ಸಿಬಿಐಗೆ ನೂತನ ಸಾರಥಿಯನ್ನು ನೇಮಿಸಿದ ಕೇಂದ್ರ ಸರ್ಕಾರ

ನವದೆಹಲಿ: ಮಧ್ಯಪ್ರದೇಶದ ಮಾಜಿ ಪೊಲೀಸ್‌ ಮಹಾನಿರ್ದೇಶಕ ರಿಷಿ ಕುಮಾರ್‌ ಶುಕ್ಲಾ ಅವರನ್ನು ಸಿಬಿಐನ ನೂತನ ನಿರ್ದೇಶಕರನ್ನಾಗಿ ನೇಮಿಸಿದೆ.

ಈ ಕುರಿತು ಸುತ್ತೋಲೆ ಹೊಡಿಸಿರುವ ಕೇಂದ್ರ ಸರ್ಕಾರವು 1983ನೇ ಬ್ಯಾಚ್‌ನ ಐಪಿಎಸ್‌ ಅಧಿಕಾರಿಯಾಗಿರುವ ಶುಕ್ಲಾ ಅವರನ್ನು ಸಿಬಿಐನ ನಿರ್ದೇಶಕರನ್ನಾಗಿ ನೇಮಿಸಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯ್‌ ಮತ್ತು ವಿಪಕ್ಷ ನಾಯಕ ಮಲ್ಲಿಕಾರ್ಜುನ್‌ ಖರ್ಗೆ ಅವರನ್ನೊಳಗೊಂಡ ಉನ್ನತ ಮಟ್ಟದ ಸಮಿತಿಯು 30 ಕ್ಕೂ ಅಧಿಕ ಸ್ಪರ್ಧಿಗಳ ಪೈಕಿ ಶುಕ್ಲಾ ಅವರ ಹೆಸರನ್ನು ಅಂತಿಮಗೊಳಿಸಿದ್ದಾರೆ.

ಶುಕ್ಲಾ ಅವರು ಎರಡು ವರ್ಷಗಳ ಅವಧಿಗೆ ಸಿಬಿಐನ ನಿರ್ದೇಶಕರಾಗಿ ಮುನ್ನಡೆಯಲಿದ್ದಾರೆ. (ಏಜೆನ್ಸೀಸ್)