More

    ನಾಳೆಯಿಂದ ಸಿಇಟಿ ಪರೀಕ್ಷೆ ಆರಂಭ | ವೃತ್ತಿಪರ ಕೋರ್ಸುಗಳಿಗೆ ಎಂದಿನಂತೆ ಭಾರಿ ಸ್ಪರ್ಧೆ

    ಬೆಂಗಳೂರು: ನಾಳೆಯಿಂದ ಸಿಇಟಿ ಪರೀಕ್ಷೆ ಆರಂಭವಾಗಲಿದ್ದು ಇಂಜಿನಿಯರಿಂಗ್, ಕೃಷಿ ವಿಜ್ಞಾನ, ವೆಟರ್ನರಿ, ಫಾರ್ಮಸಿ, ನ್ಯಾಚುರೋಪಥಿ ಮತ್ತು ಯೋಗ ಹಾಗೂ ಬಿ.ಎಸ್ಸಿ (ನರ್ಸಿಂಗ್) ಮುಂತಾದ ವೃತ್ತಿಪರ ಕೋರ್ಸುಗಳ ಪ್ರವೇಶಾತಿಗೆ ಈ ಪರೀಕ್ಷೆಯನ್ನು ನಡೆಸಲಾಗುತ್ತದೆ.

    ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ರಮ್ಯಾ ದಿಗ್ವಿಜಯ ನ್ಯೂಯ ಗೆ ಮಾಹಿತಿ ನೀಡಿದ್ದು ಮೇ20 ಮತ್ತು 21ರಂದು ರಾಜ್ಯದ 592 ಪರೀಕ್ಷಾ ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ ನಡೆಯಲಿದ್ದು ಈ ಬಾರಿ ಒಟ್ಟು 2,61,610 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ನೋಂದಣಿಯಾಗಿದ್ದಾರೆ. ಅಂದರೆ ಎಂದಿನಂತೆ ಈ ಬಾರಿಯೂ ರಾಜ್ಯದಲ್ಲಿ ಇಂಜಿನಿಯಂರಿಂಗ್ ಮುಂತಾದ ವೃತ್ತಿಪರ ಕೋರ್ಸ್​ಗಳಿಗಾಗಿ ಭಾರಿ ಸ್ಪರ್ಧೆ ಏರ್ಪೆಟ್ಟಿದೆ.

    ಎಲ್ಲ ಕೇಂದ್ರಗಳಲ್ಲೂ ಪರೀಕ್ಷಾ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ವಿಡಿಯೋ ಚಿತ್ರೀಕರಣ ಮಾಡಲಾಗುತ್ತದೆ. ನಾಳೆ ಬೆಳಿಗ್ಗೆ 10.30ರಿಂದ 11.50ರವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2.30ರಿಂದ 3.50 ರವರೆಗೆ ಗಣಿತ, 21ರಂದು ಬೆಳಿಗ್ಗೆ ಭೌತಶಾಸ್ತ್ರ ಮತ್ತು ಮಧ್ಯಾಹ್ನ ರಸಾಯನಶಾಸ್ತ್ರ ವಿಷಯಗಳ ಪರೀಕ್ಷೆಯನ್ನು ನಡೆಸಲಾಗುತ್ತದೆ.

    ಮೇ 22ರಂದು ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಬೆಳಿಗ್ಗೆ 11.30ರಿಂದ 12.30ರವರೆಗೆ ಪರೀಕ್ಷೆ ನಡೆಯಲಿದೆ. ಬೆಂಗಳೂರು, ಬೆಳಗಾವಿ, ವಿಜಯಪುರ, ಬಳ್ಳಾರಿ ಮತ್ತು ಮಂಗಳೂರು ಪರೀಕ್ಷಾ ಕೇಂದ್ರಗಳಲ್ಲಿ‌ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ. ಇದರಲ್ಲಿ ಒಟ್ಟು 2,084 ಅರ್ಹ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಬಿಗಿ ಕ್ರಮ ಕೈಗೊಳ್ಳಲಾಗಿದೆ.

    ಪರೀಕ್ಷಾ ಅಕ್ರಮ ತಡೆಗಟ್ಟಲು 592 ವೀಕ್ಷಕರು, 1,184 ಮಂದಿ ಇರುವ ವಿಶೇಷ ಸ್ಕ್ವಾಡ್‌, 592 ಕಸ್ಟೋಡಿಯನ್ಸ್ ಸೇರಿದಂತೆ ಒಟ್ಟು 23 ಸಾವಿರಕ್ಕೂ ಹೆಚ್ಚು ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts