More

    ಸಿರಿಧಾನ್ಯಗಳ ಜಾಗೃತಿ ವಾಕ್‌ಥಾನ್‌

    ಧಾರವಾಡ: ಜಿಲ್ಲೆಯಲ್ಲಿ ಸಿರಿಧಾನ್ಯ ಬೆಳೆಗಳನ್ನು ಬೆಳೆಯಲು ರೈತರಿಗೆ ಪ್ರೋತ್ಸಾಹ ನೀಡಲಾಗುತ್ತಿದೆ. ಸುಮಾರು ೮೦೦ರಿಂದ ಒಂದು ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಸಿರಿಧಾನ್ಯ ಬೆಳೆಯಲಾಗುತ್ತಿದೆ. ಕೃಷಿ ಇಲಾಖೆಯ ರೈತಸಿರಿ ಯೋಜನೆಯಡಿ ಸಿರಿಧಾನ್ಯ ಬೆಳೆಯುವ ರೈತರಿಗೆ ನೆರವು ನೀಡಲಾಗುತ್ತಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ. ಕಿರಣಕುಮಾರ ಎಂ. ಹೇಳಿದರು.
    ಸಿರಿಧಾನ್ಯಗಳ ಬಳಕೆಯ ಕುರಿತು ಜಾಗೃತಿ ಮೂಡಿಸಲು ಕೃಷಿ ಇಲಾಖೆಯಿಂದ ನಗರದಲ್ಲಿ ಶುಕ್ರವಾರ ಆಯೋಜಿಸಿದ್ದ ಸಿರಿಧಾನ್ಯಗಳ ಜಾಗೃತಿ ವಾಕ್‌ಥಾನ್‌ಗೆ ಚಾಲನೆ ನೀಡಿ ಅವರು ಮಾತನಾಡಿದರು.
    ರಾಗಿ, ಹಾರಕ, ನವಣೆ, ಸಾಮೆ, ಬರಗು, ಕೊರಲೆ, ಊದಲು, ಸಜ್ಜೆ ಮತ್ತು ಜೋಳಗಳ ಸಮೂಹದ ಸಿರಿಧಾನ್ಯಕ್ಕೆ ಸುಮಾರು ೫ ಸಾವಿರ ವರ್ಷಗಳ ಬೇಸಾಯದ ಇತಿಹಾಸವಿದೆ. ಇವು ಪ್ರಸ್ತುತ ಸನ್ನಿವೇಶದಲ್ಲಿ ಪ್ರಮುಖ ಆಹಾರ ಬೆಳೆಗಳಾಗುತ್ತಿವೆ. ಅತಿ ಕಡಿಮೆ ಮಳೆ ಇರುವ ಪ್ರದೇಶಗಳಲ್ಲಿ, ಶುಷ್ಕ, ಒಣ ಪರಿಸ್ಥಿತಿಗಳಲ್ಲಿ, ಕಡಿಮೆ ಫಲವತ್ತತೆ ಇರುವ ಮಣ್ಣಿನಲ್ಲಿ ಸಹ ಬೆಳೆಯಬಹುದಾಗಿದೆ. ಇದಕ್ಕೆ ಕನಿಷ್ಠ ಕೃಷಿ ಪರಿಕರಗಳ ಬಳಕೆಯಾಗುತ್ತದೆ ಎಂದರು.
    ಕಲಾಭವನದಿAದ ಹೊರಟ ವಾಕಥಾನ್ ಪಾಲಿಕೆ ಜ್ಯುಬಿಲಿ ವೃತ್ತದ ಮಾರ್ಗವಾಗಿ ಕೆಸಿಡಿ ವೃÈತ್ತದವರೆಗೆ ಸಾಗಿತು. ಸಿರಿಧಾನ್ಯಗಳ ಬಳಕೆಯ ಕುರಿತು ಜನಜಾಗೃತಿ ಮೂಡಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts