

ನವದೆಹಲಿ: ಅಗ್ನಿವೀರರಿಗೆ ಪಿಂಚಣಿಗೆ ಬಜೆಟ್‌ನಲ್ಲಿ ಯಾವುದೇ ಅವಕಾಶ ಕಲ್ಪಿಸಿಲ್ಲ ಎಂದು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿಕೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವಿರೋಧ ಪಕ್ಷದ ನಾಯಕರು ಯಾವಾಗ ಕೇಳಿದರೂ ಸದನದಲ್ಲಿ ಸಮಗ್ರ ಮಾಹಿತಿ ನೀಡಲು ಸಿದ್ಧ ಎಂದರು.
ರಾಹುಲ್ ಭಾಷಣ ಮುಗಿದ ತಕ್ಷಣ ಲೋಕಸಭೆಯಲ್ಲಿ ಪ್ರತಿಕ್ರಿಯಿಸಿದ ರಾಜನಾಥ್ ಸಿಂಗ್, ಅಗ್ನಿವೀರ್ ಯೋಜನೆಯಲ್ಲಿ ದೇಶವನ್ನು ದಾರಿ ತಪ್ಪಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದರು.
“ರಾಷ್ಟ್ರೀಯ ಭದ್ರತೆಯ ವಿಷಯವು ಬಹಳ ಸೂಕ್ಷ್ಮವಾಗಿದೆ. ಅಗ್ನಿವೀರ್ ಜವಾನರ ಬಗ್ಗೆ ದೇಶವನ್ನು ದಾರಿ ತಪ್ಪಿಸುವ ಪ್ರಯತ್ನಗಳು ನಡೆಯುತ್ತಿವೆ. ನೀವು (ಸ್ಪೀಕರ್) ಆದೇಶಿಸಿದಾಗಲೆಲ್ಲಾ ಅಗ್ನಿವೀರ್ ಸೈನಿಕರ ವಿಚಾರವಾಗಿ ಸದನದಲ್ಲಿ ಹೇಳಿಕೆ ನೀಡಲು ಸಿದ್ಧ ಎಂದು ರಾಜನಾಥ್ ಹೇಳಿದರು.
ಈ ವೇಳೆ ಮಾತನಾಡಿದ ರಾಹುಲ್ ಗಾಂಧಿ ಹುತಾತ್ಮ ಯೋಧರಿಗೆ ಪರಿಹಾರ ನೀಡುವ ವಿಚಾರವನ್ನು ಪ್ರಸ್ತಾಪಿಸಿದರು. ಜಮ್ಮು ಮತ್ತು ಕಾಶ್ಮೀರದ ನೌಶೇರಾದಲ್ಲಿ ನೆಲಬಾಂಬ್ ಸ್ಫೋಟದಲ್ಲಿ ಸಾವನ್ನಪ್ಪಿದ ಅಗ್ನಿವೀರ್ ಗೆ ವಿಮೆ ನೀಡಲಾಗಿದ್ದರೂ ಸರ್ಕಾರ ಯಾವುದೇ ಪರಿಹಾರ ನೀಡಿಲ್ಲ ಎಂದು ಹೇಳಿದರು.