20.4 C
Bangalore
Monday, December 9, 2019

ಕೇಂದ್ರ ಸರ್ಕಾರ ಜಮ್ಮುಕಾಶ್ಮೀರದಲ್ಲಿ ಉಗ್ರರಿಗೆ ಸ್ಥಳಾವಕಾಶ ಕಲ್ಪಿಸಿ, ರಾಜಕೀಯ ನಿರ್ವಾತ ಸೃಷ್ಟಿಸುತ್ತಿದೆ: ರಾಹುಲ್​ ಗಾಂಧಿ ಆರೋಪ

Latest News

ಬೈ ಎಲೆಕ್ಷನ್ ರಿಸಲ್ಟ್​| ಯಲ್ಲಾಪುರದಲ್ಲಿ ಮೂರನೇ ಸುತ್ತು ಮತ ಎಣಿಕೆ ಅಂತ್ಯ

ಕಾರವಾರ: ರಾಜ್ಯದ ಉಪಚುನಾವಣಾ ಸಮರದಲ್ಲಿ ಗಮನಸೆಳೆದಿರುವ ಯಲ್ಲಾಪುರ ಕ್ಷೇತ್ರದ ಮತಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು ಮೂರನೇ ಸುತ್ತು ಮುಕ್ತಾಯವಾದಾಗ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಬಿಜೆಪಿ...

ರಾಣೇಬೆನ್ನೂರಿನಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ ಮುನ್ನಡೆ

ಹಾವೇರಿ: ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ 417 ಮತಗಳ ಮುನ್ನಡೆ ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್​ನ...

ಬೈಎಲೆಕ್ಷನ್ ರಿಸಲ್ಟ್| ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ ಸಿ ಪಾಟೀಲ್ ಮುನ್ನಡೆ

ಹಾವೇರಿ: ಕುತೂಹಲ ಕೆರಳಿಸಿರುವ ಕರ್ನಾಟಕ ಅಸೆಂಬ್ಲಿಯ ಬೈ ಎಲೆಕ್ಷನ್​ನ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಎರಡು ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಮೊದಲ ಸುತ್ತಿನ ಮತಎಣಿಕೆ ಮುಕ್ತಾಯ: ಕೆ.ಆರ್​.ಪೇಟೆಯಲ್ಲಿ ಜೆಡಿಎಸ್​, ಹುಣಸೂರಿನಲ್ಲಿ ಕಾಂಗ್ರೆಸ್​ ಮುನ್ನಡೆ

ಹುಣಸೂರು/ಕೆ.ಆರ್​ಪೇಟೆ: ಕೆ.ಆರ್​.ಪೇಟೆ ಕ್ಷೇತ್ರದ ಉಪಚುನಾವಣೆಯ ಅಂಚೆ ಮತಎಣಿಕೆಯಲ್ಲಿ ಮುಂದಿದ್ದ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಮೊದಲ ಸುತ್ತಿನ ಮತಎಣಿಕೆಯಲ್ಲಿ ಹಿಂದೆ ಉಳಿದಿದ್ದು, ಜೆಡಿಎಸ್​ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಚಿಕ್ಕಬಳ್ಳಾಪುರದಲ್ಲಿ 31 ಅಂಚೆಮತದಲ್ಲಿ 27 ಸ್ವೀಕೃತ, ಬಿಜೆಪಿ ಅಭ್ಯರ್ಥಿ ಸುಧಾಕರ್​ ಮುನ್ನಡೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ನಡೆದ ಅಂಚೆ ಮತಎಣಿಕೆಯಲ್ಲಿ ಚಲಾವಣೆಯಾದ ಒಟ್ಟು 31 ಅಂಚೆಮತದಲ್ಲಿ 27 ಸ್ವೀಕೃತವಾಗಿವೆ. ಅಂಚೆ ಮತೆಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಸುಧಾಕರ್​...

ನವದೆಹಲಿ: ಜಮ್ಮುಕಾಶ್ಮೀರ ವಿಚಾರಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್​ ಸಂಸದ ರಾಹುಲ್​ ಗಾಂಧಿ ಮತ್ತೊಮ್ಮೆ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಅಲ್ಲಿನ ರಾಜಕೀಯ ಮುಖಂಡರನ್ನು ಬಂಧನದಲ್ಲಿ ಇಟ್ಟಿದ್ದನ್ನು ತೀವ್ರವಾಗಿ ವಿರೋಧಿಸಿದ್ದಾರೆ.

ಟ್ವೀಟ್​ ಮಾಡಿರುವ ಅವರು, ಜಮ್ಮುಕಾಶ್ಮೀರದಲ್ಲಿ ಉಗ್ರರಿಗೆ ಸ್ಥಳ ಕಲ್ಪಿಸಿಕೊಡುವ ಕೆಲಸವನ್ನು ಕೇಂದ್ರ ಸರ್ಕಾರ ಕೂಡಲೇ ನಿಲ್ಲಿಸಬೇಕು ಹಾಗೂ ಫಾರೂಕ್​ ಅಬ್ದುಲ್ಲಾ ಸೇರಿ ಬಂಧನದಲ್ಲಿರುವ ಅಲ್ಲಿನ ಎಲ್ಲ ರಾಜಕೀಯ ಮುಖಂಡರನ್ನೂ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಕೇಂದ್ರ ಸರ್ಕಾರ ಕಾಶ್ಮೀರದ ರಾಷ್ಟ್ರೀಯತಾವಾದಿ ರಾಜಕೀಯ ನಾಯಕರನ್ನು ಅಲ್ಲಿಂದ ತೊಡೆದು ಹಾಕಿ ಅವರ ಬದಲಿಗೆ ಜಮ್ಮುಕಾಶ್ಮೀರದಲ್ಲಿ ಉಗ್ರರನ್ನು ತುಂಬಲು ಪ್ರಯತ್ನಿಸುತ್ತಿರುವುದು ಖಚಿತವಾಗಿದೆ. ಈ ಮೂಲಕ ಅಲ್ಲಿ ರಾಜಕೀಯ ನಿರ್ವಾತ ಸೃಷ್ಟಿಸುತ್ತಿದೆ ಎಂದು ರಾಹುಲ್​ ಗಾಂಧಿ ಹೇಳಿದ್ದಾರೆ. ಕಾಶ್ಮೀರವನ್ನು ರಾಜಕೀಯ ಉಪಕರಣವನ್ನಾಗಿಸಿಕೊಂಡು ಇಡೀ ದೇಶವನ್ನು ಒಡೆಯಲು ಕೇಂದ್ರ ಮುಂದಾಗಿದೆ ಎಂದು ಆರೋಪ ಮಾಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಫಾರೂಕ್​ ಅಬ್ದುಲ್ಲಾ ಅವರನ್ನು ಸಾರ್ವಜನಿಕ ಭದ್ರತೆ ಕಾಯ್ದೆಯಡಿ ಬಂಧಿಸಲಾಗಿದ್ದು ಶ್ರೀನಗರದಲ್ಲಿರುವ ಅವರ ನಿವಾಸವನ್ನೇ ತಾತ್ಕಾಲಿಕ ಜೈಲಾಗಿ ಪರಿವರ್ತಿಸಿ, ಅವರನ್ನು ಅಲ್ಲಿ ಇರಿಸಲಾಗಿದೆ. ಈ ಬೆಳವಣಿಗೆ ಬಳಿಕ ಕಾಂಗ್ರೆಸ್​ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ.

Stay connected

278,743FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...