ಬಿಜೆಪಿ ಹಿರಿಯ ನಾಯಕ, ಕೇಂದ್ರ ಸಚಿವ ಅನಂತಕುಮಾರ್​ ವಿಧಿವಶ

ಬೆಂಗಳೂರು: ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಬಿಜೆಪಿಯ ಹಿರಿಯ ನಾಯಕ ಹಾಗೂ ಕೇಂದ್ರ ಸಚಿವ ಅನಂತಕುಮಾರ್(59)​ ಅವರು ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಬೆಳಗಿನ ಜಾವ 3 ಗಂಟೆ ಸಮಯದಲ್ಲಿ ವಿಧಿವಶರಾಗಿದ್ದಾರೆ.

ತೀವ್ರ ಅನಾರೋಗ್ಯ ಕಾರಣದಿಂದಾಗಿ ಕಳೆದ 20 ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಅನಂತಕುಮಾರ್​ ಅವರಿಗೆ ಪತ್ನಿ ತೇಜಸ್ವಿನಿ ಹಾಗೂ ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ.

ಸುಮೇರದಲ್ಲಿ ಅಂತಿಮ ದರ್ಶನ

ಖಾಸಗಿ ಆಸ್ಪತ್ರೆಯಿಂದ ಲಾಲ್ ಬಾಗ್ ರಸ್ತೆಯಲ್ಲಿರುವ ಸುಮೇರ ನಿವಾಸಕ್ಕೆ ಅನಂತಕುಮಾರ್​ ಅವರ ಪಾರ್ಥಿವ ಶರೀರ ರವಾನೆಯಾಗಿದ್ದು, ಮನೆಯಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಬಾಲ್ಯ ಜೀವನ

ಅನಂತಕುಮಾರ್ ಅವರು ಜುಲೈ 22, 1959 ರಂದು ಎಚ್. ಎನ್. ನಾರಾಯಣ ಶಾಸ್ತ್ರಿ ಮತ್ತು ಗಿರಿಜಾ ದಂಪತಿ ಮಗನಾಗಿ ಜನಿಸಿದ್ದರು. ಬಾಲ್ಯದಲ್ಲೆ ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದರು. ಆರ್‌ಎಸ್‌ಎಸ್ ತತ್ವಗಳಿಂದ ಪ್ರೇರಿತರಾಗಿದ್ದ ಅವರು ವಿದ್ಯಾರ್ಥಿಯಾಗಿದ್ದಾಗಲೇ ಎಬಿವಿಪಿಯಲ್ಲಿ ಸಕ್ರಿಯರಾಗಿದ್ದರು.

ಭಾರತೀಯ ಜನತಾ ಪಕ್ಷದ ನಾಯಕರಾಗಿದ್ದ ಅನಂತಕುಮಾರ್ ಒಬ್ಬ ಯಶಸ್ವಿ ರಾಜಕಾರಣಿ. ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಿಂದ ಬಿಜೆಪಿಯ ಅಭ್ಯರ್ಥಿಯಾಗಿ ಜಯಗಳಿಸಿ ಸಂಸದರಾಗಿ ಆಯ್ಕೆಯಾಗಿದ್ದರು. ಮೋದಿ ಸಚಿವ ಸಂಪುಟದಲ್ಲಿ ಕೇಂದ್ರ ರಸಗೊಬ್ಬರ ಹಾಗೂ ಸಂಸದೀಯ ವ್ಯವಹಾರಗಳ ಖಾತೆಯನ್ನು ಅನಂತ್​ ಕುಮಾರ್​ ಅವರು ನಿರ್ವಹಿಸುತ್ತಿದ್ದರು. ವಾಜಪೇಯಿ ಸಂಪುಟದಲ್ಲಿ ಸಚಿವರಾಗಿದ್ದರು.

ಅನಂತ​ಕುಮಾರ್​ ಅವರ ಸಾವಿಗೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಕಾನೂನು ಸಚಿವ ಸದಾನಂದ ಗೌಡ, ಶಾಸಕ ಸುರೇಶ್​ ಕುಮಾರ್​ ಹಾಗೂ ವಿಆರ್​ಎಲ್​ ಸಮೂಹ ಸಂಸ್ಥೆಗಳ ಚೇರ್ಮನ್​ ವಿಜಯ ಸಂಕೇಶ್ವರ್​ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. (ದಿಗ್ವಿಜಯ ನ್ಯೂಸ್​​)

ನಾಳೆ ಕೇಂದ್ರ ಸಚಿವ ಅನಂತಕುಮಾರ್​ ಅಂತ್ಯಕ್ರಿಯೆ

ಅದಮ್ಯ ಚೇತನ ಅನಂತಕುಮಾರ್​ ಅವರ ಬಗೆಗಿನ ಕೌತುಕಗಳಿವು

ಹೀಗಿತ್ತು ಅನಂತಕುಮಾರ್​ ಅವರ ಜೀವನ, ಸಾಧನೆ…

PHOTOS| ಅನಂತ್​ಕುಮಾರ್​ ಅಂತಿಮ ದರ್ಶನ ಪಡೆಯುತ್ತಿರುವ ಗಣ್ಯರು

ಸಹೋದ್ಯೋಗಿ ಮಿತ್ರನನ್ನು ಕಳೆದುಕೊಂಡು ದುಃಖಿತರಾಗಿದ್ದೇವೆ ಎಂದ ರಾಷ್ಟ್ರ ನಾಯಕರು

ರಾಜಕಾರಣ ಮೀರಿದ ಸ್ನೇಹ ಸಂಬಂಧ ಹೊಂದಿದ್ದ ಆತ್ನೀಯ ಗೆಳೆಯನನ್ನು ನಾನು ಕಳೆದುಕೊಂಡಿದ್ದೇನೆ: ಸಿಎಂ