ಕೇಂದ್ರ ಸಚಿವ ವಿ.ಸೋಮಣ್ಣ ಅವರಿಗೆ ಮಂಗಳೂರಿನಲ್ಲಿ ಸ್ವಾಗತ; ಜುಲೈ 17 ರಂದು ಸಭೆ

IMG-20240716-WA0405
Published on

ಮಂಗಳೂರು: ರೈಲ್ವೆ ಅಭಿವೃದ್ದಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಲು ಮಂಗಳೂರಿಗೆ ಮಂಗಳವಾರ ರಾತ್ರಿ ಆಗಮಿಸಿದ ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಅವರನ್ನು ಸ್ಥಳೀಯ ಸಂಸದ ಬ್ರಿಜೇಶ್ ಚೌಟ ಅವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.
ಮೇಯರ್ ಸುಧೀರ್ ಶೆಟ್ಟಿ, ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ಬಿಜೆಪಿ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ ಉಪಸ್ಥಿತರಿದ್ದರು.
ಸಚಿವ ಸೋಮಣ್ಣ ಅವರು ಜುಲೈ 17 ರಂದು ಬೆಳಗ್ಗೆ ಒಂಭತ್ತು ಗಂಟೆಗೆ ಮಂಗಳೂರು ಸೆಂಟ್ರಲ್ ನಿಲ್ದಾಣ, ಬಳಿಕ ಮಂಗಳೂರು ಜಂಕ್ಷನ್ ನಿಲ್ದಾಣಕ್ಕೆ ಭೇಟಿ ನೀಡುವರು.
ಬೆಳಗ್ಗೆ11 ಕ್ಕೆ ಕೊಟ್ಟಾರದಲ್ಲಿರುವ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ರೈಲ್ವೆ ಸಂಬಂಧಿಸಿ ನಡೆಯುವ ಸಭೆಯಲ್ಲಿ ಸಚಿವ ಸೋಮಣ್ಣ, ಜಿಲ್ಲೆಯ ಶಾಸಕರು, ದಕ್ಷಿಣ ರೈಲ್ವೆ, ನೈರುತ್ಯ ರೈಲ್ವೆ, ಕೊಂಕಣ ರೈಲ್ವೆ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net