More

    ಕೋವಿಡ್​ ಕೇರ್​ ಸೆಂಟರ್​ನಲ್ಲಿ ಹಾಸಿಗೆ ಹಂಚಿಕೆಗೆ ಕೇಂದ್ರಿಕೃತ ವ್ಯವಸ್ಥೆ; ಸಚಿವ ಸುಧಾಕರ್​ ಭರವಸೆ

    ಬೆಂಗಳೂರು: ಲಾಕ್ ಡೌನ್ ಸಂದರ್ಭದಲ್ಲಿ ಸೋಂಕಿತರ ಸಂಪರ್ಕ ಪತ್ತೆಗೆ ಬೂತ್ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಗಳ ಬಳಕೆ ಮಾಡಿಕೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

    ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಪ್ರಮುಖ ವಿಚಾರಗಳನ್ನು ಚರ್ಚಿಸಲು ಹಿರಿಯ ಅಧಿಕಾರಿಗಳೊಂದಿಗೆ ಸುಧಾಕರ್ ಭಾನುವಾರ ವಿಡಿಯೋ ಕಾನ್ಫೆರೆನ್ಸ್ ಮೂಲಕ ಸಭೆ ನಡೆಸಿದರು. ಜತೆಗೆ, ರಾಜಧಾನಿಯಲ್ಲಿ ಕೋವಿಡ್​ ರೋಗಿಗಳಿಗೆ ಹಾಸಿಗೆಗಳ ಹಂಚಿಕೆಗೆ ಸಮರ್ಪಕ ಕೇಂದ್ರೀಕೃತ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

    ಇದನ್ನೂ ಓದಿ; ಪೊಲೀಸರಿಗೂ ಮನೆಯಿಂದಲೇ ಕೆಲಸ; ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೂಚನೆ

    ಸೋಂಕು ಧೃಢಪಟ್ಟವರಿಗೆ ಮತ್ತು ಸೋಂಕಿತರ ಪ್ರಾಥಮಿಕ ಸಂಪರ್ಕಗಳಿಗೆ ಮಾಹಿತಿ ನೀಡಲು, ರೋಗಲಕ್ಷಣವಿರುವ ಹಾಗೂ ರೋಗಲಕ್ಷಣವಿಲ್ಲದ ಸೋಂಕಿತರಿಗೆ ಕೋವಿಡ್ ಕೇರ್ ಸೆಂಟರ್, ಆಸ್ಪತ್ರೆ, ಅಂಬುಲೆನ್ಸ್ ಸಂಯೋಜನೆಗಾಗಿ ಸಾರ್ವಜನಿಕರ ಅನುಕೂಲಕ್ಕೆ ಸಹಾಯವಾಣಿ ವ್ಯವಸ್ಥೆ ಮಾಡಲಾಗುತ್ತದೆ.

    ಇದಲ್ಲದೇ, ಇತರ ಹಲವು ವಿಷಯಗಳನ್ನು ಚರ್ಚಿಸಲಾಯಿತು.

    • ರಾಪಿಡ್ ಆಂಟಿಜೆನ್ ಟೆಸ್ಟ್ ಅವಶ್ಯಕತೆ ಇರುವ ಕ್ಲಸ್ಟರ್​ಗಳನ್ನು ಗುರುತಿಸುವುದು ಮತ್ತು ರೋಗಿಗಳನ್ನು ದಾಖಲಿಸಿಕೊಳ್ಳಲು ಇರುವ ಗೊಂದಲ ನಿವಾರಿಸಲು ಆಸ್ಪತ್ರೆಗಳಲ್ಲಿ ಆಂಟಿಜೆನ್ ಟೆಸ್ಟ್ ವ್ಯವಸ್ಥೆ ಕಲ್ಪಿಸುವುದು.
    • RT-PCR ಪರೀಕ್ಷೆಯ ಸ್ಯಾಂಪಲ್ ಗಳನ್ನು ಸರ್ಕಾರಿ ಮತ್ತು ಖಾಸಗಿ ಲ್ಯಾಬ್ ಗಳಿಗೆ ಸಮರ್ಪಕವಾಗಿ ಹಂಚುವ ಮೂಲಕ ವರದಿ ವಿಳಂಬವಾಗದಂತೆ ಕ್ರಮ ಕೈಗೊಳ್ಳುವುದು.
    • ಆಂಬುಲೆನ್ಸ್ ಲಭ್ಯತೆ ಹೆಚ್ಚಿಸುವುದು ಮತ್ತು ರಾಪಿಡ್ ಆಂಟಿಜೆನ್ ಟೆಸ್ಟ್​ಗಾಗಿ ಮೊಬೈಲ್ ಟೆಸ್ಟಿಂಗ್ ವಾಹನ ಸಜ್ಜುಗೊಳಿಸುವುದು.

    ಇದನ್ನೂ ಓದಿ; ಲಾಕ್​ಡೌನ್​ನಿಂದ ಕೈಗಾರಿಕೆಗಳಿಗೆ ವಿನಾಯ್ತಿ ನೀಡಿ; ಇಲ್ಲದಿದ್ದರೆ ಮತ್ತೆ ಸಂಕಷ್ಟ; ಸಿಎಂಗೆ ಮನವಿ

    ಅಪರ ಮುಖ್ಯ ಕಾರ್ಯದರ್ಶಿಗಳಾದ ಜಾವೇದ್ ಅಕ್ತರ್, ಶಾಲಿನಿ ರಜನೀಶ್, ಎಲ್.ಎ.ಆತೀಕ್, ಬಿಬಿಎಂಪಿ ಆಯುಕ್ತ ಬಿ.ಎಚ್.ಅನಿಲ್ ಕುಮಾರ್, ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಟಿ.ಕೆ.ಅನಿಲ್ ಕುಮಾರ್, ಆರೋಗ್ಯ ಇಲಾಖೆ ಆಯುಕ್ತ ಪಂಕಜ್ ಪಾಂಡೆ ಮತ್ತು ಇತರೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

    ಪೊಲೀಸರೇ ನನ್ನ ಎನ್​ಕೌಂಟರ್​ ಮಾಡ್ತಾರೆ…! ರಕ್ಷಣೆಗೆ ಸುಪ್ರೀಂಕೋರ್ಟ್​ ಮೊರೆ ಹೋದ ಸಬ್​ ಇನ್​ಸ್ಪೆಕ್ಟರ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts