More

    ಇ ಸ್ವತ್ತು ಕುರಿತಂತೆ ಸಾಕಷ್ಟು ದೂರು: ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್ ಅಸಮಾಧಾನ

    ಮಂಡ್ಯ: ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು. ಜತೆಗೆ ಸರ್ಕಾರದ ಯೋಜನೆಗಳನ್ನು ನಿಯಮಗಳನ್ವಯ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವೀರ್ ಆಸ್ಿ ಸೂಚನೆ ನೀಡಿದರು.
    ನಗರದ ಜಿಪಂ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಧಿಕಾರಿಗಳು ಕ್ಷೇತ್ರ ಪ್ರವಾಸ ಕೈಗೊಂಡು ಜನರ ಸಮಸ್ಯೆಗಳನ್ನು ಅರಿತು ಯೋಜನೆ ಅನುಷ್ಠಾನಕ್ಕೆ ತೊಂದರೆ ಇದ್ದಲ್ಲಿ ಪರಿಹರಿಸಬೇಕು. ಜತೆಗೆ ಸರಿಯಾದ ಸಮಯಕ್ಕೆ ಕಚೇರಿ ಹಾಜರಾಗಬೇಕು. ಪಂಚಾಯಿತಿ ಹಂತದಲ್ಲಿ ನಡೆಯುವ ಸಭೆಗೆ ತಪ್ಪದೇ ಹಾಜರಾಗಿ ಜನರಿಗೆ ಯೋಜನೆಗಳ ಬಗ್ಗೆ ಮಾಹಿತಿ ನೀಡಿ ತಡ ಮಾಡದೇ ಯೋಜನೆಗಳನ್ನು ಅನುಷ್ಠಾನ ಮಾಡಬೇಕು ಎಂದರು.
    ಇ ಸ್ವತ್ತು ಕುರಿತಂತೆ ಬಹಳಷ್ಟು ದೂರುಗಳು ಜಿಪಂ ಕಚೇರಿಗೆ ಬರುತ್ತಿದೆ. ಈ ಕುರಿತಂತೆ ಮೊದಲ ಹಂತದಲ್ಲಿ ಸರ್ಕಾರಿ ಕಚೇರಿಗಳಿಗೆ ಸಂಬಂಧಿಸಿದಂತೆ ಇ ಸ್ವತ್ತು ಸೇರ್ಪಡೆಗೆ ಒಂದು ತಿಂಗಳ ಕಾಲಾವಕಾಶ ನೀಡಲಾಗಿದೆ. ಸಾರ್ವಜನಿಕರಿಂದ ಬಂದಿರುವ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು. ತೆರಿಗೆ, ಪಂಚತಂತ್ರ, ಜೆ.ಜೆ.ಎಂ, ಎಸ್.ಬಿ.ಎಂ, ಮನರೇಗಾ ಕುರಿತಂತೆ ಮಾನವ ದಿನಗಳ ರಚನೆ, ಪ್ರಾರಂಭಿಸಿರುವ ಕಾಮಗಾರಿ ಪೂರ್ಣಗೊಳಿಸಬೇಕು. ಮುಂದಿನ ದಿನಗಳಲ್ಲಿ ಕ್ಷೇತ್ರ ಪ್ರವಾಸ ಕೈಗೊಂಡು ಕಚೇರಿವಾರು ಪರಿಶೀಲನೆ ನಡೆಸಲಾಗುವುದು ಎಂದು ಸೂಚನೆ ನೀಡಿದರು.
    ಸಭೆಯಲ್ಲಿ ಜಿಪಂ ಉಪಕಾರ್ಯದರ್ಶಿ ಸಂಜೀವಪ್ಪ, ಯೋಜನಾ ನಿರ್ದೇಶಕ ಧನರಾಜ್ ಬೋರಾಳೆ ಇತರರಿದ್ದರು.
    ಇದೇ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯ ಕಾರ್ಯಕ್ರಮ ಅನುಷ್ಠಾನದಲ್ಲಿ ಗಣನೀಯ ಸಾಧನೆ ಮಾಡಿದ ಏಳು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಗಾಂಧಿ ಗ್ರಾಮ ಪುರಸ್ಕಾರ ನೀಡಿ ಗೌರವಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts