ಬೆಂಗಳೂರು ಇಂಜಿನಿಯರಿಂಗ್, ವೈದ್ಯಕೀಯ, ಕೃಷಿವಿಜ್ಞಾನ ಮುಂತಾದ ಕೋರ್ಸುಗಳ ಪ್ರವೇಶಕ್ಕೆ ಆನ್‌ಲೈನ್ ಸೀಟು ಹಂಚಿಕೆಗೆ ಸಂಬಂಧಿಸಿದ ಮಾಹಿತಿ ಲಭ್ಯವಾಗಿಸಲು ದೂರದರ್ಶನದ ಚಂದನ ವಾಹಿನಿಯಲ್ಲಿ ಜೂ.19ರ ರಾತ್ರಿ 7.30ರಿಂದ 8.30ರವರೆಗೆ ನೇರ ಫೋನ್ ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತಿಳಿಸಿದೆ.
ಅಭ್ಯರ್ಥಿಗಳು ಅನುಸರಿಸಬೇಕಾದ ಸೂಚನೆಗಳು, ಮಾರ್ಗಸೂಚಿಗಳು, ವಿವಿಧ ಹಂತಗಳು, ಮನೆಯಲ್ಲಿ ಮಾಡಿಕೊಳ್ಳಬೇಕಾದ ಪೂರ್ವಸಿದ್ಧತಾ ಕಾರ್ಯ, ಅಣಕು ಸೀಟು ಹಂಚಿಕೆ, ಏಕಕಾಲದಲ್ಲಿ ಸೀಟು ಹಂಚಿಕೆ, ಎಷ್ಟು ಸುತ್ತುಗಳಲ್ಲಿ ಸೀಟು ಹಂಚಿಕೆಯಾಗುತ್ತದೆ, ಕಾಲೇಜುಗಳ ಆಯ್ಕೆ, ಶುಲ್ಕ ಪಾವತಿ ಇತ್ಯಾದಿ ಬಗ್ಗೆ ತಿಳಿಸಲಾಗುವುದು.
ಅಭ್ಯರ್ಥಿಗಳು ದೂರವಾಣಿ ಸಂಖ್ಯೆ 080-23542599, 23542699 ಕರೆಮಾಡಿ ಸದುಪಯೋಗ ಮಾಡಿಕೊಳ್ಳಬಹುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಅಧಿಕಾರಿಗಳು ಭಾಗವಹಿಸಿ ಮಾಹಿತಿ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.