

ಬೆಂಗಳೂರು: ವಾಯುವಿಹಾರಕ್ಕೆ ತೆರಳಿದ್ದ ಎಎಸ್ಐ ಪತ್ನಿಯನ್ನು ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿರುವ ದುಷ್ಕರ್ವಿುಗಳು, ಚಿನ್ನದಸರ ದೋಚಿ ಪರಾರಿಯಾಗಿದ್ದಾರೆ. ಸಿದ್ದಾಪುರ ನಿವಾಸಿ ಸುಶೀಲಮ್ಮ ಈ ಬಗ್ಗೆ ದೂರು ನೀಡಿದ್ದು, ಅಪರಿಚಿತರ ವಿರುದ್ಧ ವರ್ತೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವೈಟ್ಫೀಲ್ಡ್ನ ಸಿದ್ದಾಪುರದಲ್ಲಿ ನೆಲೆಸಿರುವ ಸುಶೀಲಮ್ಮ ಗೃಹಿಣಿಯಾಗಿದ್ದು, ಪತಿ ಮುನಿನಾರಾಯಣಪ್ಪ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ಎಸ್ಪಿ ಕಚೇರಿಯಲ್ಲಿ ಎಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಶುಕ್ರವಾರ ರಾತ್ರಿ 10 ಗಂಟೆಯಲ್ಲಿ ಸುಶೀಲಮ್ಮವಾಯುವಿಹಾರ ಮಾಡುತ್ತಿದ್ದಾಗ ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿ ಬಂದಿದ್ದ ಇಬ್ಬರು ದುಷ್ಕರ್ವಿುಗಳು ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ.
ಈ ಕುರಿತು ಪ್ರಕರಣ ದಾಖಲಿಸಿ, ಸಿಸಿ ಕ್ಯಾಮರಾ ದೃಶ್ಯಗಳನ್ನು ಪರಿಶೀಲಿಸಲಾಗಿದೆ. ಆರೋಪಿಗಳ ಮುಖಚಹರೆ ಗುರುತು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್ಗಾಗಿ ನಮ್ಮ ಫೇಸ್ಬುಕ್ ಪುಟ ಲೈಕ್ ಮಾಡಿ ಮತ್ತು ಫಾಲೋ ಮಾಡಿ..