ಚೀನಾದಲ್ಲಿ ಕೋವಿಡ್​ ಆರ್ಭಟ: ಕೇಂದ್ರ ಸರ್ಕಾರದಿಂದ ಇಂದು ಮಹತ್ವದ ಸಭೆ, ಭಾರತದಲ್ಲೂ ಹೆಚ್ಚಿದ ಆತಂಕ

blank

ನವದೆಹಲಿ: ಚೀನಾದಲ್ಲಿ ಕರೊನಾ ವೈರಸ್​ ತಾಂಡವ ಆಡುತ್ತಿರುವ ಬೆನ್ನಲ್ಲೇ ಎಚ್ಚೆತ್ತಿರುವ ಕೇಂದ್ರ ಸರ್ಕಾರ ಇಂದು ಮಹತ್ವದ ಸಭೆ ಕರೆದಿದೆ. ಕೇಂದ್ರ ಆರೋಗ್ಯ ಸಚಿವ ಮನ್ಸುಖ್​ ಮಾಂಡವಿಯಾ ಅವರು ಉನ್ನತ ಅಧಿಕಾರಿಗಳು ಮತ್ತು ತಜ್ಞರ ಸಮ್ಮುಖದಲ್ಲಿ ಪರಿಶೀಲನಾ ಸಭೆ ನಡೆಸಲಿದ್ದು, ಕೋವಿಡ್​ -19 ಸಾಂಕ್ರಮಿಕ ಸ್ಥಿತಿಯನ್ನು ನಿಭಾಯಿಸಲು ಚರ್ಚೆ ನಡೆಸಲಿದ್ದಾರೆ.

ಎಲ್ಲಾ ಕೋವಿಡ್ ಪಾಸಿಟಿವ್ ಪ್ರಕರಣಗಳ ಮಾದರಿಗಳನ್ನು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಗುರುತಿಸಲಾದ INSACOG ಜೀನೋಮ್ ಸೀಕ್ವೆನ್ಸಿಂಗ್ ಲ್ಯಾಬ್‌ಗಳಿಗೆ ಪ್ರತಿದಿನ ಕಳುಹಿಸಬೇಕು ಎಂದು ಸರ್ಕಾರ ಹೇಳಿದೆ. ಭಾರತದಲ್ಲಿ ಕೋವಿಡ್‌ನ ವಿವಿಧ ತಳಿಗಳನ್ನು ಅಧ್ಯಯನ ಮಾಡಲು ಮತ್ತು ಮೇಲ್ವಿಚಾರಣೆ ಮಾಡಲು INSACOG ಆರೋಗ್ಯ ಸಚಿವಾಲಯದ ಅಡಿಯಲ್ಲಿ ಒಂದು ವೇದಿಕೆಯಾಗಿದೆ.

ಜಪಾನ್, ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾ, ರಿಪಬ್ಲಿಕ್ ಆಫ್ ಕೊರಿಯಾ, ಬ್ರೆಜಿಲ್ ಮತ್ತು ಚೀನಾದಲ್ಲಿ ಕರೊನಾ ಪ್ರಕರಣಗಳ ಸಂಖ್ಯೆ ಹಠಾತ್ ಉಲ್ಬಣಗೊಂಡಿದ್ದು, ರೂಪಾಂತರಗಳನ್ನು ಪತ್ತೆಹಚ್ಚಲು ಪಾಸಿಟಿವ್ ಪ್ರಕರಣದ ಮಾದರಿಗಳ ಸಂಪೂರ್ಣ ಜೀನೋಮ್ ಅನುಕ್ರಮ ಸಜ್ಜುಗೊಳಿಸುವುದು ಅತ್ಯಗತ್ಯ ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಎಲ್ಲಾ ರಾಜ್ಯಗಳಿಗೆ ಪತ್ರದ ಮೂಲಕ ಎಚ್ಚರಿಕೆಯನ್ನು ನೀಡಿದ್ದಾರೆ.

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 112 ಹೊಸ ಕರೊನಾ ಪ್ರಕರಣಗಳು ವರದಿಯಾಗಿದೆ. ಸೋಮವಾರ 181 ಪ್ರಕರಣಗಳು ವರದಿಯಾಗಿದ್ದವು. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 3,490 ಇದೆ. ಕಳೆದ 24 ಗಂಟೆಗಳಲ್ಲಿ ಮೂರು ಸಾವುಗಳು ದಾಖಲಾಗಿವೆ. ಕೇರಳದಿಂದ ಇಬ್ಬರು ಮತ್ತು ಮಹಾರಾಷ್ಟ್ರದಿಂದ ಒಬ್ಬರು ಮೃತಪಟ್ಟಿದ್ದಾರೆ.

ಇನ್ನು ಚೀನಾದಲ್ಲಿ ಭಾರೀ ಪ್ರತಿಭಟನೆಯ ಬಳಿಕ ಕರೊನಾ ನಿರ್ಬಂಧವನ್ನು ಸಂಪೂರ್ಣ ಸಡಿಸಲಾಗಿದೆ. ಇದೀಗ ಕರೊನಾ ತಾಂಡವಾಡುತ್ತಿದ್ದ, ಸಾಕಷ್ಟು ಮಂದಿ ಈಗಾಗಲೇ ಮೃತಪಟ್ಟಿದ್ದಾರೆ. ಚಿತಾಗಾರಗಳಲ್ಲಿ ಶವಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕರೊನಾ ನಿರ್ಬಂಧ ಸಡಿಲಿಸಿದ ಬೆನ್ನಲ್ಲೇ ಕರೊನಾ ಆರ್ಭಟ ಹೆಚ್ಚಿರುವುದು ಆತಂಕಕ್ಕೆ ಕಾರಣವಾಗಿದೆ.

ಆಸ್ಪತ್ರೆಗೆ ಬರುತ್ತಿರುವ ಕರೊನಾ ಸೋಂಕಿತರ ಸಂಖ್ಯೆಯು ಹೆಚ್ಚಾಗುತ್ತಿದೆ. ಅದರಲ್ಲೂ ಚೀನಾ ರಾಜಧಾನಿ ಬೀಜಿಂಗ್​ನಲ್ಲಿ ಕರೊನಾ ನಿಯಂತ್ರಣಕ್ಕೆ ಸಿಗದೇ ತುಂಬಾ ವೇಗವಾಗಿ ಹರಡುತ್ತಿದೆ. ಚೀನಾದಲ್ಲಿ ಮತ್ತೊಮ್ಮೆ ಕಠಿಣ ನಿಯಮ ಜಾರಿಯಾಗುವ ಸಾಧ್ಯತೆ ದಟ್ಟವಾಗಿದೆ. (ಏಜೆನ್ಸೀಸ್​)

ಬೆಂಗ್ಳೂರಿನಲ್ಲಿ ಟೆಕ್ಕಿ ವಿಚಿತ್ರ ಸಾವು: ಸಾರ್ವಜನಿಕರ ನೆರವಿನಿಂದ ಕಾರಿಗೆ ಹೊದಿಕೆ ಹೊದಿಸಿದ ಬಳಿಕ ದುರಂತ ಸಾವು

PSI ನೇಮಕಾತಿ ಹಗರಣ ಮೀರಿಸುವಂತಿದೆ ಈ ಬೆಸ್ಕಾಂ ಹಗರಣ: ಅನುಕಂಪದ ಆಧಾರದಲ್ಲಿ 6 ಜನ ನಕಲಿಗಳಿಗೆ ನೌಕರಿ!

ಮೈಮಾಟ ಪ್ರದರ್ಶಿಸಲು ಹೋಗಿ ಎಡವಟ್ಟು: ದುಬೈನಲ್ಲಿ ಬೋಲ್ಡ್​ ಬ್ಯೂಟಿ ಉರ್ಫಿ ಜಾವೇದ್​ ಬಂಧನ

Share This Article

ಈ ಕಾಯಿಲೆಯಿಂದ ಬಳಲುತ್ತಿರುವವರು ಸಿಹಿ ಗೆಣಸಿನಿಂದ ದೂರವಿರಿ; ಇಲ್ಲಿದೆ ಹೆಲ್ತಿ ಮಾಹಿತಿ | Health Tips

ಸಿಹಿ ಗೆಣಸು ಯಾರಿಗೆ ಇಷ್ಟವಿರುವುದಿಲ್ಲ ಹೇಳಿ. ರುಚಿಕರವಾದ ಸಿಹಿಗೆಣಸನ್ನು ಶೀತ ಋತುವಿನಲ್ಲಿ ಕಂಡುಬರುವ ಬೇರು ತರಕಾರಿ…

ಗಿಡಗಳನ್ನು ಹಸಿರಾಗಿಡಲು ಕಡಲೆಕಾಯಿ ಸಿಪ್ಪೆ ಪ್ರಯೋಜನಕಾರಿ; ಇಲ್ಲಿದೆ ಬಳಸುವ ವಿಧಾನ | Tips

ಚಳಿಗಾಲದಲ್ಲಿ ಸಸ್ಯಗಳಿಗೆ ಹೆಚ್ಚಿನ ಕಾಳಜಿ ಬೇಕು. ಏಕೆಂದರೆ ತಂಪಾದ ಗಾಳಿ ಮತ್ತು ಇಬ್ಬನಿಯಿಂದ ತೇವಾಂಶವು ಹೆಚ್ಚಾಗುವುದರಿಂದ…

Kurukshetra | ಕುರುಕ್ಷೇತ್ರ ಯುದ್ಧದ ಕೊನೆಯಲ್ಲಿ ರಣಭೂಮಿಗೆ ದ್ರೌಪದಿಯನ್ನು ಶ್ರೀಕೃಷ್ಣ ಕರೆತಂದಿದ್ದೇಕೆ; ಪರಮಾತ್ಮ ಹೇಳಿದ್ದೇನು?

ಕುರುಕ್ಷೇತ್ರ(Kurukshetra) ಯುದ್ಧದಲ್ಲಿ ಎಲ್ಲಾರೂ ಮರಣ ಹೊಂದಲು ಕಾರಣ ಪಾಂಡವರಲ್ಲ ದ್ರೌಪದಿಯ ಕಣ್ಣೀರು. ಕುರುಕ್ಷೇತ್ರ ಯುದ್ಧ ಮುಗಿದ…