ಸೆ.1ರಂದು ಸಿಇಟಿ/ನೀಟ್ ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ

blank

ಬೆಂಗಳೂರು: ಮೊದಲ ಸುತ್ತಿನ ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್ ಕೋರ್ಸುಗಳ ಪ್ರವೇಶಕ್ಕೆ ಆಪ್ಷನ್ ಎಂಟ್ರಿ (ಆಯ್ಕೆ/ಇಚ್ಛೆ) ಗಳನ್ನು ದಾಖಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಂಗಳವಾರ ರಾತ್ರಿ ತನ್ನ ವೆಬ್‌ಸೈಟ್ನಲ್ಲಿ ಪೋರ್ಟಲ್ ತೆರೆದಿದೆ.

ಆಗಸ್ಟ್ 22ರ ಬೆಳಿಗ್ಗೆ 10ರವರೆಗೆ ಅಭ್ಯರ್ಥಿಗಳು ತಮಗೆ ಇಚ್ಛೆ ಇರುವ ಕಾಲೇಜು ಮತ್ತು ಕೋರ್ಸ್ ಗಳನ್ನು ಆಯ್ಕೆ ಮಾಡಿಕೊಳ್ಳಬಹುದು. ಈ ಸಂಬಂಧ ಇದೇ ಮೊದಲ ಬಾರಿಗೆ ಅಭ್ಯರ್ಥಿಗಳ ನೋಂದಾಯಿತ ಮೊಬೈಲ್ಗೆ ವಾಟ್ಸ್ ಆೃಪ್ ಸಂದೇಶ ಕೂಡ ರವಾನಿಸುವ ವ್ಯವಸ್ಥೆ ಆರಂಭಿಸಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಇಂಜಿನಿಯರಿಂಗ್ ಹಾಗೂ ಇತರೆ ಕೋರ್ಸುಗಳಿಗೂ ಆಪ್ಷನ್ (ಆಯ್ಕೆ) ಗಳನ್ನು ದಾಖಲಿಸಲು ಅವಕಾಶ ಇರುತ್ತದೆ ಎಂದು ಅವರು ವಿವರಿಸಿದ್ದಾರೆ.

ಆ.25ರ ರಾತ್ರಿ 8ಕ್ಕೆ ಎರಡನೇ ಅಣಕು ಸೀಟು ಹಂಚಿಕೆಯ ಫಲಿತಾಂಶ (ಯುಜಿ ಸಿಇಟಿ/ನೀಟ್) ಪ್ರಕಟಿಸಲಾಗುತ್ತದೆ. ನಂತರ ಆ.27ರ ಬೆಳಿಗ್ಗೆ 11ರವರೆಗೆ ಇಚ್ಛೆಗಳನ್ನು ಬದಲಿಸಿಕೊಳ್ಳಬಹುದು. ಸೆ.1ರಂದು ಸಂಜೆ 6ಕ್ಕೆ ನೈಜ ಸೀಟು ಹಂಚಿಕೆಯ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಅವರು ವಿವರಿಸಿದರು.

Share This Article

ಹೋಟೆಲ್​ ಸ್ಟೈಲ್​​ ಪನೀರ್ ಅಮೃತಸರಿ ಮಾಡುವ ವಿಧಾನ ಇಲ್ಲಿದೆ; ನೀವೊಮ್ಮೆ ಟ್ರೈ ಮಾಡಿ | Recipe

ಹಲವು ಬಾರಿ ಒಂದೇ ರೀತಿಯ ಆಹಾರ ತಿಂದು ಬೇಸರವಾಗುತ್ತದೆ. ಆಗ ಹೋಟೆಲ್‌ಗೆ ಹೋಗಿ ಊಟ ಮಾಡಲು…

ಚಿನ್ನದ ಮೇಲೆ ಲೋನ್​ ತಗೋತ್ತಿದ್ದೀರಾ? ಹಾಗಿದ್ರೆ ಈ ತಪ್ಪುಗಳಿಂದ ಮೊದಲು ದೂರವಿರಿ, ಇಲ್ಲದಿದ್ರೆ ನಷ್ಟ ಖಚಿತ | Gold Loan

Gold Loan: ಮನೆಯಲ್ಲಿದ್ದರೆ ಚಿನ್ನ ಚಿಂತೆಯೂ ಏತಕೇ ಇನ್ನಾ? ಎಂಬ ಮಾತನ್ನು ಇಂದಿಗೂ ನಮ್ಮ ಜನ…

ತಣ್ಣೀರಿನಲ್ಲಿ ಈಜುವುದರಿಂದಾಗುವ ಪ್ರಯೋಜನಗಳನ್ನು ನೀವು ತಿಳಿದುಕೊಳ್ಳಲೇಬೇಕು; ನಿಮಗಾಗಿಯೇ ಈ ಮಾಹಿತಿ | Health Tips

ತಣ್ಣೀರಿನಲ್ಲಿ ಈಜುವುದು ಕೇವಲ ಸಾಹಸ ಕ್ರೀಡೆ ಅಥವಾ ಹವ್ಯಾಸವಲ್ಲ. ಆದರೆ ಇದು ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು…