More

    ಬೆಂಗಳೂರು ಸೇರಿದಂತೆ ಹಲವೆಡೆ ವಿಮಾನ ಸಂಚಾರ ರದ್ದು; ವರದಿ ಕೇಳಿದ ಸರ್ಕಾರ

    ನವದೆಹಲಿ: ದೇಶದ ಪ್ರಮುಖ ವಿಮಾನಯಾನ ಸಂಸ್ಥೆ ವಿಸ್ತಾರ ಏರ್​ಲೈನ್ಸ್​ನಲ್ಲಿ ಸಂಕಷ್ಟ ಮುಂದುವರೆದಿದ್ದು, ಮಂಗಳವಾರ ಮುಂಜಾನೆ ಬೆಂಗಳೂರು ಸೇರಿದಂತೆ ವಿವಿಧ ನಗರಗಳಿಗೆ ಸಂಚರಿಸಬೇಕಿದ್ದ 38 ವಿಮಾನಗಳ ಹಾರಾಟವನ್ನು ರದ್ದುಪಡಿಸಲಾಗಿದೆ.

    ಪೈಲಟ್‌ಗಳ ಲಭ್ಯತೆಯಿಲ್ಲದ ಕಾರಣ ವಿಮಾನ ಸಂಚಾರ ಸ್ಥಗಿತಗೊಂಡಿದ್ದು, ಮುಂಬೈನಿಂದ 15 ವಿಮಾನಗಳು, ದೆಹಲಿಯಿಂದ 12 ಮತ್ತು ಬೆಂಗಳೂರಿನಿಂದ 11 ವಿಮಾನಗಳ ಹಾರಾಟ ರದ್ದಾಗಿವೆ. ಸೋಮವಾರ 50ಕ್ಕೂ ಹೆಚ್ಚು ವಿಮಾನಗಳ ಸಂಚಾರವನ್ನು ರದ್ದುಪಡಿಸಲಾಗಿತ್ತು. 160ಕ್ಕೂ ಹೆಚ್ಚು ವಿಮಾನಗಳು ವಿಳಂಬವಾಗಿ ಸಂಚರಿಸಿದ್ದವು.

    ನಮ್ಮ ಗ್ರಾಹಕರಿಗೆ ಅನಾನುಕೂಲತೆ ಆಗಿರುವುದನ್ನು ನಾವು ಒಪ್ಪಿಕೊಳ್ಳುತ್ತೇವೆ. ಅದಕ್ಕಾಗಿ ತೀವ್ರ ಕಳವಳ ವ್ಯಕ್ತಪಡಿಸುತ್ತೇವೆ. ಪ್ರಯಾಣಕರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಲು ನಮ್ಮ ತಂಡ ಕೆಲಸ ಮಾಡುತ್ತಿದೆ. ನಮ್ಮ ನೆಟ್‌ವರ್ಕ್‌ನಾದ್ಯಂತ ಸಾಕಷ್ಟು ಸಂಪರ್ಕವನ್ನು ಖಚಿತಪಡಿಸಿಕೊಳ್ಳಲುವಿಮಾನಗಳ ಸಂಖ್ಯೆಯನ್ನು ತಾತ್ಕಾಲಿಕವಾಗಿ ಕಡಿಮೆ ಮಾಡಲು ನಿರ್ಧರಿಸಿದೆ ಎಂದು ವಿಸ್ತಾರ ಏರ್​ಲೈನ್ಸ್​ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

    ಇದನ್ನೂ ಓದಿ: ತಂದೆ-ಮಗನ ಬಂಡಾಯ ಶಮನಗೊಳಿಸಿದ ಬಿಎಸ್​ವೈ; ಬಳಿಕ ಹೇಳಿದ್ದಿಷ್ಟು

    ಇತ್ತ ವಿಸ್ತಾರ ಏರ್​ಲೈನ್ಸ್​ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ವಿಮಾನ ರದ್ದತಿ ಮತ್ತು ವಿಳಂಬ ಸಂಚಾರಗಳ ಬಗ್ಗೆ ನಾಗರಿಕ ವಿಮಾನಯಾನ ಸಚಿವಾಲಯವು ವಿಸ್ತಾರದಿಂದ ವಿವರವಾದ ವರದಿಯನ್ನು ಕೇಳಿದೆ ಎಂದು ವಿಸ್ತಾರ ಏರ್​ಲೈನ್ಸ್​ನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಸಂಕಷ್ಟಕ್ಕೆ ಕಾರಣವೇನು?

    ಏರ್ ಇಂಡಿಯಾದೊಂದಿಗೆ ವಿಸ್ತಾರ ಏರ್‌ಲೈನ್ ವಿಲೀನಕ್ಕೆ ಮುಂಚಿತವಾಗಿ ಪರಿಷ್ಕೃತ ವೇತನ ಪ್ರಸ್ತಾವ ಕಳುಹಿಸಿರುವುದನ್ನು ಸಂಸ್ಥೆಯ ಪೈಲಟ್​ಗಳು ವಿರೋಧಿಸುತ್ತಿದ್ದಾರೆ. ಸಂಸ್ಥೆಯ ಕ್ರಮದಿಂದ ಅಸಮಾಧಾನಗೊಂಡಿರುವ ಪೈಲಟ್​ಗಳು ಹೆಚ್ಚಿನ ಸಂಖ್ಯೆಯಲ್ಲಿ ಅನಾರೋಗ್ಯದ ಕಾರಣ ನೀಡಿ ಹಠಾತ್​ ರಜೆ ತೆಗೆದುಕೊಳ್ಳುತ್ತಿದ್ದಾರೆ. ಇದರಿಂದಾಗಿ ಒಟ್ಟಾರೆ ಕಾರ್ಯಾಚರಣೆ ಮೇಲೆ ಪರಿಣಾಮ ಉಂಟಾಗಿದೆ.

    ಪೈಲಟ್‌ಗಳಿಗೆ ಪರಿಷ್ಕೃತ ವೇತನ ಪ್ರಸ್ತಾವವನ್ನು ಇ-ಮೇಲ್ ಮೂಲಕ ಕಳುಹಿಸಲಾಗಿದ್ದು, ಸಹಿ ಮಾಡುವಂತೆ ಸೂಚಿಸಲಾಗಿದೆ. ಸಹಿ ಮಾಡದವರನ್ನು ವಿಲೀನದಿಂದ ಹೊರಗಿಡಲಾಗುವುದು ಎಂದು ಪೈಲಟ್‌ಗಳಿಗೆ ಎಚ್ಚರಿಕೆ ನೀಡಲಾಗಿದೆ. ಪರಿಣಾಮವಾಗಿ ಪೈಲಟ್​ಗಳು ಸಂಸ್ಥೆಯ ವಿರುದ್ಧ ಅಸಮಾಧಾನ ಹೊರಹಾಕುತ್ತಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts