ಸೆಸ್ಕ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ

blank

ಮೈಸೂರು: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್)ದ ಕಿರಿಯ ಪವರ್ ಮ್ಯಾನ್ ಹುದ್ದೆಗಳಿಗೆ ಸಹನ ಶಕ್ತಿ ಪರೀಕ್ಷೆ ಮೂಲಕ ನೇಮಕಾತಿ ಪ್ರಕ್ರಿಯೆಗೆ ಸೋಮವಾರ ಚಾಲನೆ ನೀಡಲಾಯಿತು.
ನಗರದ ನಜರ್‌ಬಾದ್‌ನಲ್ಲಿರುವ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಸಹನ ಶಕ್ತಿ ಪರೀಕ್ಷೆಗೆ ಸೆಸ್ಕ್ ಅಧ್ಯಕ್ಷರೂ ಆದ ಶಾಸಕ ರಮೇಶ್ ಬಂಡಿಸಿದ್ದೇಗೌಡ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ನೇಮಕಾತಿ ಪ್ರಕ್ರಿಯೆ ಸಂಪೂರ್ಣ ಪಾರದರ್ಶಕವಾಗಿದ್ದು, ಸಿಬ್ಬಂದಿ ಯಾವುದೇ ಆಮಿಷಗಳಿಗೆ ಒಳಗಾಗದೆ ಉತ್ತಮವಾಗಿ ಕೆಲಸ ಮಾಡಬೇಕು. ಆ ಮೂಲಕ ನಿಗಮಕ್ಕೆ ಒಳ್ಳೆಯ ಹೆಸರು ಬರುವಂತೆ ಸಮರ್ಥವಾಗಿ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.
ಮೇ 16ರವರೆಗೆ ಸಹನ ಶಕ್ತಿ ಪರೀಕ್ಷೆ:
ನಿಗಮದಲ್ಲಿ ಖಾಲಿ ಇರುವ 309 ಕಿರಿಯ ಪವರ್ ಮ್ಯಾನ್ ಹುದ್ದೆಗಳಿಗೆ 1:5 ಅನುಪಾತದಲ್ಲಿ ಸಹನ ಶಕ್ತಿ ಪರೀಕ್ಷೆ ಮೇ 12ರಿಂದ 16ರವರೆಗೆ ನಡೆಯಲಿದೆ. ಪ್ರಥಮ ಹಂತದ ಸಹನ ಶಕ್ತಿ ಪರೀಕ್ಷೆಯಲ್ಲಿ ಅಭ್ಯರ್ಥಿಗಳಿಗೆ ಕಂಬ ಹತ್ತುವುದು, ಓಟ ಓಡುವುದು ಒಳಗೊಂಡಂತೆ ಐದು ಬಗೆಯ ಪರೀಕ್ಷೆ ನಡೆಸಲಾಗುವುದು ಎಂದರು.
ಸಹನ ಶಕ್ತಿ ಪರೀಕ್ಷೆಯಲ್ಲಿ ಪಾಲ್ಗೊಂಡ ಅಭ್ಯರ್ಥಿಗಳು, ಐದು ಪರೀಕ್ಷೆಗಳಲ್ಲಿ ಮೂರರಲ್ಲಿ ಅರ್ಹತೆಗಳಿಸಿಬೇಕಿದ್ದು, ಎಸ್‌ಎಸ್‌ಎಲ್ಸಿ ಪರೀಕ್ಷೆಯ ಅಂಕಗಳ ಮೆರಿಟ್ ಆಧಾರದಲ್ಲಿ 1:1 ಅನುಪಾತದ ಪಟ್ಟಿಯನ್ನು ಅಂತಿಮಗೊಳಿಸಿ ಪ್ರಕಟಿಸಲಾಗುವುದು ಎಂದು ಸೆಸ್ಕ್ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದರು.
ದಾಖಲಾತಿ ತರುವುದು ಕಡ್ಡಾಯ:
ಸಹನ ಶಕ್ತಿ ಪರೀಕ್ಷೆಯಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ಅರ್ಜಿಯಲ್ಲಿ ತಿಳಿಸಿರುವ ಶೈಕ್ಷಣಿಕ ವಿದ್ಯಾರ್ಹತೆ ಮತ್ತು ಮೀಸಲಾತಿಗೆ ಅನುಗುಣವಾಗಿ ಎಲ್ಲ ಮೂಲ ದಾಖಲಾತಿಗಳು ಹಾಗೂ ಒಂದು ಸೆಟ್ ಜೆರಾಕ್ಸ್ ಪ್ರತಿ ಕಡ್ಡಾಯವಾಗಿ ತರಬೇಕಿದೆ ಎಂದು ತಿಳಿಸಿದರು.
ಸೆಸ್ಕ್ ಮುಖ್ಯ ಇಂಜಿನಿಯರ್ ಡಿ.ಜೆ.ದಿವಾಕರ್, ಅಧೀಕ್ಷಕ ಇಂಜಿನಿಯರ್ ಸುನೀಲ್, ಮುಖ್ಯ ಆರ್ಥಿಕ ಅಧಿಕಾರಿ ರೇಣುಕಾ, ಆಡಳಿತ ಮತ್ತು ಮಾನವ ಸಂಪನ್ಮೂಲ ವಿಭಾಗದ ಪ್ರಧಾನ ವ್ಯವಸ್ಥಾಪಕರಾದ ಡಾ.ಬಿ.ಆರ್.ರೂಪಾ, ಜಾಗೃತ ದಳದ ಎಸ್ಪಿ ಸವಿತಾ ಹೂಗಾರ್ ಇತರರು ಇದ್ದರು.

blank

ಯಾವುದೇ ಅಮಿಷಕ್ಕೆ ಒಳಗಾಗಬಾರದು
ಸಹನ ಶಕ್ತಿ ಪರೀಕ್ಷೆ ಮೂಲಕ ನಿಗಮಕ್ಕೆ ಆಯ್ಕೆಯಾಗುವ ಸಿಬ್ಬಂದಿ ಉತ್ತಮ ರೀತಿಯಲ್ಲಿ ಹಾಗೂ ತಮ್ಮ ಸುರಕ್ಷತೆಗೂ ಆದ್ಯತೆ ನೀಡಿ ಕಾರ್ಯ ನಿರ್ವಹಿಸಬೇಕು. ನೇಮಕ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ಮೆರಿಟ್ ಹಾಗೂ ಎಂಡುರೆನ್ಸ್ ಟೆಸ್ಟ್ ಆಧಾರದ ಮೇಲೆ ಸರ್ಕಾರದ ಮೀಸಲಾತಿ ನಿಯಮಗಳಿಗೆ ಅನುಸಾರವಾಗಿ ನಡೆಸಲಾಗುತ್ತಿದೆ. ಯಾರು, ಯಾವುದೇ ಅಮಿಷಕ್ಕೆ ಒಳಗಾಗಬಾರದು.
ಕೆ.ಎಂ.ಮುನಿಗೋಪಾಲ್ ರಾಜು,
ವ್ಯವಸ್ಥಾಪಕ ನಿರ್ದೇಶಕರು, ಸೆಸ್ಕ್

Share This Article
blank

ತೂಕ ಇಳಿಸಿಕೊಳ್ಳಬೇಕೆಂದರೆ ಸಂಜೆ 7 ಗಂಟೆಯ ಮೊದಲು ಮಾತ್ರ ಊಟ ಮಾಡಿ! dinner

dinner :  ಇತ್ತೀಚಿನ ದಿನಗಳಲ್ಲಿ ಅನೇಕ ಜನರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಇದಕ್ಕಾಗಿ ಅವರು ವ್ಯಾಯಾಮ…

ಹೊಳೆಯುವ ಚರ್ಮಕ್ಕಾಗಿ ಬಾಳೆಹಣ್ಣಿನ ಸಿಪ್ಪೆ! banana peel ಬಳಸುವ ಸರಳ ಮಾರ್ಗಗಳು ಇಲ್ಲಿವೆ…

 banana peel : ಬಾಳೆಹಣ್ಣನ್ನು ತಿನ್ನಲು ಇಷ್ಟಪಡುತ್ತಾರೆ. ಅನೇಕ ಜನರು ಬಾಳೆಹಣ್ಣಿನಿಂದ ವಿವಿಧ ರುಚಿಕರವಾದ ಸಿಹಿತಿಂಡಿಗಳನ್ನು ಸಹ…

blank