

ಬೆಂಗಳೂರು: ಬಡವರಿಗೆ ಅನ್ಯಾಯ ಮಾಡಿದ್ದ್ಕಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈಗ ವ್ಹೀಲ್ಚೇರ್ನಲ್ಲಿ ಓಡಾಡುತ್ತಿದ್ದಾರೆ. ನಮ್ಮ ಸಮುದಾಯಕ್ಕೆ ಮೋಸ ಮಾಡಿದ್ದಕ್ಕೆ ಮುಂದೊಂದು ದಿನ ವ್ಹೀಲ್ಚೇರ್ ಬದಲು ಬೇರೆ ಚೇರ್ ಬರಲಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಎಚ್ಚರಿಸಿದ್ದಾರೆ.
ಎಸ್ಸಿ-ಎಸ್ಟಿ ಸಮುದಾಯದ ಹಣ ದುರ್ಬಳಕೆ ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ದಲಿತ ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟಿದ್ದ 25 ಸಾವಿರ ಕೋಟಿ ರೂಪಾಯಿ ಹಣವನ್ನ ಲೂಟಿ ಮಾಡಿ ಬಡವರಿಗೆ ಅನ್ಯಾಯ ಮಾಡಲಾಗಿದೆ. ಬಡವರಿಗೆ ಮೋಸ ಮಾಡಿದ್ದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಹೀಲ್ ಚೇರ್ನಲ್ಲಿ ಓಡಾಡುವಂತಾಗಿದೆ.
ದಲಿತರ ಹಣವನ್ನು ನುಂಗಲು ಹೋಗಿ ಅದು ನಿಮ್ಮ ಗಂಟಲಿನಲ್ಲಿ ಸಿಕ್ಕಿ ಹಾಕಿಕೊಂಡಿದೆ. ನಮ್ಮ ಸಮುದಾಯಕ್ಕೆ ಮೋಸ ಮಾಡಿದರೆ ವ್ಹೀಲ್ ಚೇರ್ ಬದಲು ಬೇರೆ ಚೇರ್ನಲ್ಲಿ ಓಡಾಡಬೇಕಾಗುತ್ತದೆ. ಪರಿಶಿಷ್ಟರು ಮೋಜು, ಮಸ್ತಿ ಮಾಡುವುದಿಲ್ಲ. ಆದರೆ, ಅವರಿಗೆ ಮೀಸಲಿಟ್ಟಿದ್ದ ಹಣವನ್ನು ಮುಖ್ಯಮಂತ್ರಿಗಳ ಖಾತೆಗೆ ವರ್ಗಾಯಿಸಲಾಗಿದೆ. ಇದು ದಲಿತ ಸಮುದಾಯಕ್ಕೆ ಮಾಡಿದ ಮೋಸ ಎಂದು ಛಲವಾದಿ ನಾರಾಯಣಸ್ವಾಮಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.