ಡೊನೇಷನ್ ವಸೂಲಿಗೆ ತಡೆ ಹಾಕಿ

ಚಳ್ಳಕೆರೆ: ಅತ್ಯಧಿಕ ಡೊನೇಷನ್ ವಸೂಲಿ ಮಾಡುತ್ತಿರುವ ಖಾಸಗಿ ಶಾಲಾ-ಕಾಲೇಜುಗಳ ಆಡಳಿತ ಮಂಡಳಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ರೈತ ಸಂಘದ ಪದಾಧಿಕಾರಿಗಳು, ಬಿಇಒ ಸಿ.ಎಸ್.ವೆಂಕಟೇಶ್‌ಗೆ ಶಕ್ರವಾರ ಮನವಿ ಸಲ್ಲಿಸಿದರು.

ಶಿಕ್ಷಣದ ಹೆಸರಿನಲ್ಲಿ ವಿದ್ಯಾಸಂಸ್ಥೆಗಳು ಸುಲಿಗೆ ಮಾಡುತ್ತಿವೆ. ಇದರಿಂದ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಸರ್ಕಾರಿ ಶಾಲೆಗಳು ಮೂಲೆಗುಂಪಾಗುತ್ತಿವೆ. ಶಿಕ್ಷಣ ಇಲಾಖೆ ಕೂಡಲೇ ಸರ್ಕಾರ ನಿಗದಿಪಡಿಸಿರುವ ಶುಲ್ಕದ ಮಾಹಿತಿ ಪಟ್ಟಿಯನ್ನು ಸೂಚನಾ ಫಲಕಕ್ಕೆ ಅಳವಡಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸಂಘದ ಜಿಲ್ಲಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ, ಪದಾಧಿಕಾರಿಗಳಾದ ನಾಗರಾಜಪ್ಪ, ತಿಪ್ಪೇಸ್ವಾಮಿ, ಶ್ರೀಕಂಠಮೂರ್ತಿ, ನಾಗರತ್ನಮ್ಮ ಇತರರಿದ್ದರು.