More

    ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಸಲ್ಲದು

    ದೇವದುರ್ಗ: ರೈತರ ಆದಾಯ ದ್ವಿಗುಣಗೊಳಿಸಲು ಒತ್ತಾಯಿಸಿ ಕರ್ನಾಟಕ ರೈತ ಸಂಘದ ಪ್ರಮುಖರು ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

    ಇದನ್ನೂ ಓದಿ: ಮಿತಿ ಮೀರಿದೆ ಕಾಂಗ್ರೆಸ್‌ನ ಹಿಂದೂ ವಿರೋಧಿ ನೀತಿ -ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. ಹೇಳಿಕೆ

    ಕೇಂದ್ರ ಸರ್ಕಾರದ ಜನವಿರೋಧಿ ನೀತಿಯಿಂದ ರೈತರು, ಕೂಲಿಕಾರರು, ಬಡವರು ತೀವ್ರ ಸಂಕಷ್ಟ ಎದುರಿಸುವಂತಾಗಿದೆ. ದೇಶದಲ್ಲಿ ಬಡತನ ಪ್ರಮಾಣ ಕಡಿಮೆಯಾಗಿದೆ ಎಂದು ಸುಳ್ಳು ಹರಡಲಾಗುತ್ತಿದೆ.

    ಬಡವರು ಹಾಗೂ ಶ್ರೀಮಂತರ ನಡುವಿನ ಅಂತರ ದಿನೇ ದಿನೆ ಹೆಚ್ಚುತ್ತಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಬಂಡವಾಳಶಾಹಿ, ಶ್ರೀಮಂತರ, ಕಾರ್ಪೋರೇಟ್ ಕಂಪನಿಗಳ ಪರವಾಗಿ ಕೆಲಸ ಮಾಡುತ್ತಿದೆ. ಕಾರ್ಮಿಕರ, ಕೃಷಿ ಕಾನೂನು ತಿದ್ದುಪಡಿ ಮಾಡಿ ಜನರಿಗೆ ಅನ್ಯಾಯ ಮಾಡುತ್ತಿದೆ ಎಂದು ದೂರಿದರು.

    ತಾಲೂಕು ಅಧ್ಯಕ್ಷ ಕೆ.ಗುರುಲಿಂಗಸ್ವಾಮಿ, ಪ್ರಧಾನ ಕಾರ್ಯದರ್ಶಿ ದುರುಗಣ್ಣ ಇರಬಗೇರಾ, ಮುಖಂಡರಾದ ಶಫಿಕ್ ಪಾಷಾ, ಜಯಗೌಡ, ಮಲ್ಲಪ್ಪ ಅಂಜಳ, ದೊಡ್ಡ ಯಂಕಪ್ಪ ವೆಂಗಳಾಪುರ, ದೊಡ್ಡ ದುರುಗಣ್ಣ ಗಲಗ, ರಮೇಶ, ಸಿದ್ದಲಿಂಗಪ್ಪ, ಆಂಜಿನೇಯ, ಹನುಮಯ್ಯ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts