More

  ಸೆಂಟ್ರಲ್ ಮಾರುಕಟ್ಟೆ ವ್ಯಾಪಾರ ಪುನರಾರಂಭ

  ಮಂಗಳೂರು: ಸೆಂಟ್ರಲ್ ಮಾರುಕಟ್ಟೆಯಲ್ಲಿ ಲಾಕ್‌ಡೌನ್ ಸಂದರ್ಭ ಏಕಾಏಕಿ ವ್ಯಾಪಾರಕ್ಕೆ ನಿಷೇಧ ಹೇರಿದ್ದ ಮಂಗಳೂರು ಮಹಾನಗರ ಪಾಲಿಕೆ ಪ್ರಸ್ತುತ ಈ ಆದೇಶವನ್ನು ಹಿಂಪಡೆದಿದ್ದು, ವ್ಯಾಪಾರಿಗಳು ಗುರುವಾರ ಬೆಳಗ್ಗೆ ಮಾರುಕಟ್ಟೆಯ ಬಾಗಿಲು ತೆರೆದಿದ್ದಾರೆ. ಒಂದೆರಡು ದಿನಗಳಲ್ಲಿ ಪೂರ್ಣ ಪ್ರಮಾಣದಲ್ಲಿ ವ್ಯಾಪಾರ ವಹಿವಾಟು ಆರಂಭಗೊಳ್ಳುವ ನಿರೀಕ್ಷೆ ಇದೆ.

  ಕರೊನಾ ಹಿನ್ನೆಲೆ ಲಾಕ್‌ಡೌನ್ ಆದ ಸಂದರ್ಭ ದೈಹಿಕ ಅಂತರ ಕಾಯ್ದುಕೊಳ್ಳುವ ಉದ್ದೇಶದಿಂದ ಪ್ರಾರಂಭದಲ್ಲಿ ಸಗಟು ವ್ಯಾಪಾರಿಗಳನ್ನು ಬೈಕಂಪಾಡಿ ಎಪಿಎಂಸಿ ಪ್ರಾಂಗಣಕ್ಕೆ ಸ್ಥಳಾಂತರಿಸಿ ಪಾಲಿಕೆ ಆದೇಶಿಸಿತ್ತು. ಬಳಿಕ ಸೆಂಟ್ರಲ್ ಮಾರುಕಟ್ಟೆ ಹಳೇ ಕಟ್ಟಡ ಕೆಡವಿ ಹೊಸ ಕಟ್ಟಡ ಕಟ್ಟುವ ಉದ್ದೇಶದಿಂದ ಎಲ್ಲ ರೀತಿಯ ವ್ಯಾಪಾರ ಸ್ಥಗಿತಗೊಳಿಸುವಂತೆ ಮಹಾನಗರ ಪಾಲಿಕೆ ಎ.7ರಂದು ಆದೇಶಿಸಿತ್ತು.

  ಪ್ರಸಕ್ತ 1976ರ ಕರ್ನಾಟಕ ಮಹಾನಗರ ಪಾಲಿಕೆ ಕಾಯ್ದೆ ನಿಬಂಧನೆಗೆ ಅನುಗುಣವಾಗಿ ಪಾಲಿಕೆ ಆದೇಶವನ್ನು ವಾಪಾಸ್ ಪಡೆದಿದ್ದು, ಗುರುವಾರ ಬೆಳಗ್ಗೆ ವ್ಯಾಪಾರಿಗಳು ಸೆಂಟ್ರಲ್ ಮಾರುಕಟ್ಟೆಗೆ ಆಗಮಿಸಿದ್ದಾರೆ. ಈ ಸಂದರ್ಭ ಪಾಲಿಕೆ ಅಧಿಕಾರಿಗಳು ಮಾರುಕಟ್ಟೆ ಬಾಗಿಲು ತೆರೆಯದಂತೆ ಸೂಚಿಸಿದರು. ವ್ಯಾಪಾರಿಗಳು ವಕೀಲರ ಮೂಲಕ ಕೋರ್ಟ್ ಆದೇಶವನ್ನು ಅಧಿಕಾರಿಗಳ ಮುಂದಿಟ್ಟರು. ಅಧಿಕಾರಿಗಳು ಹಿಂತಿರುಗಿದ್ದಾರೆ. ವ್ಯಾಪಾರಿಗಳು ಅಂಗಡಿಗಳ ಬೀಗ ತೆರೆದು ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಒಂದೆರಡು ದಿನಗಳಲ್ಲಿ ಎಲ್ಲ ಅಂಗಡಿಗಳು ಕಾರ್ಯಾಚರಿಸಲಿದೆ.

  ಸಗಟು ವ್ಯಾಪಾರವೂ ಇಲ್ಲೇ
  ಬೈಕಂಪಾಡಿ ಎಪಿಎಂಸಿ ಪ್ರಾಂಗಣಕ್ಕೆ ಸ್ಥಳಾಂತರಗೊಂಡಿರುವ ತರಕಾರಿ ಸಗಟು ವ್ಯಾಪಾರಸ್ಥರು ಸೆಂಟ್ರಲ್ ಮಾರುಕಟ್ಟೆಯಲ್ಲೇ ವ್ಯಾಪಾರ ವಹಿವಾಟು ನಡೆಸಲಿದ್ದಾರೆ. ಬೈಕಂಪಾಡಿಯಲ್ಲಿ ಸಮರ್ಪಕ ವ್ಯವಸ್ಥೆ ಕಲ್ಪಿಸಿಲ್ಲ, ನಗರದಿಂದ 18 ಕಿ.ಮೀ. ದೂರವಾಗುತ್ತದೆ ಎನ್ನು ವ ಆರೋಪವೂ ವ್ಯಾಪಾರಿಗಳಿಂದ ವ್ಯಕ್ತವಾಗಿತ್ತು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts