More

    ಕೋವಿಡ್​ ಡ್ಯೂಟಿಗೆ ಅಂತಿಮ ವರ್ಷದ ಎಂಬಿಬಿಎಸ್​ ವಿದ್ಯಾರ್ಥಿಗಳು!; ವಿದ್ಯಾರ್ಥಿಗಳಿಂದ ನೆರವು ಕೋರಲಿದೆಯೇ ಕೇಂದ್ರ ಸರ್ಕಾರ?

    ನವದೆಹಲಿ: ಕೋವಿಡ್-19 ಸೋಂಕು ವ್ಯಾಪಿಸುತ್ತಿರುವ ವೇಗಕ್ಕೆ ದೇಶದಲ್ಲಿ ಸದ್ಯ ಇರುವ ವೈದ್ಯಕೀಯ ವ್ಯವಸ್ಥೆ, ವೈದ್ಯಕೀಯ ಸಿಬ್ಬಂದಿ ಎಲ್ಲವುದರ ಕೊರತೆಯಾಗಿದ್ದು, ಇದೀಗ ಅಂತಿಮ ವರ್ಷದ ಎಂಬಿಬಿಎಸ್​ ವಿದ್ಯಾರ್ಥಿಗಳ ನೆರವನ್ನು ಕೇಂದ್ರ ಸರ್ಕಾರ ಕೋರಲಿದೆ ಎಂಬ ಮಾಹಿತಿಯೊಂದು ಹೊರಬಿದ್ದಿದೆ.

    ಆಮ್ಲಜನಕ ಪೂರೈಕೆ ಹಾಗೂ ಇತರ ವೈದ್ಯಕೀಯ ಸೌಲಭ್ಯಗಳ ಲಭ್ಯತೆ ಇತ್ಯಾದಿ ಕುರಿತು ಪ್ರಧಾನಿ ನರೇಂದ್ರ ಮೋದಿ ಹಾಗೂ ಪರಿಣತರ ಜತೆ ಇಂದು ಸಂಜೆ ನಡೆಯುವ ಸಭೆಯಲ್ಲಿ ಈ ಕುರಿತ ನಿರ್ಧಾರ ಪ್ರಕಟವಾಗಲಿದೆ ಎಂಬ ಮಾಹಿತಿಯನ್ನು ಕೇಂದ್ರ ಸರ್ಕಾರದ ಮೂಲಗಳಿಂದ ತಿಳಿದುಬಂದಿದೆ.

    ವೈದ್ಯಕೀಯ ಸಿಬ್ಬಂದಿ ಸೇರಿ, ಇತರ ಸೌಲಭ್ಯಗಳ ತೀವ್ರ ಕೊರತೆ ಹಿನ್ನೆಲೆಯಲ್ಲಿ ಇಂಥದ್ದೊಂದು ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆಗಳೂ ಗೋಚರಿಸಿವೆ. ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳು, ಕಳೆದ ವರ್ಷ ಪಾಸ್ ಆಗಿರುವ ವಿದ್ಯಾರ್ಥಿಗಳನ್ನು ಕೋವಿಡ್ ಡ್ಯೂಟಿಗೆ ಬಳಸಿಕೊಳ್ಳುವ ಸಂಬಂಧ ನಿರ್ಧಾರ ಶೀಘ್ರದಲ್ಲೇ ಅಂತಿಮವಾಗಲಿದೆ ಎನ್ನಲಾಗಿದೆ.

    ಡಿಸೆಂಬರ್‌ವರೆಗೂ ಇರುತ್ತೆ ಈ ಕರೊನಾ ಕಾಟ: ಎಚ್ಚರಿಕೆ ನೀಡಿದ ಡಾ. ಮಂಜುನಾಥ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts