More

    ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡುವುದಕ್ಕೆ ಕೇಂದ್ರ ಸರ್ಕಾರದ ಆಕ್ಷೇಪ!

    ನವದೆಹಲಿ: ಸಲಿಂಗ ಸಂಬಂಧಗಳು ಮತ್ತು ವಿಭಿನ್ನಲಿಂಗೀಯ ಸಂಬಂಧಗಳು ಸ್ಪಷ್ಟವಾಗಿ ವಿಭಿನ್ನ ವರ್ಗಗಳಾಗಿದ್ದು, ಅವುಗಳನ್ನು ಒಂದೇ ರೀತಿಯಲ್ಲಿ ಪರಿಗಣಿಸಲಾಗುವುದಿಲ್ಲ ಎಂದು ಕೇಂದ್ರ ಸುಪ್ರಿಂಕೋರ್ಟ್​​ ಹೇಳಿದೆ.

    ಇತ್ತೀಚಿನ ಕೆಲ ತಿಂಗಳಲ್ಲಿ ಕನಿಷ್ಠ ನಾಲ್ಕು ಸಲಿಂಗಿ ಜೋಡಿಗಳು ಸಲಿಂಗ ವಿವಾಹಕ್ಕೆ ಮಾನ್ಯತೆ ನೀಡುವಂತೆ ನ್ಯಾಯಾಲಯವನ್ನು ಕೋರಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರದೊಂದಿಗೆ ಕಾನೂನು ಸಂಘರ್ಷಕ್ಕೆ ಇಳಿದಿದ್ದಾರೆ.

    ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡುವುದನ್ನು ವಿರೋಧಿಸಿ ಕೇಂದ್ರ ಸರ್ಕಾರ ಇಂದು ಸುಪ್ರೀಂಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದೆ. ಸಲಿಂಗ ಸಂಬಂಧಗಳು ಮತ್ತು ಭಿನ್ನಲಿಂಗೀಯ ಸಂಬಂಧಗಳು ಸ್ಪಷ್ಟವಾಗಿ ವಿಭಿನ್ನ ವರ್ಗಗಳಾಗಿದ್ದು, ಅವುಗಳನ್ನು ಒಂದೇ ರೀತಿಯಲ್ಲಿ ಪರಿಗಣಿಸಲಾಗುವುದಿಲ್ಲ ಎಂದು ಕೇಂದ್ರ ಸುಪ್ರೀಂಕೋರ್ಟ್​​ನಲ್ಲಿ ಹೇಳಿದೆ.

    ಇದನ್ನೂ ಓದಿ: ಉದ್ಘಾಟನೆ ದಿನವೇ ಮೈಸೂರು – ಬೆಂಗಳೂರು ನೂತನ ಎಕ್ಸಪ್ರೆಸ್​​ ಹೈವೇನಲ್ಲಿ ಭೀಕರ ಅಪಘಾತ

    ಈ ಸಂಬಂಧ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿರುವ ಕೇಂದ್ರ ಸರ್ಕಾರ, ಸೆಕ್ಷನ್ 377 ಐಪಿಸಿಯ ಅಪರಾಧೀಕರಣವು ಸಲಿಂಗ ವಿವಾಹಕ್ಕೆ ಮಾನ್ಯತೆ ಸಾಧ್ಯವಿಲ್ಲ . ಭಿನ್ನಲಿಂಗೀಯ ಸ್ವಭಾವಕ್ಕೆ ಸೀಮಿತವಾದ ವಿವಾಹದ ಶಾಸನಬದ್ಧ ಮಾನ್ಯತೆ ಇತಿಹಾಸದುದ್ದಕ್ಕೂ ರೂಢಿಯಾಗಿದೆ. ಇದು ಅಸ್ತಿತ್ವ ಮತ್ತು ಮುಂದುವರಿಕೆ ಎರಡಕ್ಕೂ ಅಡಿಪಾಯವಾಗಿದೆ . ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದೆ. ಸಲಿಂಗ ಸಂಬಂಧಗಳು ಮತ್ತು ಭಿನ್ನಲಿಂಗೀಯ ಸಂಬಂಧಗಳು ಸ್ಪಷ್ಟವಾಗಿ ವಿಭಿನ್ನ. ಅವುಗಳನ್ನು ಒಂದೇ ರೀತಿಯಲ್ಲಿ ಪರಿಗಣಿಸಲಾಗುವುದಿಲ್ಲ. ಸದ್ಯ ಅಪರಾಧೀಕರಣಗೊಳ್ಳದ ಸಲಿಂಗಿಗಳ ಸಹ ಜೀವನವನ್ನು, ಹೆಂಡತಿ ಮತ್ತು ಮಕ್ಕಳನ್ನು ಒಳಗೊಂಡ ಭಾರತೀಯ ಕುಟುಂಬ ವ್ಯವಸ್ಥೆಯೊಂದಿಗೆ ಹೋಲಿಸಲಾಗುವುದಿಲ್ಲ ಎಂದು ಕೇಂದ್ರವು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

    ಬೀದಿಯಲ್ಲಿ ಬೆತ್ತಲಾಗಿ ಓಡಾಡಿದ ವ್ಯಕ್ತಿ ಅರೆಸ್ಟ್; ಈತ ಹೇಳಿದ್ದು ಕೇಳಿದ್ರೆ ಶಾಕ್​ ಆಗ್ತೀರಾ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts