಗಬೆಟ್ಟು ಗ್ರಾಪಂ ಅಧ್ಯಕ್ಷ ಕೇಶವ್​ ಕೋಟ್ಯಾನ್​ ಅವರಿಗೆ ಜ.26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳುವಂತೆ ಕೇಂದ್ರ ಸರ್ಕಾರ ಆಹ್ವಾನ ನೀಡಿದೆ.

ರಾಜ್ಯದಲ್ಲಿ ಘರ್​ ಘರ್​ ಜಲ್​ ಎಂದು ಘೋಷಿಸಿದ ಗ್ರಾಮಗಳ ಪೈಕಿ ಮುಖ್ಯವಾಗಿ ಕಾರ್ಯಾಚರಣೆ ಮತ್ತು ನಿರ್ವಹಣೆ ಸಾಧಿಸುವಲ್ಲಿ ಕೇಶವ್​ ಕೋಟ್ಯಾನ್​ ಪ್ರಮುಖ ಪಾತ್ರ ವಹಿಸಿದ್ದರು. ಹೀಗಾಗಿ ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿ (ವಿಡಬ್ಲ್ಯುಎಸ್​ಸಿ)ಗಳ ಸದಸ್ಯರ ಪೈಕಿ ಉಡುಪಿ ತಾಲೂಕಿನ 80 ಬಡಗಬೆಟ್ಟು ಗ್ರಾಪಂ ಅಧ್ಯಕ್ಷರಾದ ತಮ್ಮನ್ನು ಗಣರಾಜ್ಯೋತ್ಸವದ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನಿಸಿದ್ದಾಗಿ ಕೇಂದ್ರದ ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ನಿರ್ದೇಶಕರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

11

ದೆಹಲಿಯ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲು ರಾಜ್ಯದ ಬೀದರ್​, ಕಲಬುರ್ಗಿ, ಬಾಗಲಕೋಟೆ, ಕೊಪ್ಪಳ, ಚಿತ್ರದುರ್ಗ ಹಾಗೂ ಉಡುಪಿ ಜಿಲ್ಲೆ ಮಾತ್ರ ಆಯ್ಕೆಯಾಗಿದ್ದು, ಕೇಂದ್ರ ಸರ್ಕಾರದ ಸೂಚನೆಯಂತೆ ನಿಯೋಜನೆ ಆದೇಶ ಪತ್ರವನ್ನು ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಪ್ರತೀಕ್​ ಬಾಯಲ್​ ಅವರು ಕೇಶವ್​ ಕೋಟ್ಯಾನ್​ ಅವರಿಗೆ ರವಾನಿಸಿದ್ದಾರೆ.

ಎಲ್ಲರ ಸಹಕಾರದಿಂದ ಸಾಧ್ಯವಾದ ಸಾಧನೆ

GP-2
80 ಬಡಗಬೆಟ್ಟು ಗ್ರಾಪಂ ವ್ಯಾಪ್ತಿಯಲ್ಲಿ ಮನೆ ಮನೆಗೆ ಕುಡಿಯುವ ನೀರು ಪೂರೈಸುವ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯನ್ನು ಸಮರ್ಥವಾಗಿ ಅನುಷ್ಠಾನ ಮಾಡುವಲ್ಲಿ ಉಡುಪಿ ಜಿಲ್ಲಾ ಪಂಚಾಯಿತಿ ಅಧಿಕಾರಿಗಳು, ನಮ್ಮ ಗ್ರಾಪಂನ ಪಿಡಿಒ, ಕಾರ್ಯದರ್ಶಿ, ಸರ್ವ ಸದಸ್ಯರು, ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರ ಸಂಪೂರ್ಣ ಸಹಕಾರವೇ ಕಾರಣವಾಗಿದ್ದು ಎಲ್ಲರನ್ನೂ ಅಭಿನಂದಿಸುತ್ತೇನೆ. ನಮ್ಮ ಪಂಚಾಯಿತಿಯ ಈ ಸಾಧನೆ ಗಮನಿಸಿ, ಜ.26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ಪಾಲ್ಗೊಳ್ಳಲು ಕೇಂದ್ರ ಸರ್ಕಾರ ಆಹ್ವಾನ ನೀಡಿರುವುದು ಸಂತಸ ಹಾಗೂ ಹೆಮ್ಮೆ ತಂದಿದೆ ಎಂದು ಗ್ರಾಪಂ ಅಧ್ಯಕ್ಷ ಕೇಶವ್​ ಕೋಟ್ಯಾನ್​ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net