22.5 C
Bengaluru
Sunday, January 19, 2020

ಮಿನಿ ವಿಧಾನಸೌದ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

Latest News

ಪ್ರಾಚಾರ್ಯರ ಧೋರಣೆ ಖಂಡಿಸಿ ಪ್ರತಿಭಟನೆ

ಬಸವನಬಾಗೇವಾಡಿ: ಕಾಲೇಜಿನಲ್ಲಿ ವಿವೇಕಾನಂದರ ಜಯಂತಿ ಆಚರಣೆಗೆ ನಿರಾಕರಿಸಿದ್ದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರ ನೇತೃತ್ವದಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿಗಳು ಶನಿವಾರ...

ಹೆಲ್ಮೆಟ್ ಕಡ್ಡಾಯವಾಗಿ ಧರಿಸಿ: ಜಿಲ್ಲಾಧಿಕಾರಿ ಪಾಟೀಲ ಅಭಿಮತ

ವಿಜಯಪುರ : ಸರ್ಕಾರಿ ನೌಕರರು ಮತ್ತು ಶಾಲಾ ಕಾಲೇಜುಗಳಿಗೆ ಮಕ್ಕಳನ್ನು ಬಿಡಲು ಬರುವ ಪಾಲಕರು, ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಕುರಿತಂತೆ...

ಪೋಲಿಯೋ ಲಸಿಕಾ ಕಾರ್ಯಕ್ರಮ

ರಾಣೆಬೆನ್ನೂರ: ಪೋಲಿಯೋ ಮುಕ್ತ ಭಾರತವನ್ನಾಗಿ ಮಾಡುವ ಉದ್ದೇಶದಿಂದ ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಬೇಕು. ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು...

ಇಬ್ಬರು ಮನೆಗಳ್ಳರು ಖಾಕಿ ಬಲೆಗೆ

ಗದಗ: ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸುವಲ್ಲಿ ಗದಗ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಸೆಟ್ಲಮೆಂಟ್ ನಿವಾಸಿಗಳಾದ ಸುರೇಶ...

ಕಾಲನಲ್ಲಿ ಲೀನವಾದ ‘ಪ್ರಳಯ’

ಅಕ್ಕಿಆಲೂರ: ಹೋರಿ ಬೆದರಿಸುವ ಕಾರ್ಯಕ್ರಮದಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದ ಸಮೀಪದ ಮಲಗುಂದ ಗ್ರಾಮದ ಪ್ರಳಯ ಎಂಬ ಹೆಸರಿನ ಹೋರಿ ಶನಿವಾರ ಅನಾರೊಗ್ಯದಿಂದ ಅಸುನಿಗಿದ್ದು,...

ಚಡಚಣ: ಪಟ್ಟಣವು ತಾಲೂಕು ಕೇಂದ್ರವಾಗಿ ಕಾರ್ಯನಿರ್ವಹಿಸುತ್ತಿರುವುದರಿಂದ ಮಿನಿ ವಿಧಾನಸೌಧ ನಿರ್ಮಾಣಕ್ಕಾಗಿ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ, ಶಾಸಕ ದೇವಾನಂದ ಚವಾಣ್ ಹಾಗೂ ಹಿರಿಯ ಕಂದಾಯ ಅಧಿಕಾರಿಗಳು ಪಟ್ಟಣದ ವಿವಿಧೆಡೆ ಸೋಮವಾರ ಸ್ಥಳ ಪರಿಶೀಲಿಸಿದರು.
ಪಟ್ಟಣದ ಹೃದಯ ಭಾಗದಲ್ಲಿರುವ ದನದ ಬಜಾರ್ ಹಾಗೂ ದಾನಿಗಳಾದ ಶ್ರೀಶೈಲ ಭಮಶೆಟ್ಟಿ, ಸಂತೋಷ ಭಂಡರಕವಟೆ ಹಾಗೂ ಸುರೇಶ ಭಂಡರಕವಟೆ ಅವರು ಮಿನಿ ವಿಧಾನಸೌಧ ನಿರ್ಮಾಣಕ್ಕಾಗಿ ಸರ್ಕಾರಕ್ಕೆ ದಾನವಾಗಿ ನೀಡುತ್ತಿರುವ ಜಮೀನನ್ನು ಪರಿಶೀಲಿಸಿದರು.
ಪಟ್ಟಣದ ವಾರ್ಡ್ ನಂ. 7ರ ಸರ್ಕಾರದ ಜಮೀನು ಸ.ನಂ. 59ರಲ್ಲಿರುವ ದನದ ಬಜಾರ್ ಜಾಗೆ ಪರಿಶೀಲಿಸುತ್ತಿರುವ ಸಂದರ್ಭ ಅಲ್ಲಿ ವಾಸಿಸುತ್ತಿರುವ ಸುಮಾರು 105 ಬಡ ಕುಟುಂಬದ ಸದಸ್ಯರು ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿ, ಈ ಜಾಗೆಯಲ್ಲಿ ನಾವು ಅನೇಕ ವರ್ಷಗಳಿಂದ ಇಲ್ಲಿ ವಾಸಿಸುತ್ತಿದ್ದು, ಈಗ ಇಲ್ಲಿ ಮಿನಿ ವಿಧಾನಸೌಧ ನಿರ್ಮಿಸಿದರೆ ನಾವು ನೆಲೆ ಕಳೆದುಕೊಳ್ಳಬೇಕಾಗುತ್ತದೆ. ಇಲ್ಲಿನ ನಿವಾಸಿಗಳಿಗೆ ಅಕ್ರಮ-ಸಕ್ರಮದಡಿ ಹಕ್ಕು ಪತ್ರ ನೀಡುವಂತೆ ಆಗ್ರಹಿಸಿದರು.
ಇಲ್ಲಿ ಬಹುತೇಕ ದಲಿತ, ಅಲ್ಪಸಂಖ್ಯಾತ ಹಾಗೂ ಹಿಂದುಳಿದ ವರ್ಗದ ಜನಾಂಗದವರು ವಾಸಿಸುತ್ತಿದ್ದು, ನಾವು ಯಾವುದೇ ಕಾರಣಕ್ಕೂ ಈ ಜಮೀನನ್ನು ಬಿಟ್ಟು ಕದಲುವುದಿಲ್ಲ. ಒಂದು ವೇಳೆ ನಮ್ಮನ್ನು ಒಕ್ಕಲೆಬ್ಬಿಸಲು ಯತ್ನಿಸಿದರೆ ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ ಎಂದು ಸ್ಥಳದಲ್ಲಿದ್ದ ನೂರಾರು ಮಹಿಳೆಯರು ಎಚ್ಚರಿಸಿದರು.
ನಂತರ ಪತ್ರಿಕ್ರಿಯೆ ನೀಡಿದ ಜಿಲ್ಲಾಧಿಕಾರಿಗಳು, ಪಟ್ಟಣದಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ ಸ್ಥಳ ಪರಿಶೀಲನೆಗಾಗಿ ನಾನು ಆಗಮಿಸಿದ್ದು, ಸಾರ್ವಜನಿಕರಿಗೆ ಅತ್ಯಂತ ಉಪಯುಕ್ತ ಎನಿಸುವ ಸ್ಥಳ ಪರಿಶೀಲಿಸಿದ ನಂತರ ತಹಸೀಲ್ದಾರ್ ಅವರ ವರದಿ ಪ್ರಕಾರ ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರಲ್ಲದೆ, ಈ ಸ್ಥಳದಲ್ಲಿಯೇ ಮಿನಿ ವಿಧಾನಸೌಧ ನಿರ್ಮಿಸುವ ಪರಿಸ್ಥಿತಿ ಬಂದಲ್ಲಿ ಜಿಲ್ಲಾಡಳಿತ ವತಿಯಿಂದ ನಿಮಗೆ ಪುನರ್ವಸತಿ ಕಲ್ಪಿಸಿಕೊಡುವುದಾಗಿ ಭರವಸೆ ನೀಡಿದರು.
ಪಪಂ ಅಧ್ಯಕ್ಷ ಬಾಬುಗೌಡ ಪಾಟೀಲ, ತಹಸೀಲಾರ್ ಬಸವರಾಜ ನಾಗರಾಳ, ಪಪಂ ಮುಖ್ಯಾಧಿಕಾರಿ ಎಸ್.ಎಂ. ಪೂಜಾರಿ, ಜೆಡಿಎಸ್ ಮುಖಂಡರಾದ ವೈ.ಎಸ್. ಮಕಾನದಾರ, ಭೀಮಾಶಂಕರ ವಾಳಿಖಿಂಡಿ, ಪ್ರವೀಣ ಕಲ್ಯಾಣಶೆಟ್ಟಿ, ರಾಮ ಮಾಲಾಪೂರ, ಚಂದ್ರಕಾಂತ ಶಿಂಧೆ, ದೀಪಕ್ ಕದಮ್, ಶಬ್ಬೀರ್ ನದಾಫ್, ಇಲಾಯಿ ನದಾಫ್ ಹಾಗೂ ಪಪಂ ಸರ್ವ ಸದಸ್ಯರು ಉಪಸ್ಥಿತರಿದ್ದರು.

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...