26.8 C
Bangalore
Friday, December 13, 2019

ಬಿಜೆಪಿಯಿಂದ ದ್ವೇಷದ ರಾಜಕಾರಣ

Latest News

ಶಬರಿಮಲೆ ವಿಚಾರದಲ್ಲಿ ಸದ್ಯ ಯಾವುದೇ ಆದೇಶವನ್ನು ಹೊರಡಿಸಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್​

ನವದೆಹಲಿ: ಪೊಲೀಸ್​ ರಕ್ಷಣೆಯೊಂದಿಗೆ ಶಬರಿಮಲೆ ಅಯ್ಯಪ್ಪನ ಸನ್ನಿಧಿಯನ್ನು ಮಹಿಳೆಯರು ಸುರಕ್ಷಿತವಾಗಿ ಪ್ರವೇಶಿಸಲು ಕೇರಳ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಇಬ್ಬರು ಮಹಿಳಾ ಕಾರ್ಯಕರ್ತರು ಸಲ್ಲಿಸಿದ್ದ...

ತುಮಕೂರು ಸ್ಮಾರ್ಟ್‌ಸಿಟಿ ಜೆಎಂಡಿ ಎತ್ತಂಗಡಿ!

ತುಮಕೂರು: ಸ್ಮಾರ್ಟ್‌ಸಿಟಿ ಲಿಮಿಟೆಡ್ ಜಂಟಿ ವ್ಯವಸ್ಥಾಪಕ ನಿರ್ದೇಶಕ ವಿ.ಅಜಯ್ ಅವರನ್ನು ಎತ್ತಂಗಡಿ ಮಾಡಲಾಗಿದೆ. 3 ತಿಂಗಳ ಹಿಂದೇ ಸ್ಮಾರ್ಟ್‌ಸಿಟಿ ಎಂಡಿ ಜವಾಬ್ದಾರಿ ಹೊಣೆ ಹೊತ್ತಿದ್ದ ಮಹಾನಗರ...

ಕುಪ್ಪೂರು ಶ್ರೀ ಮರುಳಸಿದ್ದೇಶ್ವರ ಜಾತ್ರೆಗೆ ಸಿಎಂ ಯಡಿಯೂರಪ್ಪ ಚಾಲನೆ

ಚಿಕ್ಕನಾಯಕನಹಳ್ಳಿ: ಸುಕ್ಷೇತ್ರ ಕುಪ್ಪೂರು ಶ್ರೀಮರುಳಸಿದ್ದೇಶ್ವರ ಗದ್ದುಗೆ ಜಾತ್ರೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಗುರುವಾರ ಚಾಲನೆ ನೀಡಿದ್ದು, ನಾಡಿನ ವಿವಿಧೆಡೆಯಿಂದ ಸಾವಿರಾರು ಭಕ್ತರು ಜಾತ್ರೆಗೆ ಬಂದಿದ್ದರು. ಶ್ರೀಮಠದ ಆವರಣದಲ್ಲಿ ಗುರುವಾರ...

ಬಲರಾಮ್ ಕುಣಿಗಲ್ ಬಿಜೆಪಿ ಅಧ್ಯಕ್ಷ

ಕುಣಿಗಲ್: ತಾಲೂಕು ಬಿಜೆಪಿ ನೂತನ ಅಧ್ಯಕ್ಷರಾಗಿ ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಸ್.ಬಲರಾಮ್ ಗುರುವಾರ ಅವಿರೋಧ ಆಯ್ಕೆಯಾದರು. ಪಟ್ಟಣದ ದಿಶಾ ಪಾರ್ಟಿ ಹಾಲ್‌ನಲ್ಲಿ ರಾಜ್ಯ ಬಿಜೆಪಿ...

ಭಾರತದ ಪ್ರಗತಿಗೆ ಬೇಕು ವೈಜ್ಞಾನಿಕ ಶಿಕ್ಷಣ: ಡಾ.ಡಿ.ವಿ.ಗೋಪಿನಾಥ್

ದಾವಣಗೆರೆ: ಭಾರತದ ಪ್ರಗತಿಗೆ ವೈಜ್ಞಾನಿಕ ಶಿಕ್ಷಣ ಅತ್ಯವಶ್ಯ ಎಂದು ಮುಂಬೈನ ಭಾಭಾ ಅಣು ಸಂಶೋಧನಾ ಕೇಂದ್ರದ ಜೀವ ವೈದ್ಯಕೀಯ ವಿಭಾಗದ ನಿವೃತ್ತ ನಿರ್ದೇಶಕ ಡಾ.ಡಿ.ವಿ.ಗೋಪಿನಾಥ್ ಹೇಳಿದರು. ಪಾರ್ವತಮ್ಮ...

ಚಡಚಣ : ಈ ಹಿಂದಿನ ಸಮ್ಮಿಶ್ರ ಸರ್ಕಾರ ನಾಗಠಾಣ ಮತಕ್ಷೇತ್ರದಲ್ಲಿ ಕೈಗೊಂಡ ಎಲ್ಲ ಪ್ರಗತಿಪರ ಯೋಜನೆಗಳನ್ನು ಸದ್ಯದ ಬಿಜೆಪಿ ಸರ್ಕಾರ ಸ್ಥಗಿತಗೊಳಿಸುವ ಮೂಲಕ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಶಾಸಕ ಡಾ. ದೇವಾನಂದ ಚವಾಣ್ ಹೇಳಿದರು.

ಟೆಂಡರ್ ಪ್ರಕ್ರಿಯೆ ಮುಗಿದು ಪ್ರಾರಂಭಿಕ ಹಂತದಲ್ಲಿರುವ ಅನೇಕ ಕಾಮಗಾರಿಗಳನ್ನು ಸ್ಥಗಿತಗೊಳಿಸಿ ನನ್ನ ಹೆಸರಿಗೆ ಮಸಿ ಬಳೆಯುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆ. ಸಾಮಾಜಿಕ ನ್ಯಾಯದಡಿ ಮೂಲ ಸೌಕರ್ಯ ಒದಗಿಸುವುದು ಸರ್ಕಾರದ ಆದ್ಯ ಕರ್ತವ್ಯ. ಆದರೆ, ನನ್ನ ಮತಕ್ಷೇತ್ರದಲ್ಲಿ ಮಾತ್ರ ಇದಕ್ಕೆ ತದ್ವಿರುದ್ಧವಾಗಿ ಬಿಜೆಪಿಯವರು ನಡೆದುಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಕುಖ್ಯಾತಿಗಳಿಸಿರುವ ಭೀಮಾ ತೀರದ ಮರಳು ಮಾಫಿಯಾ ದಂಧೆಗೆ ನಾನು ಸಂಪೂರ್ಣ ಕಡಿವಾಣ ಹಾಕಿದ್ದೆ. ಆದರೆ, ಸದ್ಯ ಮರಳು ಮಾಫಿಯಾ ದೊರೆಗಳು ಸೂಚಿಸುವ ಪೊಲೀಸ್ ಅಧಿಕಾರಿಗಳನ್ನು ಮಾತ್ರ ಚಡಚಣಕ್ಕೆ ವರ್ಗಾಹಿಸುವ ಮೂಲಕ ಬಿಜೆಪಿಯವರು ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.

ಈ ಹಿಂದಿನ ವಿಧಾನಸಭೆ ಚುನಾವಣೆಯಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳರ ಪುತ್ರ ಗೋಪಾಲ ಕಾರಜೋಳ ಅವರು ನನ್ನ ವಿರುದ್ಧ ಸ್ಪರ್ಧಿಸಿದ್ದರು. ಆದರೆ, ಮತದಾರರ ತೀರ್ಮಾನದಂತೆ ನಾನು ಶಾಸಕನಾಗಿ ಆಯ್ಕೆಯಾಗಿದ್ದೇನೆ. ಸದ್ಯ ಅವರು ನಾನು ಮತಕ್ಷೇತ್ರದಲ್ಲಿ ಕೈಗೊಂಡಿರುವ ಅನೇಕ ಜನಪರ ಕಾಮಗಾರಿಗಳನ್ನು ಸ್ಥಗಿತಗೊಳಿಸುವ ಮೂಲಕ ರಾಜಕೀಯ ದ್ವೇಷ ಸಾಧಿಸುತ್ತಿದ್ದಾರೆ ಎಂದರು.

ಮತಕ್ಷೇತ್ರದಲ್ಲಿ ಬಹುತೇಕ ರಸ್ತೆಗಳು ಹದಗೆಟ್ಟಿದ್ದು, ರಿಪೇರಿ ಹಾಗೂ ನಿರ್ಮಾಣಕ್ಕಾಗಿ ನಾನು ಸರ್ಕಾರದ ಮೇಲೆ ಒತ್ತಡ ಹೇರಿ ನೂರಾರು ಕೋಟಿ ರೂ. ಅನುದಾನ ತಂದಿದ್ದೆ. ಆದರೆ, ಈ ಕಾಮಗಾರಿಗಳನ್ನು ಸಂಪೂರ್ಣ ಸ್ಥಗಿತಗೊಳಿಸಿದ್ದಾರೆ. ನನ್ನ ಮತಕ್ಷೇತ್ರದಲ್ಲಿ ಯಾವುದೇ ಕಾಮಗಾರಿಗಳು ಕುಂಠಿತಗೊಂಡರೆ ಅದಕ್ಕೆ ಬಿಜೆಪಿಯೇ ನೇರ ಹೊಣೆಗಾರ ಆಗುತ್ತದೆ ಎಂದರು ತಿಳಿಸಿದರು.

ಇತ್ತೀಚಿನ ಭೀಮಾ ನದಿಯ ಪ್ರವಾಹದಿಂದಾಗಿ ಚಡಚಣ ತಾಲೂಕಿನ 500 ಕುಟುಂಬಗಳು ಮನೆ ಕಳೆದುಕೊಂಡು ಬೀದಿ ಪಾಲಾಗಿವೆ. ಸಾಕಷ್ಟು ಬೆಳೆ ಹಾನಿ ಸಂಭವಿಸಿದೆ. ತುರ್ತಾಗಿ ರೈತರ ನೆರವಿಗೆ ಬರಬೇಕಾಗಿದ್ದ ಸರ್ಕಾರದಿಂದ ಈವರೆಗೂ ರೈತರಿಗೆ ಒಂದು ನೈಯಾಪೈಸೆ ಕೂಡ ಬಂದಿಲ. ಶಾಸಕರ ಕುದುರೆ ವ್ಯಾಪಾರಕ್ಕೆ ಸಾವಿರಾರು ಕೋಟಿ ರೂ. ಖರ್ಚು ಮಾಡುವ ಬಿಜೆಪಿ ರೆತರ ನೆರವಿಗೆ ಬರದೇ ಕೇವಲ ಕಾಲಹರಣ ಮಾಡುತ್ತಿದೆ ಎಂದು ಆರೋಪಿಸಿದರು.

ಜೇವೂರ ಕ್ರಾಸ್‌ನಿಂದ ತದ್ದೇವಾಡಿವರೆಗೆ ಸುಮಾರು 11 ಕೋಟಿ ರೂ. ವೆಚ್ಚದ ರಸ್ತೆ ಸುಧಾರಣೆ, 1.5 ಕೋಟಿ ರೂ. ವೆಚ್ಚದಲ್ಲಿ ಲೋಣಿ (ಬಿಕೆ) ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ, 1.90 ಕೋಟಿ ರೂ. ವೆಚ್ಚದಲ್ಲಿ ಚಡಚಣ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ವಸತಿ ಗೃಹ ಹಾಗೂ 97 ಲಕ್ಷ ರೂ. ವೆಚ್ಚದ ಲಮಾಣಿಹಟ್ಟಿ ಗ್ರಾಮದಿಂದ ಜಿಗಜೇವಣಿಗೆ ಕೂಡುವ ರಸ್ತೆ ಸುಧಾರಣೆಗೆ ಅವರು ಭೂಮಿಪೂಜೆ ನೆರವೇರಿಸಿದರು.

ಜಿಪಂ ಸದಸ್ಯ ಶಿವಶರಣ ಭೈರಗೊಂಡ, ಪಪಂ ಸದಸ್ಯ ಮಲ್ಲಿಕಾರ್ಜುನ ಧೋತ್ರೆ, ಜೆಡಿಎಸ್ ಮುಖಂಡರಾದ ವೈ.ಎಸ್. ಮಕಾನದಾರ, ಚಂದ್ರಕಾಂತ ಸಿಂಧೆ, ರಾಮ ಮಾಲಾಪೂರ, ಸಿದ್ದು ಸೋಲಾಪುರ, ಭೀಮಾಶಂಕರ ವಾಳಿಖಿಂಡಿ, ಪ್ರವೀಣ ಕಲ್ಯಾಣಶೆಟ್ಟಿ, ದೀಪಕ ಕದಂ ಮತ್ತಿತರರಿದ್ದರು.

ಭೂಮಿ ಪೂಜೆ
ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ನಬಾರ್ಡ್ ಯೋಜನೆಯ ಅನುದಾನದಲ್ಲಿ ನಿರ್ಮಿಸುತ್ತಿರುವ ಸಿಬ್ಬಂದಿ ವಸತಿ ಗೃಹ ಕಟ್ಟಡಗಳಿಗೆ ಶಾಸಕ ಡಾ. ದೇವಾನಂದ ಚವಾಣ್ ಭೂಮಿಪೂಜೆ ನೆರವೇರಿಸಿದರು.

ಪಪಂ ಅಧ್ಯಕ್ಷ ಬಾಬುಗೌಡ ಪಾಟೀಲ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಎಂ.ಎಂ. ಕಾಪಸೆ, ತಾಲೂಕು ವೈದ್ಯಾಧಿಕಾರಿ ಡಾ. ಅರ್ಚನಾ ಕುಲಕರ್ಣಿ, ಡಾ. ಎಂ.ಐ. ನಾಗರಬೆಟ್ಟ, ಡಾ. ಸಂಪತ್ತಕುಮಾರ ಗುಣಾರಿ, ಡಾ. ಐ.ಎಸ್. ಧಾರವಾಡಕರ, ಡಾ. ಜೆ.ಐ. ಕಟವಟಿ, ಡಾ. ಎ.ಎನ್. ಅಗರಖೇಡ, ಪಪಂ ಮುಖ್ಯಾಧಿಕಾರಿ ಶಿವಾನಂದ ಪೂಜಾರಿ ಸೇರಿ ಪಪಂನ ಸರ್ವ ಸದಸ್ಯರು ಹಾಗೂ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ಇದ್ದರು.

Stay connected

278,748FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO| ಬರೋಬ್ಬರಿ 20 ಕೆ.ಜಿ. ತೂಕದ ಹೆಬ್ಬಾವು ಸೆರೆಹಿಡಿದ ಮಹಿಳೆ:...

ತಿರುವನಂತಪುರ: ಮಹಿಳೆಯೊಬ್ಬರು ಸುಮಾರು 20 ಕೆ.ಜಿ. ತೂಗುವ ಬೃಹದಾಕಾರದ ಹೆಬ್ಬಾವನ್ನು ಸೆರೆಹಿಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಮೆಚ್ಚುಗೆ ಮಹಾಪೂರ ಹರಿದುಬಂದಿದೆ. ವಿಡಿಯೋದಲ್ಲಿರುವ ಮಹಿಳೆಯನ್ನು ಕೊಚ್ಚಿ ಮೂಲದ ವನ್ಯಜೀವಿ ಸಂರಕ್ಷಕಿ...

ಅತ್ಯಾಚಾರ ಪ್ರಕರಣ ಕುರಿತು ರಾಹುಲ್​ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ಗದ್ದಲ:...

ನವದೆಹಲಿ: ಅತ್ಯಾಚಾರ ಪ್ರಕರಣ ಕುರಿತು ಗುರುವಾರ ಜಾರ್ಖಂಡ್​ ಸಮಾವೇಶದಲ್ಲಿ ಕಾಂಗ್ರೆಸ್​ ಮಾಜಿ ಅಧ್ಯಕ್ಷ ಹಾಗೂ ವಯನಾಡಿನ ಹಾಲಿ ಸಂಸದ ರಾಹುಲ್​ ಗಾಂಧಿ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ....

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....