25.1 C
Bangalore
Friday, December 6, 2019

ಸಹಕಾರಿ ಸಂಘಗಳ ಅಭಿವೃದ್ಧಿಗೆ ಒಗ್ಗಟ್ಟು ಅವಶ್ಯ

Latest News

ಮಲಗಿದ ಮೇಲೆ ಸಂಪೂರ್ಣ ಸುಖ ನಿದ್ದೆಗೆ ಇಲ್ಲಿವೆ ಕೆಲ ಟಿಪ್ಸ್​ಗಳು

ಸಂಪುರ್ಣ ಎಂಟು ತಾಸು ನಿದ್ದೆ..! - ನಿದ್ದೆ ಮಾಡಿದ ಮೇಲೆ ಮಧ್ಯೆ ಯಾವುದಕ್ಕೂ ಅಂದರೆ ಬಾತ್​ರೂಂಗೆ ಹೋಗಲು, ನೀರು ಕುಡಿಯಲು, ನಿಮ್ಮ ಮೊಬೈಲ್​ ಚೆಕ್​ ಮಾಡಲು...

ಗೊರಗುದ್ದಿ ಶಾಲೆ ಗೋಳು ಕೇಳೋರಿಲ್ಲ

|ಬೆಳ್ಳೆಪ್ಪ ಮ.ದಳವಾಯಿ ಕಡಬಿ ಸರ್ಕಾರ ಸರ್ವಶಿಕ್ಷಣ ಅಭಿಯಾನದ ಹಲವು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ. ಅಲ್ಲದೆ ಆ ಯೋಜನೆಗಳಿಗೆ ಸರ್ಕಾರ ಕೋಟ್ಯಂತರ ರೂ.ಹಣ ಖರ್ಚು...

ಅತ್ಯಾಚಾರ ಆರೋಪಿಗಳ ಎನ್​ಕೌಂಟರ್​ ಬಗ್ಗೆ ಇಂಚಿಂಚು ಮಾಹಿತಿ ಬಿಚ್ಚಿಟ್ಟ ಪೊಲೀಸ್​ ಆಯುಕ್ತ ವಿಶ್ವನಾಥ್​ ಸಜ್ಜನರ್​

ಹೈದರಾಬಾದ್​: ಪಶುವೈದ್ಯೆಯ ಮೇಲೆ ಅತ್ಯಾಚಾರವೆಸಗಿ, ಕೊಲೆಗೈದು ಮೃತದೇಹಕ್ಕೆ ಬೆಂಕಿಯಿಟ್ಟು ಕ್ರೂರತ್ವ ಮೆರೆದಿದ್ದ ನಾಲ್ವರು ಆರೋಪಿಗಳನ್ನು ಹೈದರಾಬಾದ್​ ಪೊಲೀಸರು ಶುಕ್ರವಾರ ಬೆಳ್ಳಂಬೆಳಗ್ಗೆ ಎನ್​ಕೌಂಟರ್​ ಮೂಲಕ...

ಯಾಂತ್ರಿಕ ಜೀವನಕ್ಕೆ ಮಾರುಹೋಗಿದ್ದಾರೆ ಜನ

ಕನಕಪುರ: ಯಾಂತ್ರಿಕ ಜೀವನಕ್ಕೆ ಮಾರುಹೋಗಿರುವ ಇಂದಿನ ಜನತೆ ಗ್ರಾಮೀಣ ಕಲೆ, ಸಂಸ್ಕೃತಿಯನ್ನು ಮರೆಯುತ್ತಿದ್ದಾರೆ ಎಂದು ದೇಗುಲಮಠದ ಕಿರಿಯ ಶ್ರೀ ಚನ್ನಬಸವ ಸ್ವಾಮೀಜಿ ತಿಳಿಸಿದರು. ಕೋಡಿಹಳ್ಳಿ ರಂಗಮಂದಿರದಲ್ಲಿ ಕನ್ನಡ...

ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳ ಎನ್​ಕೌಂಟರ್​​ ಅನ್ನು ಸ್ವಾಗತಿಸಿದ ಗೋವಾ ಕಾಂಗ್ರೆಸ್​​

ಪಣಜಿ: ಹೈದರಾಬಾದ್​ನಲ್ಲಿ ಶುಕ್ರವಾರ ಮುಂಜಾನೆ ದಿಶಾ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದಿದ್ದ ಆರೋಪಿಗಳನ್ನು ಪೊಲೀಸರು ಎನ್​ಕೌಂಟರ್​​ನಲ್ಲಿ ಕೊಲೆ ಮಾಡಿದ್ದನ್ನು ಗೋವಾ ಕಾಂಗ್ರೆಸ್​ ಮಹಿಳಾ...

ಚಡಚಣ: ರಾಜಕೀಯ ಮಾಡದೆ ಸಹಕಾರ ಮನೋಭಾವ ಹಾಗೂ ಒಗ್ಗಟ್ಟಿನಿಂದ ಶ್ರಮಿಸಿದಾಗ ಮಾತ್ರ ಸಹಕಾರಿ ಸಂಘಗಳು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ವಿಧಾನ ಪರಿಷತ್ ಸದಸ್ಯ ಅರುಣ ಶಹಾಪುರ ಹೇಳಿದರು.
ಸ್ಥಳೀಯ ಪಾಟೀಲ ನಗರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚಡಚಣ ತಾಲೂಕು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಹಕಾರಿ ಪತ್ತಿನ ಸಂಘದ ಸುವರ್ಣ ಮಹೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
50 ವರ್ಷಗಳ ಹಿಂದೆ ಕೇವಲ 9 ಶಿಕ್ಷಕರು 10 ರೂ. ಬಂಡವಾಳದೊಂದಿಗೆ ಪ್ರಾರಂಭಿಸಿದ ಈ ಸಹಕಾರಿ ಸಂಘ ಇಂದು 10 ಕೋಟಿ ರೂ. ಬಂಡವಾಳ ಹೊಂದಿರುವುದು ಶ್ಲಾಘನೀಯ. ಜಾಗತೀಕರಣ, ಇಂಗ್ಲಿಷ್ ವ್ಯಾಮೋಹ ಹಾಗೂ ಖಾಸಗಿ ಶಾಲೆಗಳ ಹಾವಳಿಯಿಂದ ಸರ್ಕಾರಿ ಕನ್ನಡ ಶಾಲೆಗಳು ನಲುಗುತ್ತಿವೆ. ಸರ್ಕಾರಿ ಶಾಲೆಗಳು ಉಳಿಯಲು ಎಲ್ಲ ಶಿಕ್ಷಕರು ಕೈ ಜೋಡಿಸಬೇಕು ಎಂದು ಸಲಹೆ ನೀಡಿದರು.
ಶಾಸಕ ದೇವಾನಂದ ಚವಾಣ್ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನೆರವೇರಿಸಿ ಮಾತನಾಡಿ, ತಾಲೂಕಿನ ಶೈಕ್ಷಣಿಕ ಕ್ಷೇತ್ರಕ್ಕೆ ಅನುಪಮ ಕೊಡುಗೆ ಸಲ್ಲಿಸಿರುವ ಇಲ್ಲಿಯ ಶಾಲಾ ಶಿಕ್ಷಕರ ಸಹಕಾರಿ ಸಂಘ ಅರ್ಧ ಶತಮಾನದ ಮೈಲಿಗಲ್ಲು ತಲುಪಿರುವುದು ಶ್ಲಾಘನೀಯ. ಈ ಸಂಘ ಇನ್ನೂ ಉತ್ತರೋತ್ತರವಾಗಿ ಬೆಳೆಯಲಿ ಎಂದು ಹೇಳಿದರು.
ಸಹಕಾರಿ ಸಂಘದ ಅಧ್ಯಕ್ಷ ಎಸ್.ಎಸ್. ಪಾಟೀಲ, ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಬಸವರಾಜ ಗುರಿಕಾರ, ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಲಿ, ಇನ್ಪೋಸಿಸ್ ಸಂಸ್ಥೆಯ ಪ್ರತಿನಿಧಿ ಎನ್.ಆರ್. ಕುಲಕರ್ಣಿ ಇತರರು ಮಾತನಾಡಿದರು.
ಕಾತ್ರಾಳ ಗುರುದೇವಾಶ್ರಮದ ಅಮೃತಾನಂದ ಸ್ವಾಮಿಗಳು ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿದ್ದರು. ಬಿಜೆಪಿ ಮುಖಂಡ ಗೋಪಾಲ ಕಾರಜೋಳ, ಜಿಪಂ ಸದಸ್ಯರಾದ ಭೀಮಾಶಂಕರ ಬಿರಾದಾರ, ಶಿವಶರಣ ಭೈರಗೊಂಡ, ಪ್ರಭಾರ ಬಿಇಓ ಶಿವಾನಂದ ಹಾದಿಮನಿ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ ಎ.ಪಿ. ಠಾಕೂರ, ಜೆಓಸಿಸಿ ಬ್ಯಾಂಕ್ ಅಧ್ಯಕ್ಷ ಅರ್ಜುನ ಲಮಾಣಿ, ಶಿಕ್ಷಕರ ಸಂಘದ ಮುಖಂಡರಾದ ಸುರೇಶ ಶೇಡಶ್ಯಾಳ, ಎಸ್.ಬಿ. ಪಾಟೀಲ, ಎಸ್.ಎಲ್. ಮಾನೆ, ಬಿ.ಎಸ್. ಮಜ್ಜಗಿ, ಎ.ಎಸ್. ಸೊನಗಿ, ಐ.ಎಂ. ಬೇದ್ರೇಕರ, ಬಸವಂತ ಉಮರಾಣಿ, ಎಸ್.ಬಿ. ತೇಲಿ ಇತರರು ಇದ್ದರು. ಶಿಕ್ಷಕ ಗುರು ಜೇವೂರ ನಿರೂಪಿಸಿದರು.

ಸನ್ಮಾನ, ಪ್ರತಿಭಾ ಪುರಸ್ಕಾರ, ಕಂಪ್ಯೂಟರ್ ವಿತರಣೆ: ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಜಿಲ್ಲಾ ಹಾಗೂ ತಾಲೂಕುಮಟ್ಟದ ಆದರ್ಶ ಶಿಕ್ಷಕರು, ನಿವೃತ್ತ ಶಿಕ್ಷಕರು ಹಾಗೂ ಇತ್ತೀಚೆಗೆ ನಿವೃತ್ತಿ ಹೊಂದಿದ ಬಿಇಓ ಮಹಾವೀರ ಮಾಲೆಗಾಂವ ದಂಪತಿಗೆ ಸನ್ಮಾನಿಸಲಾಯಿತು. ಇನ್ಪೋಸಿಸ್ ಸಂಸ್ಥೆ ನೀಡಿದ 50 ಗಣಕ ಯಂತ್ರಗಳನ್ನು ಚಡಚಣ ವಲಯದ ಸರ್ಕಾರಿ ಶಾಲೆಗಳಿಗೆ ಉಚಿತವಾಗಿ ನೀಡಲಾಯಿತು. ಸಂಘದ ಸದಸ್ಯರಿಗೆ ಈ ವರ್ಷದ ಲಾಭಾಂಶ ಹಾಗೂ ಬ್ಯಾಗ್ ವಿತರಿಸಲಾಯಿತು.

Stay connected

278,739FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...