More

  ಸಿಇಟಿ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ: ಮಾ.20ರವರೆಗೂ ಅವಕಾಶ

  ಬೆಂಗಳೂರು: ಏ.18 ಮತ್ತು 19ರಂದು ನಡೆಯಲಿರುವ ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮತ್ತೊಂದು ಅವಕಾಶ ಕೊಡಲಾಗಿದೆ. ಇದರಂತೆ ಮಾ.20ರ ರಾತ್ರಿ 12 ಗಂಟೆಯವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶವಿದ್ದು, ಶುಲ್ಕ ಸಲ್ಲಿಸಲು ಮಾ.21ರ ಸಂಜೆ 5.30ರವರೆಗೆ ಕಾಲಾವಕಾಶವಿದೆ.
  ಈ ಅವಕಾಶದಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಬೆಂಗಳೂರಿನ ಕೇಂದ್ರಗಳಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ಕೊಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts