More

    ಆದಿಚುಂಚನಗಿರಿ ಕೇತ್ರದ ಆಮ್ಲಜನಕ ಘಟಕ ಲೋಕಾರ್ಪಣೆ; ದೆಹಲಿಯಿಂದಲೇ ಉದ್ಘಾಟಿಸಿದ್ರು ಕೇಂದ್ರ ಸಚಿವರು

    ಬೆಂಗಳೂರು: ಕರೊನಾ ಸಾಂಕ್ರಾಮಿಕ ಪಿಡುಗನ್ನು ಎದುರಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ಆದಿಚುಂಚನಗಿರಿ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರವು ಸಾರ್ವಜನಿಕ ಹಿತದೃಷ್ಟಿಯಿಂದ ಹೆಚ್ಚಿನ ಸಾಮರ್ಥ್ಯವುಳ್ಳ ಆಮ್ಲಜನಕ ಉತ್ಪಾದನಾ ಘಟಕವನ್ನು ಇಂದು ಲೋಕಾರ್ಪಣೆಗೊಳಿಸಿದೆ.

    ಪೀಠಾಧ್ಯಕ್ಷ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಅವರ ಮುಂದಾಲೋಚನೆ ಫಲವಾಗಿ ನಿರ್ಮಾಣಗೊಂಡಿರುವ ಈ ಘಟಕವನ್ನು ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಇಂದು ದೆಹಲಿಯಿಂದ ಆನ್‌ಲೈನ್ ಮೂಲಕ ಉದ್ಘಾಟನೆ ಮಾಡಿದರು. ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್ ಬಳಿ ಇರುವ ಎಐಎಂಎಸ್​ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಈ ಘಟಕ ನಿರ್ಮಾಣಗೊಂಡಿದೆ. ಈ ಘಟಕ ಪ್ರತಿನಿಮಿಷಕ್ಕೆ 700 ಲೀಟರ್​ ಆಮ್ಲಜನಕ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ.

    ಇದನ್ನೂ ಓದಿ: ಭಾರತದಲ್ಲಿ ಇಂದು ಒಂದು ಸೆಕೆಂಡ್​ನಲ್ಲಿ ಹಾಕಿಸಿದ ಲಸಿಕೆ ಎಷ್ಟು ಗೊತ್ತೇ!?

    ಕೋವಿಡ್ ವೇಳೆ ತೀವ್ರವಾಗಿ ಎದುರಾದ ಆಮ್ಲಜನಕ ಕೊರತೆಯನ್ನು ಗಂಭೀರವಾಗಿ ಪರಿಗಣಿಸಿದ ಶ್ರೀಗಳು ಕುದುರೆಮುಖ ಕಬ್ಬಿಣದ ಅದಿರು ಕಂಪನಿಯೊಂದಿಗೆ ಮಾತುಕತೆ ನಡೆಸಿ ತಮ್ಮ ಸಂಶೋಧನಾ ಸಂಸ್ಥೆಯ ಮುಖ್ಯಸ್ಥರನ್ನು ಒಳಗೊಂಡಂತೆ ವಿಶೇಷ ಸಮಿತಿಯೊಂದನ್ನು ರಚಿಸಿದ್ದರು. ಆ ಸಮಿತಿ ಆಮ್ಲಜನಕ ಉತ್ಪಾದನಾ ಘಟಕದ ಅಗತ್ಯದ ಬಗ್ಗೆ ಶಿಫಾರಸು ಮಾಡಿತ್ತು. ಅದರನ್ವಯ ಉಪಕರಣಗಳನ್ನು ಯುರೋಪ್‌ನಿಂದ ಅಮದು ಮಾಡಿಕೊಂಡು ಘಟಕವನ್ನು ಸ್ಥಾಪನೆ ಮಾಡಲಾಗಿದೆ.

    ಇದನ್ನೂ ಓದಿ: ಸಗಣಿಯನ್ನೂ ಬಿಡದ ಕಳ್ಳರು; 800 ಕೆ.ಜಿ. ಗೋಮಯ ಕಳವು, ಪೊಲೀಸರಿಗೆ ದೂರು..

    ಅತ್ಯುನ್ನತ ತಂತ್ರಜ್ಞಾನ ಹೊಂದಿರುವ ಈ ಘಟಕ ಒಂದು ನಿಮಿಷಕ್ಕೆ 700 ಲೀಟರ್ ಅನಿಲ ರೂಪದ ಆಮ್ಲಜನಕ ಉತ್ಪಾದಿಸುವ ಸಾಮರ್ಥ್ಯ ಹೊಂದಿದ್ದು, 143 ಸಿಲಿಂಡರ್ ಹೊಂದಿರುವ ಆಮ್ಲಜನಕ ಸಾಮರ್ಥ್ಯಕ್ಕೆ ಇದು ಸಮವಾಗಿದೆ. ಇದರಿಂದ ಏಕಕಾಲಕ್ಕೆ 150 ಆಮ್ಲಜನಕ ಅವಲಂಬಿತ ರೋಗಿಗಳಿಗೆ ಅನುಕೂಲವಾಗಲಿದೆ ಎಂದು ಪೀಠಾಧ್ಯಕ್ಷ ಡಾ. ಶ್ರೀ ನಿರ್ಮಲಾನಂದ ಸ್ವಾಮೀಜಿ ವಿವರಣೆ ನೀಡಿದ್ದಾರೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ್ ಕಟೀಲ್, ಕೆಐಒಸಿ ಲಿಮಿಟೆಡ್‌ ಮುಖ್ಯಸ್ಥರು ಹಾಗೂ ಮಠದ ಮತ್ತಿತರರು ಭಾಗವಹಿಸಿದ್ದರು.

    ಆದಿಚುಂಚನಗಿರಿ ಕೇತ್ರದ ಆಮ್ಲಜನಕ ಘಟಕ ಲೋಕಾರ್ಪಣೆ; ದೆಹಲಿಯಿಂದಲೇ ಉದ್ಘಾಟಿಸಿದ್ರು ಕೇಂದ್ರ ಸಚಿವರು
    ಸ್ಥಳೀಯವಾಗಿ ಘಟಕ ಉದ್ಘಾಟಿಸಿದ ಸ್ವಾಮೀಜಿ
    ಆದಿಚುಂಚನಗಿರಿ ಕೇತ್ರದ ಆಮ್ಲಜನಕ ಘಟಕ ಲೋಕಾರ್ಪಣೆ; ದೆಹಲಿಯಿಂದಲೇ ಉದ್ಘಾಟಿಸಿದ್ರು ಕೇಂದ್ರ ಸಚಿವರು
    ಆಮ್ಲಜನಕ ಘಟಕದಲ್ಲಿ ಸ್ವಾಮೀಜಿಯೊಂದಿಗೆ ಗಣ್ಯರು

    ಕೆಎಸ್​ಆರ್​ಟಿಸಿ ಬಸ್​ನಲ್ಲಿ ಹಾವು!; ಲಾಕ್​ಡೌನ್​ ಇಫೆಕ್ಟ್​, ಚಾಲಕರಲ್ಲಿ ಭಯ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts