ವಯನಾಡು ಭೂಕುಸಿತವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ; ರಾಹುಲ್​ಗಾಂಧಿ

Untitled-design-48-1
Published on

ನವದೆಹಲಿ: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದ ಬಗ್ಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಪ್ರಸ್ತಾಪಿಸಿ ಇದನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು. ಹಾಗೂ ಸಂತ್ರಸ್ತರಿಗೆ ಸಮಗ್ರ ಪುನರ್ವಸತಿ ಪ್ಯಾಕೇಜ್ ಒದಗಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

ಕೆಲವು ದಿನಗಳ ಹಿಂದೆ ನಾನು ನನ್ನ ಸಹೋದರಿಯೊಂದಿಗೆ ವಯನಾಡಿಗೆ ಭೇಟಿ ನೀಡಿದ್ದೆ. ಈ ದುರಂತವು ಎಷ್ಟು ನೋವನ್ನು ಉಂಟುಮಾಡಿದೆ ಎಂದು ನಾನು ಪ್ರತ್ಯಕ್ಷವಾಗಿ ನೋಡಿದ್ದೇನೆ. 200ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಮತ್ತು ಹೆಚ್ಚಿನ ಸಂಖ್ಯೆಯ ಜನರು ಕಾಣೆಯಾಗಿದ್ದಾರೆ. ಆದರೆ ಇಲ್ಲಿಯವರೆಗೂ ಮೃತಪಟ್ಟವರ ಸಂಖ್ಯೆ 400ಕ್ಕಿಂತ ಹೆಚ್ಚು ಎಂದು ನಿರೀಕ್ಷಿಸಲಾಗಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಸೇನೆ, ನೌಕಾಪಡೆ, ಕೋಸ್ಟ್ ಗಾರ್ಡ್, ಅಗ್ನಿಶಾಮಕ ಇಲಾಖೆ ಮತ್ತು ಇತರರು ಮಾಡುತ್ತಿರುವ ಕೆಲಸ ಹಾಗೂ ಕರ್ನಾಟಕ, ತಮಿಳುನಾಡ, ತೆಲಂಗಾಣ ಸೇರಿ ನೆರೆಯ ರಾಜ್ಯಗಳು ನೀಡುತ್ತಿರುವ ಸಹಾಯವನ್ನು ಪ್ರಶಂಸಿಸುತ್ತೇನೆ. ಎಲ್ಲಾ ಸಮುದಾಯದವರು ಒಗ್ಗೂಡಿ ಸಹಾಯ ಮಾಡಿರುವುದು ಸಂತಸ ತಂದಿದೆ ಎಂದು ಸಂಸತ್ತಿಗೆ ರಾಹುಲ್ ಗಾಂಧಿ ತಿಳಿಸಿದರು.

ಸಮಗ್ರ ಪುನರ್ವಸತಿ ಪ್ಯಾಕೇಜ್ ಒದಗಿಸಬೇಕು. ಜನರು ಪಡೆಯುತ್ತಿರುವ ಪರಿಹಾರವನ್ನು ಹೆಚ್ಚಿಸಬೇಕು ಮತ್ತು ವಯನಾಡು ಭೂಕುಸಿತವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಕೇಳುತ್ತಿದ್ದೇನೆ ಎಂದು ಹೇಳಿದರು.

ಕೇರಳದ ಭೂಕುಸಿತ ಪೀಡಿತ ವಯನಾಡು ಪ್ರದೇಶದಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳು ಸತತ ಒಂಬತ್ತನೇ ದಿನವೂ ಮುಂದುವರೆದಿದೆ. ಜುಲೈ 30 ರಂದು ವಯನಾಡಿನ ಚುರಲಾಮಲಾ ಮತ್ತು ಮುಂಡಕ್ಕೈನಲ್ಲಿ ಭಾರೀ ಭೂಕುಸಿತ ಸಂಭವಿಸಿ 300ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಇದಲ್ಲದೇ ಅಪಾರ ಪ್ರಮಾಣದ ಆಸ್ತಿಪಾಸ್ತಿಗೆ ಹಾನಿಯಾಗಿದೆ.(ಏಜೆನ್ಸೀಸ್​​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net