More

    ರಾಜಕೀಯಕ್ಕಿಂತ ಜನಹಿತಕ್ಕೆ ಕೇಂದ್ರದ ಆದ್ಯತೆ: ಮಾಜಿ ಸಿಎಂ ಬಿಎಸ್ ವೈ ಶ್ಲಾಘನೆ

    ಬೆಂಗಳೂರು: ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ತಾಂತ್ರಿಕ ಅಡಚಣೆ ನಿವಾರಿಸಿ, ರಾಜ್ಯದ ಸಂಕಷ್ಟಕ್ಕೆ ಪರಿಹಾರ ಒದಗಿಸಲು ಕೇಂದ್ರ ಸರ್ಕಾರ 3,454 ಕೋಟಿ ರೂ ಬರ ಪರಿಹಾರ ಬಿಡುಗಡೆ ಮಾಡಿದೆ. ರಾಕೀಯಕ್ಕಿಂತಲೂ ಜನಹಿತಕ್ಕೆ ಕೇಂದ್ರ ಆದ್ಯತೆ ನೀಡಿದೆ ಎಂದು ಮಾಜಿ ಸಿಎಂ ಬಿ‌.ಎಸ್.ಯಡಿಯೂರಪ್ಪ ಶ್ಲಾಘಿಸಿದ್ದಾರೆ.

    ಕೇಂದ್ರ ಸರ್ಕಾರ ಬರ ಪರಿಹಾರ ಘೋಷಿಸಿದ ಬೆನ್ನಲ್ಲೇ ಯಡಿಯೂರಪ್ಪ ಅವರು ಸಾಮಾಜಿಕ ಜಾಲತಾಣದ ತಮ್ಮ ಖಾತೆಯಲ್ಲಿ ಸಂದೇಶ ಹಂಚಿಕೊಂಡಿದ್ದಾರೆ. ತೀವ್ರ ಬರಗಾಲದಿಂದ ರೈತರು ತತ್ತರಿಸಿರುವಾಗ ಅವರ ಸಂಕಷ್ಟಕ್ಕೆ ತುರ್ತಾಗಿ ರಾಜ್ಯ ಸರ್ಕಾರ ಸ್ಪಂದಿಸಲಿಲ್ಲ ಎಂದು ಆಕ್ಷೇಪಿಸಿದ್ದಾರೆ‌.

    ರಾಜ್ಯ ಸರ್ಕಾರ ತನ್ನದೇ ಕೀಳು ರಾಜಕೀಯ ಮೇಲಾಟ, ಕೆಸರೆರಚಾಟದಲ್ಲಿ ನಿರತವಾಗಿತ್ತು. ಆದರೆ ಕೇಂದ್ರ ಸರ್ಕಾರ ರಾಜ್ಯದ ರೈತರ ಬವಣೆಗೆ ಸ್ಪಂದಿಸಿ, ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಆಯೋಗದ ಅನುಮತಿ ಪಡೆದು ತ್ವರಿತ ನೆರವಿಗೆ ಧಾವಿಸಿತು ಎಂದು ಯಡಿಯೂರಪ್ಪ ಸಮರ್ಥಿಸಿಕೊಂಡಿದ್ದಾರೆ.

    ಓಲೈಕೆ ರಾಜಕಾರಣ

    ಕರ್ನಾಟಕದಲ್ಲಿ ಕಂಡು ಕೇಳರಿಯದಂತಹ ಬರ ಉಂಟಾದರೂ, ರೈತರಿಗೆ ಬಿಡಿಗಾಸು ಮಧ್ಯಂತರ ಪರಿಹಾರ ನೀಡದೆ ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣ ಓಲೈಕೆ ರಾಜಕಾರಣದಲ್ಲಿ ನಿರತವಾಗಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಚಾಟಿ ಬೀಸಿದ್ದಾರೆ.

    ಸಾಮಾಜಿಕ ಜಾಲತಾಣದ ತಮ್ಮ ಖಾತೆಯಲ್ಲಿ ಸರಣಿ  ಸಂದೇಶ ಹಂಚಿಕೊಂಡಿರುವ ಅವರು,  ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿಯೂ ಕನ್ನಡಿಗರ ಸಂಕಷ್ಟಕ್ಕೆ ನೆರವಾಗಿರುವ ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕಕ್ಕೆ 3,454 ಕೋಟಿ ರೂ ಬರ ಪರಿಹಾರ  ನೀಡುವ ಮೂಲಕ ಸಮಸ್ತ ಕನ್ನಡಿಗರ ಹಿತ ಕಾಯುವ ಕೆಲಸ ಮಾಡಿದ್ದಾರೆ ಎಂದು ಪ್ರಶಂಸಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts