More

    ಹೊಸ ವರ್ಷಕ್ಕೆ ಕೇಂದ್ರ ಸರ್ಕಾರದಿಂದ ಗಿಫ್ಟ್‌: ಪೆಟ್ರೋಲ್, ಡೀಸೆಲ್‌​​ ಬೆಲೆಯಲ್ಲಿ ಇಳಿಕೆ?

    ಬೆಂಗಳೂರು: 2024 ರ ಮೊದಲಾರ್ಧದಲ್ಲಿ ಸಾರ್ವತ್ರಿಕ ಚುನಾವಣೆ ನಿಗದಿಪಡಿಸಲಾಗಿದ್ದು, ವರ್ಷಾಂತ್ಯದ ಮೊದಲು ಪೆಟ್ರೋಲ್ ಮತ್ತು ಡೀಸೆಲ್‌ ಬೆಲೆ ಕಡಿತದ ಕುರಿತು ಪ್ರಧಾನಿ ನರೇಂದ್ರ ಮೋದಿಯವರು ಯೋಜಿಸುತ್ತಿದ್ದಾರೆ. ಪ್ರತಿ ಲೀಟರ್‌ಗೆ 10 ರೂ. ಇಳಿಕೆಯಾಗಬಹುದು ಎನ್ನಲಾಗಿದೆ. ಇಳಿಕೆಯು ಏಪ್ರಿಲ್ ಮತ್ತು ಮೇ 2024 ರ ಲೋಕಸಭಾ ಚುನಾವಣೆಯ ಮೊದಲು ಸಂಭವಿಸುವ ನಿರೀಕ್ಷೆಯಿದೆ.

    ವರದಿಗಳ ಪ್ರಕಾರ, ಪೆಟ್ರೋಲಿಯಂ ಸಚಿವಾಲಯವು ಗುರುವಾರ ಪ್ರಧಾನಿ ಮೋದಿಯವರ ಅನುಮೋದನೆಗಾಗಿ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್‌ನಲ್ಲಿ 8 ರಿಂದ 10 ರೂಪಾಯಿಗಳವರೆಗಿನ ಕಡಿತವನ್ನು ಒಳಗೊಂಡ ಪ್ರಸ್ತಾವನೆಯನ್ನು ಸಿದ್ಧಪಡಿಸಿದೆ. ಪೆಟ್ರೋಲ್ ಮತ್ತು ಡೀಸೆಲ್ ಎರಡರಲ್ಲೂ ₹10 ಇಳಿಕೆಯಾಗಬಹುದು. ಎರಡೂ ಇಂಧನಗಳ ಮೇಲಿನ ಕೇಂದ್ರೀಯ ಅಬಕಾರಿ ಸುಂಕವನ್ನು ಕಡಿಮೆ ಮಾಡುವ ಮೂಲಕ ಕ್ರಮವಾಗಿ ₹8 ಮತ್ತು ₹ 6 ರಷ್ಟು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಕಡಿಮೆ ಮಾಡಲು ಕೇಂದ್ರವು ನಿರ್ಧರಿಸಿದೆ. ಸುಮಾರು ಎರಡು ವರ್ಷಗಳ ನಂತರ ಈ ಕ್ರಮವನ್ನು ಕೈಗೊಳ್ಳಲಾಗುತ್ತಿದೆ.

    ಪ್ರಸ್ತುತ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕುಸಿಯುತ್ತಿದ್ದು, ಭಾರತದಲ್ಲಿ ಇಂಧನ ವೆಚ್ಚವನ್ನು ಕಡಿಮೆ ಮಾಡುವಾಗ ಇದನ್ನು ಗಣನೆಗೆ ತೆಗೆದುಕೊಳ್ಳಲಾಗುತ್ತದೆ.

    ದೇಶದಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನವೀಕರಿಸಲಾಗುತ್ತದೆ. ಜಾಗತಿಕ ಮಾರುಕಟ್ಟೆಯಲ್ಲಿನ ಕಚ್ಚಾ ತೈಲ ಬೆಲೆಗಳ ಆಧಾರದ ಮೇಲೆ ಈ ಬೆಲೆಯನ್ನು ನಿರ್ಧರಿಸಲಾಗುತ್ತದೆ. 2024 ರ ಆರಂಭದ ಮೊದಲು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಕಡಿಮೆಯಾಗಬಹುದು ಎಂದು ಜನರು ನಿರೀಕ್ಷಿಸುತ್ತಿದ್ದಾರೆ. ಆದರೆ ಕಳೆದ ವರ್ಷ ಮೇ 2022 ರಿಂದ ರಾಷ್ಟ್ರೀಯ ಮಟ್ಟದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ದೇಶದಲ್ಲಿ ಅವುಗಳ ಬೆಲೆ ಒಂದೇ ಆಗಿರುತ್ತದೆ.

    ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ವರದಿಗಳ ಪ್ರಕಾರ, ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ $ 72.05 ಆಗಿದೆ. ಎಲ್ಲಾ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಏಕೆ ವಿಭಿನ್ನವಾಗಿವೆ ಎಂಬ ಪ್ರಶ್ನೆ ಅನೇಕ ಜನರ ಮನಸ್ಸಿನಲ್ಲಿದೆ.

    ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಜಿಎಸ್​​​ಟಿ ಅನ್ವಯಿಸುವುದಿಲ್ಲ. ಇದರ ಮೇಲೆ ರಾಜ್ಯ ಸರ್ಕಾರದಿಂದ ವ್ಯಾಟ್ (ಮೌಲ್ಯವರ್ಧಿತ ತೆರಿಗೆ) ವಿಧಿಸಲಾಗುತ್ತದೆ. ಈ ಕಾರಣದಿಂದಾಗಿ ಎಲ್ಲಾ ನಗರಗಳಲ್ಲಿ ಅವುಗಳ ಬೆಲೆಗಳು ವಿಭಿನ್ನವಾಗಿವೆ. ಇಂದು ನಿಮ್ಮ ನಗರದಲ್ಲಿ ಒಂದು ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ ನೋಡೋಣ ಬನ್ನಿ..

    ಮಹಾನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳು
    ರಾಜಧಾನಿ ದೆಹಲಿಯಲ್ಲಿ ಪ್ರತಿ ಲೀಟರ್​​​​ಗೆ ಪೆಟ್ರೋಲ್ 96.72 ರೂ., ಡೀಸೆಲ್ 89.62 ರೂ.
    ಕೋಲ್ಕತ್ತಾದಲ್ಲಿ ಪ್ರತಿ ಲೀಟರ್​​​​ಗೆ ಪೆಟ್ರೋಲ್ 106.03 ರೂ. ಮತ್ತು ಡೀಸೆಲ್ 92.76 ರೂ.
    ಮುಂಬೈನಲ್ಲಿ ಪ್ರತಿ ಲೀಟರ್​​​​ಗೆ ಪೆಟ್ರೋಲ್ 106.31 ರೂ. ಮತ್ತು ಡೀಸೆಲ್ 94.27 ರೂ.
    ಚೆನ್ನೈನಲ್ಲಿ ಪ್ರತಿ ಲೀಟರ್​​​​ಗೆ ಪೆಟ್ರೋಲ್ 102.63 ರೂ. ಮತ್ತು ಡೀಸೆಲ್ 94.24 ರೂ.

    ಇತರ ನಗರಗಳಲ್ಲಿ ಬೆಲೆ ಎಷ್ಟು?
    ಬೆಂಗಳೂರಿನಲ್ಲಿ ಪ್ರತಿ ಲೀಟರ್​​ಗೆ ಪೆಟ್ರೋಲ್ 101.94 ರೂ. ಮತ್ತು ಡೀಸೆಲ್ 87.89 ರೂ.
    ನೋಯ್ಡಾದಲ್ಲಿ ಪ್ರತಿ ಲೀಟರ್​​ಗೆ ಪೆಟ್ರೋಲ್ 96.65 ರೂ. ಮತ್ತು ಡೀಸೆಲ್ 89.82 ರೂ.
    ಗುರುಗ್ರಾಮ್‌ನಲ್ಲಿ ಪ್ರತಿ ಲೀಟರ್​​ಗೆ ಪೆಟ್ರೋಲ್ 97.04 ರೂ. ಮತ್ತು ಡೀಸೆಲ್ 89.91 ರೂ.
    ಜೈಪುರದಲ್ಲಿ ಪ್ರತಿ ಲೀಟರ್​​ಗೆ ಪೆಟ್ರೋಲ್ 108.48 ರೂ. ಮತ್ತು ಡೀಸೆಲ್  93.72 ರೂ.
    ಪಾಟ್ನಾದಲ್ಲಿ ಪ್ರತಿ ಲೀಟರ್​​ಗೆ ಪೆಟ್ರೋಲ್ 107.24 ರೂ. ಮತ್ತು ಡೀಸೆಲ್ 94.04 ರೂ.
    ಲಕ್ನೋದಲ್ಲಿ ಪ್ರತಿ ಲೀಟರ್​​ಗೆ ಪೆಟ್ರೋಲ್ 96.47 ರೂ. ಮತ್ತು ಡೀಸೆಲ್ 89.66 ರೂ.
    ಹೈದರಾಬಾದ್‌ನಲ್ಲಿ ಪ್ರತಿ ಲೀಟರ್​​ಗೆ ಪೆಟ್ರೋಲ್ 109.66 ರೂ. ಮತ್ತು ಡೀಸೆಲ್ 97.82 ರೂ.
    ಚಂಡೀಗಢದಲ್ಲಿ ಪ್ರತಿ ಲೀಟರ್​​ಗೆ ಪೆಟ್ರೋಲ್ 96.20 ರೂ. ಮತ್ತು ಡೀಸೆಲ್ 84.26 ರೂ.

    ಚಿತ್ರದುರ್ಗದ ಪಾಳು ಬಿದ್ದ ಮನೆಯಲ್ಲಿ ಐದು ಅಸ್ಥಿಪಂಜರ ಪತ್ತೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts