ಚೈತ್ರಾ ಕುಂದಾಪುರ ಆಸ್ಪತ್ರೆಗೆ ದಾಖಲು!

Untitled design - 2023-09-15T094217.970
Published on

ಬೆಂಗಳೂರು: ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಉದ್ಯಮಿ ಗೋವಿಂದ ಪೂಜಾರಿಗೆ 5 ಕೋಟಿ ರೂ. ವಂಚನೆ ಮಾಡಿದ ಪ್ರಕರಣದಲ್ಲಿ ಪ್ರಥಮ ಆರೋಪಿಯಾಗಿರುವ ಭಾಷಣಕಾರ್ತಿ ಚೈತ್ರಾ ಕುಂದಾಪುರ ತೀವ್ರ ಅಸ್ವಸ್ಥರಾದ ಹಿನ್ನೆಲೆ ಅಧಿಕಾರಿಗಳು ಇದೀಗ ಆಕೆಯನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಚೈತ್ರಾ ಮತ್ತು ಇತರರನ್ನು ಕೋರ್ಟ್‌ 10 ದಿನಗಳ ಅವಧಿಗೆ ಸಿಸಿಬಿ ಕಸ್ಟಡಿಗೆ ಒಪ್ಪಿಸಿತು. ಇದರ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಆಕೆ, ಮೂರ್ಛೆ ಹೋದ ಸ್ಥಿತಿಯಲ್ಲಿದ್ದುದನ್ನು ಕಂಡ ಅಧಿಕಾರಿಗಳು ಕೂಡಲೇ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಬೆಳಗ್ಗೆ ಸಿಸಿಬಿ ಕಚೇರಿಯಲ್ಲಿ ಚೈತ್ರಾಳನ್ನು ವಿಚಾರಣೆಗೆ ಎಂದು ಕರೆಸಲಾಗಿತ್ತು. ಈ ವೇಳೆ ಚೈತ್ರಾ ಎರಡನೇ ಬಾರಿಗೆ ಆತ್ಮಹತ್ಯೆಗೆ ಯತ್ನಿಸಿದ್ದು, ಆಕೆ ಸಂಪೂರ್ಣ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು ಎಂದು ವರದಿ ತಿಳಿಸಿದೆ. ಸದ್ಯ ಅಧಿಕಾರಿಗಳು ಚೈತ್ರಾ ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆ ಕೊಡಿಸಿದ್ದಾರೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net