More

    ಸಿಇಟಿ ಪರೀಕ್ಷೆ: ಜಿಲ್ಲೆಯಲ್ಲಿ 11 ಕೇಂದ್ರಗಳು

    ಕಾರವಾರ: ಜಿಲ್ಲೆಯಲ್ಲಿ ಏಪ್ರಿಲ್ 18 ಮತ್ತು 19 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಇಂಜಿನಿಯರಿAಗ್, ವೈದ್ಯಕೀಯ, ಕೃಷಿ ಮತ್ತು ಇನ್ನಿತರ ವೃತ್ತಿಪರ ಕೋರ್ಸ್ಗಳಿಗಾಗಿ ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ , ಪರೀಕ್ಷಾ ಪಾವಿತ್ರ್ಯಕ್ಕೆ ಭಂಗವಾಗುವ ಯಾವುದೇ ಘಟನೆಗಳು ನಡೆಯದಂತೆ , ಪರೀಕ್ಷೆಗಳು ಸುಗಮ ಮತ್ತು ಪಾರದರ್ಶಕವಾಗಿ ನಡೆಯುವಂತೆ ಎಲ್ಲಾ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚನೆ ನೀಡಿದರು.
    ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ, ಸಿಇಟಿ ಪರೀಕ್ಷೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
    ಸಾಮಾನ್ಯ ಪ್ರವೇಶ ಪರೀಕ್ಷೆಗಾಗಿ ಜಿಲ್ಲೆಯಲ್ಲಿ , ಕಾರವಾರದಲ್ಲಿ 3 , ಕುಮಟದಲ್ಲಿ 2, ಹೊನ್ನಾವರದಲ್ಲಿ 2, ಶಿರಸಿಯಲ್ಲಿ 3 ಸೇರಿದಂತೆ ಒಟ್ಟು 11 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದ್ದು, ಒಟ್ಟು 4395 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದರು.
    ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಸಿಸಿಟಿವಿ ಅಳವಡಿಸುವ ಮೂಲಕ ಯಾವುದೇ ಅಕ್ರಮಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕು. ಪ್ರತೀ ಪರೀಕ್ಷಾ ಕೇಂದ್ರಕ್ಕೆ ಪುರುಷ ಮತ್ತು ಮಹಿಳಾ ಪೊಲೀಸ್ ಸಿಬ್ಬಂದಿ ನಿಯೋಜಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು. ಶುದ್ದ ಕುಡಿಯುವ ನೀರಿನ ವ್ಯವಸ್ಥೆ ಮಾಡುವುದರ ಜೊತೆಗೆ ಬಿಸಿಲಿನ ಬೇಗೆ ಹೆಚ್ಚಿರುವ ಕಾರಣ ವೈದ್ಯಕೀಯ ಸಿಬ್ಬಂದಿಗಳ ಸೇವೆ ಲಭ್ಯವಿರುವಂತೆ ನೋಡಿಕೊಳ್ಳಿ ಎಂದರು.
    ಪರೀಕ್ಷಾ ಕೇಂದ್ರದೊಳಗೆ ಕಟ್ಟುನಿಟ್ಟಿನ ವಸ್ತ್ರ ಸಂಹಿತೆ ಪಾಲಿಸುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ವಿದ್ಯಾರ್ಥಿಗಳು ಯಾವುದೇ ರೀತಿಯ ಕೈಗಡಿಯಾರ ಧರಿಸಿರಬಾರದು, ಕಿವಿ ತಲೆ ಮುಚ್ಚದಂತೆ ವಸ್ತçವನ್ನು ಧರಿಸಿರಬೇಕು. ಉದ್ದ ತೋಳಿದ್ದರೆ ಮಡಚಬೇಕು. ಯಾವುದೇ ರೀತಿಯ ಎಲೆಕ್ಟಾçನಿಕ್ ಉಪಕರಣಗಳನ್ನು ತೆಗೆದುಕೊಂಡು ಹೋಗುವಂತಿಲ್ಲ, ಯಾವುದೇ ರೀತಿಯ ಆಭರಣಗಳನ್ನು ಧರಿಸುವಂತಿಲ್ಲ, ಶೂ ಗಳನ್ನು ಧರಿಸುವಂತಿಲ್ಲ ಈ ಬಗ್ಗೆ ಕೊಠಡಿ ಮೇಲ್ವಿಚಾರಕರು ಕಟ್ಟುನಿಟ್ಟಿನ ತಪಾಸಣೆ ನಡೆಸಬೇಕು ಎಂದರು.
    ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲು ಮಾರ್ಗಾಧಿಕಾರಿಗಳನ್ನು ನೇಮಕ ಮಾಡುವಂತೆ ತಿಳಿಸಿದ ಅವರು, ವಿದ್ಯಾರ್ಥಿಗಳಿಗೆ ನಿಗಧಿತ ಸಮಯಕ್ಕೆ ಸರಿಯಾಗಿ ಪ್ರಶ್ನೆಪತ್ರಿಕೆ ವಿತರಿಸಬೇಕು ಈ ಬಗ್ಗೆ ನೀಡಿರುವ ಸೂಚನೆಗಳನ್ನು ಎಲ್ಲಾ ಕೊಠಡಿ ಮೇಲ್ವಿಚಾರಕರು ತಪ್ಪದೇ ಪಾಲಿಸಬೇಕು ಎಂದರು.
    ಸಿಇಟಿ ಪರೀಕ್ಷಾ ಅವಧಿಯಲ್ಲಿ ವಿದ್ಯುತ್ ಕಡಿತವಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಹೆಸ್ಕಾಂ ಅಧಿಕಾರಿಗಳಿಗೆ ಮತ್ತು ಗ್ರಾಮೀಣ ಪ್ರದೇಶದಿಂದ ಬರುವ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆಯಲ್ಲಿ ತೊಂದರೆಗಳಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
    ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ಉತ್ತಿರ್ಣರಾಗಿ , ಉನ್ನತ ವಿದ್ಯಾಭ್ಯಾಸ ಪಡೆಯುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಜಿಲ್ಲೆಯು ಕಳೆದ ಬಾರಿಯಂತೆಯೇ 4 ನೇ ಸ್ಥಾನ ಪಡೆದಿದೆ ಆದರೆ ಕಳೆದ ಬಾರಿಗಿಂತ ಉತ್ತೀರ್ಣ ಪ್ರಮಾಣದಲ್ಲಿ ಶೇಕಡಾವಾರು ಪ್ರಮಾಣ ಹೆಚ್ಚಾಗಿದ್ದು, ಇದಕ್ಕಾಗಿ ಎಲ್ಲಾ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಮತ್ತು ಪ್ರಾದ್ಯಾಪಕ ವೃಂದಕ್ಕೆ ಆಭಿನಂದನೆ ಸಲ್ಲಿಸಿದ ಜಿಲ್ಲಾಧಿಕಾರಿಗಳು, ಜಿಲ್ಲೆಯಲ್ಲಿ ಕಲಾ , ವಿಜ್ಞಾನ ಮತ್ತು ವಾಣಿಜ್ಯ ವಿಭಾಗದಲ್ಲಿ ಮೊದಲ 3 ಸ್ಥಾನಗಳನ್ನು ಪಡೆದ ವಿದ್ಯಾರ್ಥಿಗಳನ್ನು ವೈಯಕ್ತಿಕವಾಗಿ ಸನ್ಮಾನಿಸಲಾಗುವುದು ಎಂದರು.
    ಸಭೆಯಲ್ಲಿ ಡಿ.ಎಚ್ಒ ಡಾ.ನೀರಜ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಸತೀಶ ನಾಯ್ಕ ಹಾಗೂ ಪರಿಕ್ಷಾ ಕಾರ್ಯಕ್ಕೆ ನಿಯೋಜಿಸಿದ್ದ ಅಧಿಕಾರಿಗಳು ಉಪಸ್ಥಿತರಿದ್ದರು.

    ಇದನ್ನೂ ಓದಿ: ಪ್ರಿಂಟಿಂಗ್ ಮಳಿಗೆಗೆ ಬೆಂಕಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts