ಅನ್ನಭಾಗ್ಯ ಯೋಜನೆಗೆ ರಾಜ್ಯಕ್ಕೆ ಅಕ್ಕಿ ನೀಡಲು ನಿರಾಕರಿಸಿದ ಕೇಂದ್ರ ಸರ್ಕಾರ: ಕೆ.ಎಚ್​.ಮುನಿಯಪ್ಪ

kh muniyappa
Published on

ನವದೆಹಲಿ: ಅನ್ನಭಾಗ್ಯ ಯೋಜನೆಗೆ ಬೇಕಾಗಿರುವ 5 ಕೆಜಿ ಅಕ್ಕಿ ನೀಡಲು ಕೇಂದ್ರ ಸರ್ಕಾರ ನಿರಾಕರಿಸಿದೆ ಎಂದು ಆಹಾರ ಸಚಿವ ಕೆ.ಎಚ್​. ಮುನಿಯಪ್ಪ ಆರೋಪಿಸಿದ್ದಾರೆ.

ಕೇಂದ್ರ ಸಚಿವ ಪಿಯೂಷ್​ ಗೋಯಲ್​ ಭೇಟಿ ಬಳಿಕ ಮಾತನಾಡಿದ ಮುನಿಯಪ್ಪ ಬಡತನದ ರೇಖೆಗಿಂತ ಕೆಳಗಿರುವ ಜನರಿಗೆ ಒದಗಿಸಲು 1.35 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ನೀಡಲು ನಾವು ವಿನಂತಿಸಿದ್ದೇವೆ. ಆದರೆ, ಕೇಂದ್ರ ಆಹಾರ ಸಚಿವರು ಅಕ್ಕಿಯನ್ನು ನೀಡಲು ನಿರಾಕರಿಸಿದ್ಧಾರೆ ಎಂದು ತಿಳಿಸಿದ್ದಾರೆ.

KHM

ಕೇಂದ್ರ ಸರ್ಕಾರದ ಬಳಿ ಅಕ್ಕಿ ದಾಸ್ತಾನು ಇದ್ದರೂ ಸಹ ರಾಜಕೀಯ ದುರುದ್ದೇಶದಿಂದ ನಮ್ಮ ಬೇಡಿಕೆಯನ್ನು ನಿರಾಕರಿಸಿದ್ಧಾರೆ. ಸಚಿವ ಪಿಯೂಶ್​ ಗೋಯೆಲ್​ರನ್ನು ಭೇಟಿ ಮಾಡಲು ಕಳೆದ ಮೂರು ದಿನಗಳಿಂದ ಪ್ರಯತ್ನ ನಡೆಸಿದ್ದೇನೆ. ಆದರೂ, ಅವರು ಭೇಟಿಗೆ ಅವಕಾಶ ಕೊಟ್ಟಿರಲಿಲ್ಲ ಎಂದು ಕಿಡಿಕಾರಿದ್ಧಾರೆ.

ಕೇಂದ್ರ ಸಚಿವರು 300 ಲಕ್ಷ ಅಕ್ಕಿಯನ್ನು ಟನ್​ ವಿವಿಧ ಯೋಜನೆಗಳಿಗೆ ಮೀಸಲಿಡಲಾಗಿದೆ ಆದ್ದರಿಂದ ರಾಜ್ಯಕ್ಕೆ ಅಕ್ಕಿ ನೀಡಲು ಸಾಧ್ಯವಾಗುವುದಿಲ್ಲ. ಆದರೂ, ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತಂದೆ ತರುತ್ತದೆ ಎಂದು ಸಚಿವ ಕೆ.ಎಚ್​.ಮುನಿಯಪ್ಪ ತಿಳಿಸಿದ್ಧಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net