ಸಂಧಾನಕ್ಕೆ ಸಂಘಪರಿವಾರ ಮಧ್ಯಸ್ಥಿಕೆ ?

Latest News

ಶಿವಸೇನೆ, ಎನ್​ಸಿಪಿ ಮತ್ತು ಕಾಂಗ್ರೆಸ್​ ಮೈತ್ರಿಕೂಟ, ಮತದಾರರ ಬಗೆಯುವ ನಂಬಿಕೆ ದ್ರೋಹ: ಸುಪ್ರೀಂಗೆ ಅರ್ಜಿ

ನವದೆಹಲಿ: ಮಹಾರಾಷ್ಟ್ರದಲ್ಲಿ ಅವಕಾಶವಾದಿ ರಾಜಕಾರಣ ನಡೆಯುತ್ತಿದೆ. ಅಧಿಕಾರದಾಹದ ಹಿನ್ನೆಲೆಯಲ್ಲಿ ಶಿವಸೇನೆ, ಎನ್​ಸಿಪಿ ಮತ್ತು ಕಾಂಗ್ರೆಸ್​ ಅನೈತಿಕ ಮೈತ್ರಿ ಮಾಡಿಕೊಳ್ಳುತ್ತಿವೆ. ಇದು ಮತದಾರರಿಗೆ ಬಗೆಯುತ್ತಿರುವ...

ಉಪಚುನಾವಣೆಯಲ್ಲಿ ಜಾ.ದಳ, ಬಿಜೆಪಿಗೆ ಗೆಲುವು

ಸಕಲೇಶಪುರ: ತಾಲೂಕಿನ ಕ್ಯಾಮನಹಳ್ಳಿ ಗ್ರಾಮ ಪಂಚಾಯಿತಿಯ ಒಂದು ಸ್ಥಾನಕ್ಕೆ ನಡೆದ ಉಪಚುನಾವಣೆ ಫಲಿತಾಂಶ ಗುರುವಾರ ಹೊರಬಿದ್ದಿದ್ದು, ಬಿಜೆಪಿ ಬೆಂಬಲಿತ ಅಭ್ಯರ್ಥಿ ವಿಮಲಾ 73...

ಸ್ವಸ್ಥ ಸಮಾಜಕ್ಕೆ ರೆಡ್‌ಕ್ರಾಸ್‌ನಿಂದ ಕೊಡುಗೆ

ಹಾಸನ: ಅನೇಕ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಂಡಿರುವ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸ್ವಸ್ಥ ಸಮಾಜ ನಿರ್ಮಾಣಕ್ಕೆ ತನ್ನದೇ ಆದ ಕೊಡುಗೆ ನೀಡುತ್ತಿದೆ ಎಂದು...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ ವಿಷಯಗಳಲ್ಲಿ ಫೇಲ್​ ಆದರೂ ವಿಮಾನ ಮಾದರಿಗಳನ್ನು ತಯಾರಿಸಿದ ಹುಡುಗ!

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​...

ದೇಶ ದ್ರೋಹ ಪ್ರಕರಣ ದಾಖಲಿಸಲು ಒತ್ತಾಯ

ಹಾಸನ: ಡಾ.ಬಿ.ಆರ್.ಅಂಬೇಡ್ಕರ್ ಒಬ್ಬರೇ ಸಂವಿಧಾನ ರಚಿಸಿಲ್ಲ ಎಂಬ ಒಕ್ಕಣೆಯ ಕೈಪಿಡಿ ತಯಾರಿಸಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್...

ವಿಜಯವಾಣಿ ಸುದ್ದಿಜಾಲ ಮಂಗಳೂರು
ಹಿಂದು ಸಂಘಟನೆ ಮುಖಂಡರಾದ ಚೈತ್ರಾ ಕುಂದಾಪುರ ಮತ್ತು ಗುರುಪ್ರಸಾದ್ ಪಂಜ ಗುಂಪುಗಳ ನಡುವಿನ ಭಿನ್ನಮತ ಶಮನಕ್ಕೆ ಸಂಘಪರಿವಾರ ಮುಂದಾಗಿದ್ದು, ಪ್ರಕರಣ ಸುಖಾಂತ್ಯ ಕಾಣುವ ಸೂಚನೆ ಕಂಡುಬಂದಿದೆ!
ಉಭಯ ಗುಂಪುಗಳ ತಲಾ ಐವರು(ಒಟ್ಟು 10 ) ಸದಸ್ಯರು ಹಾಗೂ ಸುಮಾರು 12 ಮಂದಿ ಸಂಘದ ಹಿರಿಯ ಸದಸ್ಯರ ಉಪಸ್ಥಿತಿಯಲ್ಲಿ ಇನ್ನೆರಡು ದಿನಗಳಲ್ಲಿ ನಗರದಲ್ಲಿ ಸಂಧಾನ ಸಭೆ ನಡೆಯುವ ಸಾಧ್ಯತೆ ಇರುವುದಾಗಿ ಸಂಘದ ಮೂಲ ತಿಳಿಸಿದೆ.
ಹಿಂದು ಜಾಗರಣ ವೇದಿಕೆ ಸುಳ್ಯ ತಾಲೂಕು ಪ್ರಧಾನ ಕಾರ್ಯದರ್ಶಿ ಗುರು ಪ್ರಸಾದ್ ಪಂಜ ಹಾಗೂ ಕರಾವಳಿಯಲ್ಲಿ ಹಿಂದು ಸಂಘಟನೆಯ ಫೈರ್‌ಬ್ರಾಂಡ್ ಎಂದೇ ಗುರುತಿಸಿಕೊಂಡಿರುವ ಚೈತ್ರಾ ಕುಂದಾಪುರ ನಡುವೆ ಸುಬ್ರಹ್ಮಣ್ಯದಲ್ಲಿ ಇತ್ತೀಚೆಗೆ ಸಂಘರ್ಷ ಹಾಗೂ ದಾಳಿ ನಡೆದಿತ್ತು.

ಗುಂಪುಗಳಿಗೆ ಸೂಚನೆ:  ಸಂಧಾನ ಬೈಠಕ್‌ನಲ್ಲಿ ಭಾಗವಹಿಸಲು ತಂಡದ ಐವರು ಯಾವುದೇ ಸಂದರ್ಭ ಸಿದ್ಧರಾಗಿರುವಂತೆ ಉಭಯ ಗುಂಪುಗಳಿಗೆ ಸಂಘದ ಹಿರಿಯರಿಂದ ಸಂದೇಶ ರವಾನೆಯಾಗಿದೆ. ಪ್ರಕರಣ ಸಂಬಂಧಿಸಿ ಚೈತ್ರಾ ಕುಂದಾಪುರ ಹಾಗೂ ಆಕೆಯ ಗುಂಪಿನ ಇತರ ಆರು ಮಂದಿ ಸದಸ್ಯರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಗುರುಪ್ರಸಾದ್ ಪಂಜ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ತಂಡದ ಆಶಿತ್ ಕಲ್ಲಾಜೆ, ತೀರ್ಥರಾಮ ಅವರನ್ನು ಒಳಗೊಂಡಿರುವ ತಂಡದ ವಿರುದ್ಧ ಕೂಡ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದ್ದು, ಅವರು ತಲೆಮರೆಸಿಕೊಂಡಿದ್ದಾರೆ.

ಸಂಧಾನಕ್ಕೆ ಕಾರಣ:  ಸಂಘದ ಗುಂಪುಗಳ ನಡುವೆ ಸಂಘರ್ಷ, ವ್ಯಾಜ್ಯ, ಶಿಕ್ಷೆಯಿಂದ ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗುತ್ತದೆ ಎನ್ನುವುದು ಸಂಘದ ಹಿರಿಯರ ಕಾಳಜಿ. ಪ್ರಕರಣದಲ್ಲಿ ಎರಡು ಗುಂಪುಗಳಿಗೂ ನಷ್ಟವಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಉಭಯ ಕಡೆಗಳ ಸದಸ್ಯರಿಗೂ ಪ್ರಕರಣ ಮುಂದುವರಿಸಲು ಆಸಕ್ತಿ ಇದ್ದಂತೆ ಕಂಡುಬರುತ್ತಿಲ್ಲ. ಚೈತ್ರಾ ತಂಡದ ಸದಸ್ಯರು ಬಂಧಿತರಾಗಿದ್ದರೆ, ಗುರುಪ್ರಸಾದ್ ಗುಂಪು ಯಾವುದೇ ಸಂದರ್ಭ ಬಂಧನಕ್ಕೊಳಗಾಗುವ ಭೀತಿ ಎದುರಿಸುತ್ತಿದೆ. ಒಂದು ಗುಂಪಿನಲ್ಲಿ ಇಬ್ಬರು ವಿದ್ಯಾರ್ಥಿಗಳಿದ್ದು, ಅವರು ಬಂಧಿತರಾದರೆ ಭವಿಷ್ಯದಲ್ಲಿ ಮತ್ತಷ್ಟು ಸಮಸ್ಯೆ ಎದುರಿಸಬೇಕಾಗುತ್ತದೆ.
ಸಂಧಾನ ಬಹುತೇಕ ಖಚಿತ. ಯಾಕೆಂದರೆ ಸಂಘಟನೆಯಲ್ಲಿ ನಮ್ಮ ನಾಯಕಿ ಬಹಳಷ್ಟು ದೂರ ಬಂದಿದ್ದಾರೆ. ಉತ್ತಮ ಹೆಸರು ಗಳಿಸಿದ್ದಾರೆ. ಮತ್ತೆ ಸಂಘಟನೆ ತೊರೆಯುವ ವಿಷಯ ಅವರು ಆಲೋಚನೆಯೂ ಮಾಡಲಾರರು. ಆದ್ದರಿಂದ ಅಂತಿಮವಾಗಿ ಸಂಘದ ಹಿರಿಯರ ಮಾತಿಗೆ ಬೆಲೆಕೊಟ್ಟು ಸಂಧಾನಕ್ಕೆ ಒಪ್ಪಿಕೊಳ್ಳಬೇಕಾದ ಪರಿಸ್ಥಿತಿ ಬರಬಹುದು ಎಂದು ಚೈತ್ರಾ ತಂಡದ ಸದಸ್ಯರೋರ್ವರು ಪ್ರತಿಕ್ರಿಯಿಸಿದ್ದಾರೆ.

ಸುಬ್ರಹ್ಮಣ್ಯ ಹಲ್ಲೆ ಪ್ರಕರಣಕ್ಕೆ ಬಿಜೆಪಿ ಖಂಡನೆ
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಕಾಶಿಕಟ್ಟೆ ಬಳಿ ಚೈತ್ರಾ ಕುಂದಾಪುರ ಮತ್ತು ಗುರುಪ್ರಸಾದ್ ಪಂಜ ತಂಡಗಳ ನಡುವೆ ನಡೆದ ಘರ್ಷಣೆ ಖಂಡನೀಯ ಎಂದು ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯ ಎ.ವಿ.ತೀರ್ಥರಾಮ ತಿಳಿಸಿದರು.
ಘಟನಾ ಸ್ಥಳದಲ್ಲಿ ಇಲ್ಲದ ಬಿಜೆಪಿ ತಾಲೂಕು ಪ್ರಧಾನ ಕಾರ್ಯದರ್ಶಿ ಕಿಶೋರ್ ಶಿರಾಡಿ ಅವರನ್ನು ಈ ಪ್ರಕರಣದಲ್ಲಿ ಸಿಲುಕಿಸಿರುವುದನ್ನು ಮತ್ತು ಹಿಂದು ಮುಖಂಡ ಗುರುಪ್ರಸಾದ್ ಮೇಲಿನ ಹಲ್ಲೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಘಟನೆ ನಡೆದ ನಂತರದಲ್ಲಿ ತನಿಖೆ ವೇಳೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದು ಕರ್ತವ್ಯ. ಆದರೆ ಘಟನಾ ಸ್ಥಳದಲ್ಲಿಲ್ಲದ ಕಿಶೋರ್ ಶಿರಾಡಿ ಅವರನ್ನು ಪ್ರಕರಣದಲ್ಲಿ ಸೇರಿಸಿರುವುದು ತಪ್ಪು. ಇದರ ಹಿಂದೆ ಷಡ್ಯಂತ್ರವಿದೆ ಎಂದರು. ಬಿಜೆಪಿ ಮುಖಂಡ ರಾಜೇಶ್ ಎನ್.ಎಸ್, ಚಿದಾನಂದ ಕಂದಡ್ಕ, ಅಚ್ಚುತ್ತ ಕುಕ್ಕಪ್ಪನಮನೆ, ಅಶೋಕ್ ಆಚಾರ್ಯ, ಶ್ರೀಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

- Advertisement -

Stay connected

278,463FansLike
562FollowersFollow
607,000SubscribersSubscribe

ವಿಡಿಯೋ ನ್ಯೂಸ್

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....

VIDEO: ಅವಿಸ್ಮರಣೀಯ ಕ್ಷಣಗಳು:...

ಹ್ಯೂಸ್ಟನ್​: ಇಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಹೌಡಿ ಮೋದಿ ಕಾರ್ಯಕ್ರಮ ಮುಗಿದ ಬಳಿಕ ವೇದಿಕೆಯಿಂದ ಇಳಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ತೆರಳುತ್ತಿದ್ದರು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ...

VIDEO: ಅಮೆರಿಕ ತಲುಪಿದ...

ಹ್ಯೂಸ್ಟನ್​: ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಮೆರಿಕ ತಲುಪಿದರು. ಹ್ಯೂಸ್ಟನ್​ನ ಜಾರ್ಜ್ ಬುಷ್​ ಇಂಟರ್​ಕಾಂಟಿನೆಂಟಲ್​ ಏರ್​ಪೋರ್ಟ್​ಗೆ ಬಂದಿಳಿದ ಅವರನ್ನು ಭಾರತದಲ್ಲಿನ ಅಮೆರಿಕ ರಾಯಭಾರಿ ಕೆನ್ನೆತ್​ ಜಸ್ಟರ್​, ಅಮೆರಿಕದಲ್ಲಿನ ಭಾರತದ ರಾಯಭಾರಿ...

ಹೈಕೋರ್ಟ್ ಜಡ್ಜ್​ ವಿರುದ್ಧ...

ಹೈದರಾಬಾದ್​: ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ನೂಟಿ ರಾಮಮೋಹನ ರಾವ್​ ವಿರುದ್ಧ ಅವರ ಸೊಸೆಯೇ ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸಿದ್ದಾರೆ. ಬರೀ ಮಾವನ ವಿರುದ್ಧವಷ್ಟೇ ಅಲ್ಲದೆ, ಅತ್ತೆ ನೂಟಿ ದುರ್ಗಾ ಜಯ ಲಕ್ಷ್ಮೀ ಮತ್ತು...

ಉಪಚುನಾವಣೆಯಲ್ಲಿ ಮೈತ್ರಿ ಕುರಿತು...

ಬೆಂಗಳೂರು: ಉಪಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲಿ ಜೆಡಿಎಸ್​ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದು ಜೆಡಿಎಸ್​ ಟ್ವೀಟ್​ ಮಾಡಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ...

ಮಸ್ಕಿ ಮತ್ತು ಆರ್​.ಆರ್​....

ಬೆಂಗಳೂರು: ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಳ ಜತೆಯಲ್ಲೇ ರಾಜ್ಯದಲ್ಲಿ ತೆರವಾಗಿದ್ದ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಆದರೆ ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಿಗೆ ಚುನಾವಣಾ ಆಯೋಗ...

ಅಕ್ರಮ ಹಣ ಪತ್ತೆ...

ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ತೀರ್ಪನ್ನು ಸೆ.25ಕ್ಕೆ ಕಾಯ್ದಿರಿಸಲಾಗಿದೆ. ಇಂದು ಇ.ಡಿ. ವಿಶೇಷ...

VIDEO: ರೋಹಿತ್​ ಶರ್ಮಾ...

ಟೀಂ ಇಂಡಿಯಾ ಓಪನರ್​ ರೋಹಿತ್​ ಶರ್ಮಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶಿಖರ್​ ಧವನ್​ ಅವರ ಕ್ಯೂಟ್​ ವಿಡಿಯೋವೊಂದನ್ನು ಶೇರ್ ಮಾಡಿದ್ದಾರೆ. ವಿಡಿಯೋವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಸಿಕ್ಕಾಪಟೆ, ಲೈಕ್ಸ್​, ಕಾಮೆಂಟ್ಸ್​ಗಳು ಬರುತ್ತಿವೆ. ರೋಹಿತ್​ ಶರ್ಮಾ ಹಾಗೂ...

VIDEO: ಹೊಸ ಟ್ರಾಫಿಕ್​...

ಸದ್ಯಕ್ಕಂತೂ ಹೊಸ ಮೋಟಾರು ವಾಹನ ಕಾಯ್ದೆಯಡಿ ಟ್ರಾಫಿಕ್​ ರೂಲ್ಸ್​ ಬ್ರೇಕ್​ ಮಾಡಿದವರಿಗೆ ವಿಧಿಸುತ್ತಿರುವ ದಂಡದ ಬಗ್ಗೆಯೇ ಚರ್ಚೆ. ಇದೇ ವಿಚಾರವಾಗಿ ಹಲವು ರೀತಿಯ ವಿಡಿಯೋಗಳು, ಮೆಸೇಜ್​ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ. ಮೊದಲಿದ್ದ...