More

    ಕೇಂದ್ರ ಸರ್ಕಾರದ ಯೋಜನೆಗಳು ಬಡವರ ಆಶಾ ಕಿರಣ

    ಎನ್.ಆರ್.ಪುರ: ಕೇಂದ್ರ ಸರ್ಕಾರದ ವಿವಿಧ ಯೋಜನೆಗಳು ಬಡವರಿಗೆ ಆಶಾ ಕಿರಣವಾಗಿವೆ ಎಂದು ಮಾಜಿ ಸಚಿವ ಡಿ.ಎನ್.ಜೀವರಾಜ್ ಹೇಳಿದರು.
    ಪಟ್ಟಣದಲ್ಲಿ ವಿಕಸಿತ ಭಾರತ ಯಾತ್ರೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿಯಾದ ನಂತರ ಬಡವರ ಮನಗೆ ಉಜ್ವಲ ಯೋಜನೆಯಡಿ ಬಿಪಿಎಲ್ ಕಾರ್ಡ್‌ದಾರರಿಗೆ ಉಚಿತವಾಗಿ ಗ್ಯಾಸ ಸಂಪರ್ಕ ನೀಡಿದ್ದಾರೆ. ಇದರಿಂದ ಮಹಿಳೆಯರಿಗೆ ಉಪಯೋಗವಾಗಿದೆ. ವರ್ಷಕ್ಕೆ 15 ಸಿಲಿಂಡರ್‌ಗಳನ್ನು ನೀಡಲಾಗುತ್ತಿದೆ. ಇದೀಗ 300 ರೂ ಸಬ್ಸಿಡಿ ನೀಡಲಾಗುತ್ತಿದೆ. ಇದರಿಂದ ಕೇವಲ 600 ರೂ.ಗಳಿಗೆ ಸಿಲಿಂಡರ್ ದೊರೆಯುತ್ತಿದೆ ಎಂದರು.
    ರೈತರಿಗೆ ಡ್ರೋನ್ ಮೂಲಕ ಔಷಧಿ ಸಿಂಪಡಿಸುವ ಯೋಜನೆ ಜಾರಿಗೆ ತಂದಿದ್ದಾರೆ. ವಿಶ್ವ ಕರ್ಮ ಯೋಜನೆಯಡಿ ಎಲ್ಲಾ ಬ್ಯಾಂಕ್‌ಗಳಲ್ಲಿ ಮೋದಿ ಗ್ಯಾರಂಟಿ ಮೇಲೆ ಕೇವಲ ಶೇ.5 ರಷ್ಟು ಬಡ್ಡಿ ದರದಲ್ಲಿ 1ಲಕ್ಷದವರೆಗೆ ಸಾಲ ಸೌಲಭ್ಯ ನೀಡಲಾಗುತ್ತಿದೆ. 18 ತಿಂಗಳೊಳಗೆ ಸಾಲ ಪಾವತಿಸಿದರೆ ಮತ್ತೆ ಅದೇ ಲಾನುಭವಿಗೆ 2 ಲಕ್ಷ ಸಾಲ ಸೌಲಭ್ಯ ನೀಡಲಾಗುತ್ತಿದೆ. ಪಾಕಿಸ್ತಾನದವರು ನಮ್ಮ ದೇಶಕ್ಕೆ ನರೇಂದ್ರ ಮೋದಿ ಅವರಂತಹ ಪ್ರಧಾನಿ ಬೇಕು ಎಂದು ಹೋರಾಟ ಮಾಡುತ್ತಿದ್ದಾರೆ. ಆದರೆ ನಮ್ಮ ದೇಶದ ಕೆಲ ನಾಯಕರು ಮೋದಿ ಬಗ್ಗೆ ಲಘುವಾಗಿ ಮಾತನಾಡುತ್ತಿದ್ದಾರೆ ಇದು ನಮ್ಮ ದೇಶದ ದುರ್ದೈವ ಎಂದರು.
    ಉಜ್ವಲ ಯೋಜನೆ, ಬ್ಯಾಂಕ್‌ಸೌಲಭ್ಯ, ಅಂಚೆ ಇಲಾಖೆಯಿಂದ ದೊರೆಯುವ ಸೌಲಭ್ಯಗಳ ಮಾಹಿತಿ ನೀಡಲಾಯಿತು. ಕೆಲವು ಲಾನುಭವಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ತಾಲೂಕು ಬಿಜೆಪಿ ಅಧ್ಯಕ್ಷ ಅರುಣಕುಮಾರ್, ಮಹಾಲಸ ಇಂಡೇನ್ ಗ್ಯಾಸ್ ಏಜೆನ್ಸಿ ಮಾಲೀಕ ಬಿ.ಎಸ್.ಆಶೀಶ್‌ಕುಮಾರ್, ಕೆನರಾ ಬ್ಯಾಂಕ್ ವ್ಯವಸ್ಥಾಪಕ ಶ್ರೀಕುಮಾರ್, ಅಂಚೆ ಇಲಾಖೆ ಅಧಿಕಾರಿ ಅರುಣ್, ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts