22.5 C
Bengaluru
Sunday, January 19, 2020

ಜಮ್ಮು ಮತ್ತು ಕಾಶ್ಮೀರದಲ್ಲಿ ನರೇಂದ್ರ ಮೋದಿ ನೇತೃತ್ವ ಸರ್ಕಾರದ ಭರ್ಜರಿ ಸರ್ಜಿಕಲ್​ ಸ್ಟ್ರೈಕ್​; ಆರ್ಟಿಕಲ್​ 370 ರದ್ದು

Latest News

ವೇಮನ ಒಬ್ಬ ಸಮಾಜ ಸುಧಾರಕ

ವಿಜಯಪುರ : ಜೀವನವೆಂಬ ಸಂತೆಯೊಳಗಿದ್ದುಕೊಂಡೇ ಸಂತನಾಗಿ ಬೆಳೆದ ಮಹಾಯೋಗಿ ವೇಮನ ಅವರು ಒಬ್ಬ ಸಮಾಜ ಸುಧಾರಕ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹೇಳಿದರು. ನಗರದ ಕಂದಗಲ್...

ಪ್ರಾಚಾರ್ಯರ ಧೋರಣೆ ಖಂಡಿಸಿ ಪ್ರತಿಭಟನೆ

ಬಸವನಬಾಗೇವಾಡಿ: ಕಾಲೇಜಿನಲ್ಲಿ ವಿವೇಕಾನಂದರ ಜಯಂತಿ ಆಚರಣೆಗೆ ನಿರಾಕರಿಸಿದ್ದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರ ನೇತೃತ್ವದಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿಗಳು ಶನಿವಾರ...

ಹೆಲ್ಮೆಟ್ ಕಡ್ಡಾಯವಾಗಿ ಧರಿಸಿ: ಜಿಲ್ಲಾಧಿಕಾರಿ ಪಾಟೀಲ ಅಭಿಮತ

ವಿಜಯಪುರ : ಸರ್ಕಾರಿ ನೌಕರರು ಮತ್ತು ಶಾಲಾ ಕಾಲೇಜುಗಳಿಗೆ ಮಕ್ಕಳನ್ನು ಬಿಡಲು ಬರುವ ಪಾಲಕರು, ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಕುರಿತಂತೆ...

ಪೋಲಿಯೋ ಲಸಿಕಾ ಕಾರ್ಯಕ್ರಮ

ರಾಣೆಬೆನ್ನೂರ: ಪೋಲಿಯೋ ಮುಕ್ತ ಭಾರತವನ್ನಾಗಿ ಮಾಡುವ ಉದ್ದೇಶದಿಂದ ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಬೇಕು. ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು...

ಇಬ್ಬರು ಮನೆಗಳ್ಳರು ಖಾಕಿ ಬಲೆಗೆ

ಗದಗ: ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸುವಲ್ಲಿ ಗದಗ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಸೆಟ್ಲಮೆಂಟ್ ನಿವಾಸಿಗಳಾದ ಸುರೇಶ...

ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಭರ್ಜರಿ ಸರ್ಜಿಕಲ್​ ಸ್ಟ್ರೈಕ್​ಗೆ ಮುಂದಾಗಿದೆ. ರಾಜ್ಯಸಭೆಯಲ್ಲಿ ಹೇಳಿಕೆ ನೀಡಿದ ಕೇಂದ್ರ ಗೃಹ ಸಚಿವ ಅಮಿತ್​ ಷಾ, ಕಣಿವೆ ರಾಜ್ಯಕ್ಕೆ ಅನ್ವಯವಾಗಿದ್ದ ಸಂವಿಧಾನದ 370 ಮತ್ತು 35ಎ ಪರಿಚ್ಛೇದಗಳನ್ನು ರದ್ದುಗೊಳಿಸುವ ಮೂಲಕ ವಿಶೇಷ ಸ್ಥಾನಮಾನ ಹಾಗೂ ವಿಶೇಷಾಧಿಕಾರವನ್ನು ರದ್ದುಗೊಳಿಸುವ ಪ್ರಸ್ತಾವನೆಯನ್ನು ಸದನದಲ್ಲಿ ಮಂಡಿಸುತ್ತಿರುವುದಾಗಿ ಹೇಳಿದರು.

ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ನಿವಾಸದಲ್ಲಿ ಸೋಮವಾರ ಬೆಳಗ್ಗೆ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಪ್ರಮುಖವಾಗಿ ಜಮ್ಮು ಮತ್ತು ಕಾಶ್ಮೀರ ಕುರಿತ ನಿರ್ಧಾರಗಳ ಬಗ್ಗೆ ಚರ್ಚೆಯಾಗಿತ್ತು ಎನ್ನಲಾಗಿದೆ. ಕಣಿವೆ ರಾಜ್ಯವನ್ನು ಮೂರು ಭಾಗಗಳಾಗಿ ವಿಂಗಡಿಸುವ ನಿರ್ಣಯವನ್ನು ರಾಜ್ಯಸಭೆಯಲ್ಲಿ ಮಂಡಿಸಿದರು.

ರಾಜ್ಯಸಭೆಯಲ್ಲಿ ಸಚಿವ ಅಮಿತ್​ ಷಾ ಹೇಳಿಕೆ ನೀಡಲು ಮುಂದಾಗುತ್ತಿದ್ದಂತೆ ಕಾಂಗ್ರೆಸ್​ ಪಕ್ಷದ ನಾಯಕ ಗುಲಾಂ ನಬಿ ಆಜಾದ್​ ಕಣಿವೆ ರಾಜ್ಯದ ಮೂರಕ್ಕೂ ಹೆಚ್ಚು ಮಾಜಿ ಸಿಎಂಗಳನ್ನು ಗೃಹ ಬಂಧನದಲ್ಲಿರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿದರು. ಇದಕ್ಕೆ ಪ್ರತಿಪಕ್ಷಗಳ ಇತರೆ ನಾಯಕರು ಕೂಡ ಧ್ವನಿಗೂಡಿಸಿದ್ದರಿಂದ, ಕೆಲಕಾಲ ಗದ್ದಲದ ವಾತಾವರಣ ನಿರ್ಮಾಣವಾಗಿತ್ತು. ಇದರ ನಡುವೆಯೇ ಅಮಿತ್​ ಷಾ ಪ್ರಸ್ತಾಪಗಳನ್ನು ಮಂಡಿಸಿದರು.

ಪ್ರಸ್ತಾಪ ಮಂಡಿಸಿದ ನಂತರದಲ್ಲಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಪಕ್ಷಗಳ ನಾಯಕರು ಭಾರಿ ಗದ್ದಲ ಎಬ್ಬಿಸಿದರು. ಈ ಹಿನ್ನೆಲೆಯಲ್ಲಿ ಸಭಾಪತಿ ವೆಂಕಯ್ಯ ನಾಯ್ಡು ಸದನವನ್ನು ಮುಂದೂಡಿದರು.

ಜಮ್ಮು ಮತ್ತು ಕಾಶ್ಮೀರ ಒಂದು ರಾಜ್ಯವಲ್ಲ
ಇದುವರೆಗೂ ಜಮ್ಮು ಮತ್ತು ಕಾಶ್ಮೀರ ಒಂದು ರಾಜ್ಯವಾಗಿ ಕಾರ್ಯನಿರ್ವಹಿಸುತ್ತಿತ್ತು. ಆದರೆ, ಇನ್ನು ಮುಂದೆ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್​ ಕೇಂದ್ರಾಡಳಿತ ಪ್ರದೇಶಗಳಾಗಿ ಕಾರ್ಯನಿರ್ವಹಿಸಲಿವೆ. ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯನ್ನು ಹೊಂದಿರಲಿದ್ದರೆ, ಲಡಾಖ್​ನಲ್ಲಿ ವಿಧಾನಸಭೆ ಇರುವುದಿಲ್ಲ. 

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...