

ವಿಜಯವಾಣಿ ಸುದ್ದಿಜಾಲ ಉಡುಪಿ
ವಿವಿಧ ಸಂಘ-ಸಂಸ್ಥೆಗಳ ಸಹಕಾರದಲ್ಲಿ ಆಯೋಜಿಸುವ ಬೇಸಿಗೆ ಶಿಬಿರಗಳಲ್ಲಿ ಮಕ್ಕಳು ಲವಲವಿಕೆಯಿಂದ ಬೆರೆಯುತ್ತಾರೆ. ಇಂತಹ ಸಂದರ್ಭದಲ್ಲಿ ಅವರಿಗೆ ವ್ಯಕ್ತಿತ್ವ ವಿಕಸನ, ಕಲೆ, ಆಟೋಟ, ಯೋಗ ಹಾಗೂ ಭಾರತೀಯ ಸನಾತನ ಸಂಸ್ಕೃತಿಯ ಬಗ್ಗೆ ಮಾಹಿತಿ ನೀಡಬೇಕು ಎಂದು ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಯ ಅಧ್ಯಕ್ಷ ರಘುನಾಥ ನಾಯಕ ಸಲಹೆ ನೀಡಿದರು.
ಬೈಲೂರಿನ ವಾಸುದೇವ ಕೃಪಾ ವಿದ್ಯಾ ಮಂದಿರದ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಯ ಸಹಭಾಗಿತ್ವದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಚೈತ್ರ ಸಂಭ್ರಮ ಬೇಸಿಗೆ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ದಯಾನಂದ ಕೋಟ್ಯಾನ್, ಶಾಲಾ ಶಿಕ್ಷಕರು ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ಕಸ್ತೂರಿ ನಾಯಕ, ಪ್ರಕಾಶ ಕಳತ್ತೂರು, ರಾಧಿಕಾ ಕಾಮತ, ಸ್ವರ್ಣಲತಾ, ಪಲ್ಲವಿ ಕೊಡಗು, ಆಶಾ ಶೆಟ್ಟಿ, ಮಂಜುನಾಥ ಪಾಲ್ಗೊಂಡಿದ್ದರು. ಶಾಲಾ ಮುಖ್ಯೋಪಾಧ್ಯಾಯಿನಿ ನಿಶಾ ಕಾರ್ಯಕ್ರಮ ನಿರೂಪಿಸಿದರು.