More

    ನಾಡಿದ್ದು ಶಿವಮೊಗ್ಗದಲ್ಲಿ ಚಕ್ರವರ್ತಿ ಸೂಲಿಬೆಲೆ ಉಪನ್ಯಾಸ

    ಶಿವಮೊಗ್ಗ: ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ನಗರದ ಶತಕೋಟಿ ಶ್ರೀರಾಮ ತಾರಕ ನಾಮ ಜಪ ಯಜ್ಞ ಸಮಿತಿಯಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜ.5ರ ಸಂಜೆ ಎನ್‌ಡಿವಿ ಹಾಸ್ಟೆಲ್ ಆವರಣದಲ್ಲಿ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಮರ್ಯಾದ ಪುರುಷೋತ್ತಮ ಶ್ರೀರಾಮಚಂದ್ರ ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ.

    ಜ.7ರಂದು ಆಲ್ಕೊಳ ವಿಕಾಸ ಶಾಲೆಯಲ್ಲಿ ಶಿವಮೊಗ್ಗ ನಗರ ಮಟ್ಟದ ವಿವಿಧ ಸ್ಪರ್ಧೆಗಳನ್ನು ಹಿರಿಯ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾಗಿದೆ ಎಂದು ಸಮಿತಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ನಟರಾಜ ಭಾಗವತ್ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
    ಹಿಂದು ಧರ್ಮೀಯರು ಹಾಗೂ ಶ್ರೀರಾಮ ಭಕ್ತರ ಶತಮಾನದ ಕನಸು ನನಸಾಗುತ್ತಿರುವ ಹಿನ್ನೆಲೆಯಲ್ಲಿ ವಿವಿಧ ಕಾರ್ಯಕ್ರಮಗಳ ಮೂಲಕ ಆಸ್ತಿಕ ಭಕ್ತಿಯನ್ನು ಜಾಗೃತಿಗೊಳಿಸುವ ನಿಟ್ಟಿನಲ್ಲಿ ನಮ್ಮ ಸಮಿತಿ ಇದುವರೆಗೆ ಅನೇಕ ಕಾರ್ಯಕ್ರಮಗಳನ್ನು ಏರ್ಪಡಿಸಿದೆ. ಇದು ನಮ್ಮ ಕಾರ್ಯಕ್ರಮಗಳ ಸರಣಿಯ ಮುಂದುವರಿದ ಭಾಗವಾಗಿದೆ ಎಂದು ಹೇಳಿದರು.
    6-7, 8 ರಿಂದ 10 ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಮೂರು ವಿಭಾಗದಲ್ಲಿ ರಸಪ್ರಶ್ನೆ, ಚಿತ್ರಕಲೆ ಹಾಗೂ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದೆ. ಪ್ರತಿ ವಿಭಾಗದಲ್ಲೂ ಪ್ರತ್ಯೇಕವಾಗಿ ಮೊದಲ, ದ್ವಿತೀಯ ಹಾಗೂ ತೃತೀಯ ಬಹುಮಾನ ನೀಡಲಾಗುವುದು. ವಿದ್ಯಾರ್ಥಿಗಳು ಶಾಲೆ ಮೂಲಕವೇ ನೋಂದಣಿ ಮಾಡಿಕೊಂಡು ಸ್ಪರ್ಧೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.
    ಸ್ಪರ್ಧೆಗಳಿಗೆ ಇದವರೆಗೆ 800ಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ವಿಜೇತರಿಗೆ ಪ್ರಥಮ ಎರಡು ಸಾವಿರ ರೂ., ದ್ವಿತೀಯ 1,500 ರೂ. ಹಾಗೂ ತೃತೀಯ ಒಂದು ಸಾವಿರ ರೂ. ನಗದು ಬಹುಮಾನ ನೀಡಲಾಗುತ್ತದೆ. ವಿದ್ಯಾರ್ಥಿಗಳಲ್ಲಿ ರಾಮಪ್ರಜ್ಞೆ ಬೆಳೆಸುವ ಉದ್ದೇಶದಿಂದ ಸ್ಪರ್ಧೆ ಆಯೋಜಿಸಲಾಗಿದೆ ಎಂದರು.
    ಈಗಾಗಲೇ ನಗರದ ವ್ಯಾಪ್ತಿಯಲ್ಲಿ ಸುಮಾರು 15 ಸಾವಿರ ಮಂದಿ ರಾಮತಾರಕ ಮಂತ್ರವನ್ನು ಬರೆಯುತ್ತಿದ್ದಾರೆ. ಪಠಣ ಮಾಡುತ್ತಿದ್ದಾರೆ. ಇದು ಸಣ್ಣ ಮಾತಲ್ಲ. ಹಲವಾರು ಶಾಲೆಗಳಲ್ಲೂ ರಾಮತಾರಕ ಮಂತ್ರ ಪಠಣ ಮಾಡಲಾಗುತ್ತಿದೆ. ಅ.22ರಂದು ರಾಮನ ಮೂರ್ತಿ ಪ್ರತಿಷ್ಠಾಪನೆ ಸಂದರ್ಭದಲ್ಲಿ ನಗರದ ಸುಮಾರು 40 ದೇವಾಲಯಗಳಲ್ಲಿ ರಾಮತಾಕರ ಮಂತ್ರ ಲಿಖಿತ ರೂಪದಲ್ಲಿರುವ ಪುಸ್ತಕಗಳನ್ನು ಇರಿಸಿ ಪೂಜೆ ಸಲ್ಲಿಸಲಾಗುವುದು ಎಂದು ವಿವರಿಸಿದರು.
    ಸಮಿತಿ ಅಧ್ಯಕ್ಷ ಆರ್.ಕೆ.ಸಿದ್ದರಾಮಣ್ಣ, ಉಪಾಧ್ಯಕ್ಷ ಸಚ್ಚಿದಾನಂದ, ಸಂಚಾಲಕ ಸುಬ್ರಹ್ಮಣ್ಯ ಭಟ್, ವಿಎಚ್‌ಪಿ ಜಿಲ್ಲಾಧ್ಯಕ್ಷ ಜೆ.ಆರ್.ವಾಸುದೇವ್, ಪ್ರಮುಖರಾದ ಶಬರೀಷ್ ಕಣ್ಣನ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts